ವಿಜಯ ದರ್ಪಣ ನ್ಯೂಸ್….
ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ತಾವರೆಕೆರೆ : ಹೊಸಕೋಟೆ 2026-27ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಹೊಸಕೋಟೆ ನಗರದ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು.
ತಾಲೂಕಿನ ಸರ್ಕಾರಿ ಹಾಗೂ ಸರ್ಕಾರಿ ಏತರ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿರುವ ಕ್ರೀಡಾಕೂಟಕ್ಕೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ವೀರೇಂದ್ರ ಸಿಂಗ್ ಚಾಲನೆ ನೀಡಿ, ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ತಮ್ಮಲ್ಲಿರುವ ಪ್ರತಿಭೆಯನ್ನು ವಿವಿಧ ಕ್ಷೇತ್ರಗಳಲ್ಲಿ ಪ್ರದರ್ಶಿಸಬೇಕು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಾಲೂಕು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಹೆಸರು ಗಳಿಸುವ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು .
ಈ ಸಂದರ್ಭದಲ್ಲಿ ಮಹದೇವ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರಾಮನಾಥ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವವಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆರೋಗ್ಯದ ಜೊತೆಗೆ ಸ್ಪರ್ಧಾ ಮನೋಭಾವ, ಸಮಯಪ್ರಜ್ಞೆ ಹಾಗೂ ತಂಡದೊಂದಿಗೆ ಕಾರ್ಯನಿರ್ವಹಿಸುವ ಗುಣಗಳು ಬೆಳೆಯುತ್ತವೆ ಶಿಕ್ಷಣದ ಜೊತೆಗೆ ಕ್ರೀಡೆಗಳು ಆದ್ಯತೆ ನೀಡುವ ಮೂಲಕ ಆರೋಗ್ಯವಂತ ಶಿಸ್ತುಭದ್ಧ ಹಾಗೂ ಆತ್ಮವಿಶ್ವಾಸ ಹೊಂದಿರುವ ಯುವ ಪೀಳಿಗೆಯನ್ನು ರೂಪಿಸುವ ನಿಟ್ಟಿನಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಪಟು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಏತರ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ 2,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಬೈರಾರೆಡ್ಡಿ ಕಾರ್ಯದರ್ಶಿ ಪ್ರಾಂಶುಪಾಲರ ಸಂಘ, ಸತೀಶ್ ಪ್ರಾಂಶುಪಾಲರು, ಗಜೇಂದ್ರ ಸರ್, ಎಂ ವಿಶ್ವೇಶ್ವರಯ್ಯ ಪಿಯು ಕಾಲೇಜ್, ಬಾಬುರೆಡ್ಡಿ ಸಮೃದ್ಧಿ ಪಿ ಯು ಕಾಲೇಜ್, ವೆಂಕಟರಾಜು ಕೆಎಸ್‌ವಿಕೆ, ವಿನೋದ್, ಕೃಷ್ಣಪ್ಪ ರಂಗನಾಥ ಪಿಯು ಕಾಲೇಜ್, ಮೋಹನ್ ಅದ್ವೈದ್ಯ ಪಿಯು ಕಾಲೇಜ್, ತ್ರಿಶೀಲ್ ಇಂಡೋ ಸನ್ ರೈಸ್ ಕಾಲೇಜ್, ಶ್ರೀನಿವಾಸ್ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಶಶಿಕಲಾ ಡಾ. ಎಪಿಜೆ ಅಬ್ದುಲ್ ಕಲಾಂ ಕಾಲೇಜ್, ಮಂಜುನಾಥ ಸರ್ಕಾರಿ ಪದವಿ ಪೂರ್ವ ಕಾಲೇಜು ಸೂಲಿಬೆಲೆ, ಸುರೇಶ್ ಮಾರುತಿ ಪದವಿ ಪೂರ್ವ ಕಾಲೇಜು, ಹರೀಶ್ ವೈಷ್ಣವಿ ಪದವಿ ಪೂರ್ವ ಕಾಲೇಜು, ರಮೇಶಪ್ಪ ಹಾಗೂ ತಾಲೂಕು ಪದವೀಧರ ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.










