--Ads--

ಸಂಪನ್ನಗೊಂಡ ತರಂಗಿಣಿ–2K26 ರ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ

On: September 4, 2026 1:02 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಸಂಪನ್ನಗೊಂಡ ತರಂಗಿಣಿ–2K26 ರ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ

ಬೆಂಗಳೂರು :

ಬೆಂಗಳೂರಿನ ಕೆಂಗೇರಿ ಸ್ಯಾಟಲೈಟ್ ಟೌನ್‌ನ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ವತಿಯಿಂದ IQAC ಆಶ್ರಯದಲ್ಲಿ ಆಯೋಜಿಸಿದ್ದ ‘ತರಂಗಿಣಿ–2K26’ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ ಅದ್ದೂರಿಯಾಗಿ ಜರುಗಿತು.

ರಾಜ್ಯದ ವಿವಿಧ ಭಾಗಗಳ ಸುಮಾರು 35 ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾಂಸ್ಕೃತಿಕ, ಕ್ರೀಡಾ ಹಾಗೂ ಬೌದ್ಧಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಸುಪ್ರಸಿದ್ಧ ನಟ–ನಿರ್ಮಾಪಕ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ ಮತ್ತು ಹಾಸ್ಯನಟ ಮಹಾಂತೇಶ್ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾರೋಪದಲ್ಲಿ ನಟ, ಗಾಯಕ ಹಾಗೂ ರಂಗಕಲಾವಿದ ಕಲಾರತಿ ಮಹದೇವ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಸುರಾನಾ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ ಎನ್. ಗೌರವ ಅತಿಥಿಯಾಗಿ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಯಿತು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯರಾಮ ಅವರು ಅಧ್ಯಕ್ಷತೆ ವಹಿಸಿದ್ದರು, ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಮಂಜುನಾಥ್ ಮುಖ್ಯ ಅತಿಥಿಗಳಾಗಿದ್ದರು,

ಸಮಾರಂಭದ ಸಂಯೋಜಕರಾದ ಡಾ.ಪೂರ್ಣಿಮಾ ಎಸ್. ಮತ್ತು ಹರೀಶ್ ಜಿ., ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ತಂಡಭಾವನೆಗೆ ವೇದಿಕೆ ಕಲ್ಪಿಸಿದ ‘ತರಂಗಿಣಿ–2K26’ ಯಶಸ್ವಿಯಾಗಿ ಸಂಪನ್ನಗೊಂಡಿತು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ಕಳಂಕಿತ ಪಶುವೈದ್ಯಾಧಿಕಾರಿ ಮೇಲೆ ಕ್ರಮ, ಪ್ರಾಮಾಣಿಕವಾಗಿ ಆಯ್ಕೆಯಾದ ಪಶುವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿ ಎಂದು ಮನವಿ

ಉದ್ಯಾನಗಳ ಶೇ.5 ಭೂ ಬಳಕೆ ಮಸೂದೆ ವಾಪಸ್‌, ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಬಿನಿ ಕಟ್ಟು ನೀರು ಸಮಸ್ಯೆಗೆ 2 ದಿನದಲ್ಲಿ ಪರಿಹಾರ – ರೈತರ ಬೆಳೆ ರಕ್ಷಣೆಗೆ ಆದ್ಯತೆ : ಸಚಿವ ಚಲುವರಾಯಸ್ವಾಮಿ

ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆ ಪಾಲನ್ನು ಕೇಂದ್ರ ಒದಗಿಸಬೇಕು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯಿಂದ ಅಂಗಾಂಗ ದಾನ ಜಾಗೃತಿ ಅಭಿಯಾನ; ಸಚಿವ ಯು ಟಿ ಖಾದರ್ ಕಾರ್ಯಕ್ರಮಕ್ಕೆ ಚಾಲನೆ