ವಿಜಯ ದರ್ಪಣ ನ್ಯೂಸ್…
ಶಿಡ್ಲಘಟ್ಟ ನಗರದಲ್ಲಿ ಶ್ರೀ ಕೃಷ್ಣಾಷ್ಟಮಿ ಜಯಂತಿ ಶ್ರದ್ಧಾಭಕ್ತಿಯಿಂದ ಆಚರಣೆ

ಶಿಡ್ಲಘಟ್ಟ : ಶ್ರೀಕೃಷ್ಣನು ಧರ್ಮ, ಸತ್ಯ, ನ್ಯಾಯ ಹಾಗೂ ಕರ್ತವ್ಯ ಪಾಲನೆಗೆ ಹೆಚ್ಚಿನ ಮಹತ್ವ ನೀಡಿದ್ದನು ಭಗವದ್ಗೀತೆಯ ಮೂಲಕ ಮನುಷ್ಯನಿಗೆ ಕರ್ಮದ ಮಹತ್ವವನ್ನು ತಿಳಿಸಿಕೊಟ್ಟಿದ್ದಾನೆ ಅವರ ಜೀವನ ಸಂದೇಶಗಳನ್ನು ಇಂದಿನ ಯುವಜನತೆ ಅರಿತುಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣನಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಶ್ರೀಕೃಷ್ಣನ ಜೀವನ ಮತ್ತು ಬೋಧನೆಗಳು
ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ತಹಶೀಲ್ದಾರ್ ಗಗನಸಿಂಧು ಮಾತನಾಡಿ,
ಮಕ್ಕಳಿಗೆ ಶ್ರೀಕೃಷ್ಣನ ಜೀವನ ಹಾಗೂ ಭಗವದ್ಗೀತೆಯ ಸಂದೇಶಗಳನ್ನು ಪರಿಚಯಿಸುವ ಮೂಲಕ ಉತ್ತಮ ಮೌಲ್ಯಗಳನ್ನು ಬೆಳೆಸಬೇಕು ಅವರ ಬೋಧನೆಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಗರದ ಟಿ.ಬಿ.ರಸ್ತೆಯ ಶ್ರೀಕೃಷ್ಣ ದೇವಾಲಯದ ಮುಭಾಗ ಪಲ್ಲಕ್ಕಿಗಳಿಗೆ ಶಾಸಕ ರವಿಕುಮಾರ್ ಹಾಗು ತಹಶಿಲ್ದಾರ್ ಗಗನಸಿಂಧು ,ಬಿಜೆಪಿ ಜಿಲ್ಲಾದ್ಯಕ್ಷ ಸೀಕಲ್ ರಾಮಚಂದ್ರಗೌಡ ,ಸಮುದಾಯದ ಮುಖಂಡರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪಲ್ಲಕ್ಕಿಗಳು ನಗರದಲ್ಲಿ ಮೆರವಣಿಗೆಯಲ್ಲಿ ಸಾಗಿದವು ,
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ ಶ್ರೀಕೃಷ್ಣ ದೇವಾಲಯ, ಕೋಟೆ ವೃತ್ತ, ಮಾರಮ್ಮ ವೃತ್ತದ ಮೂಲಕ ಮಯೂರ ವೃತ್ತ ಮೂಲಕ ಸಾಗಿತು,ವಿವಿಧ ಕಲಾ ತಂಡಗಳಿಂದ ನೃತ್ಯ ಪ್ರದರ್ಶನ ನಡೆಯಿತು,
ಪೂಜಾ ಕಾರ್ಯಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ತಾಲ್ಲೂಕಿನ ಗ್ರಾಮಗಳಿಂದ ಯಾದವ ಸಮುದಾಯದವರು ಹಾಗೂ ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸಿ ಹಬ್ಬವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಚಿಮುಲ್ ಸದಸ್ಯರಾದ ಬಂಕ್ ಮುನಿಯಪ್ಪ, ಹುಜುಗೂರು ರಾಮಣ್ಣ, ಬಿಜೆಪಿ ಜಿಲ್ಲಾದ್ಯಕ್ಷ ಸೀಕಲ್ ರಾಮಚಂದ್ರಗೌಡ ,ಕಾಂಗ್ರೆಸ್ ಮುಖಂಡರಾದ ರಾಜೀವ್ ಗೌಡ ,ಆಂಜಿನಪ್ಪ (ಪುಟ್ಟು),ಸುಭ್ರಮಣಿ,
ವಕಿಲರ ಸಂಘದ ಅದ್ಯಕ್ಷ ನಾರಾಯಣಸ್ವಾಮಿ, ಸರ್ಕಲ್ ಇನ್ಸೆಕ್ಟರ್ ಆನಂದ್ ಕುಮಾರ್ ಸಿ.ಡಿ.ಪಿ.ಒ ವಿದ್ಯಾ ವಸ್ತ್ರದ್, ನಗರಸಭೆ ಆಯುಕ್ತರಾದ ಅಮೃತಾ,ಸೀಕಲ್ ಆನಂದಗೌಡ ,ತಾದೂರು ರಘು , ಗುತ್ತಿಗೆದಾರರಾದ ನಟರಾಜ್ ,ನಗರಸಭೆ ಮಾಜಿ ಸದಸ್ಯ ನಾರಾಯಣಸ್ವಾಮಿ,ಮನೋಹರ್ (ಪುಡ್) ,
ಯಾದವ ಸಂಘದ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷ ಕರಿಯಪ್ಪನವರ ಮೂರ್ತಿ,ಗೌರವಾಧ್ಯಕ್ಷ ರಾಮಕೃಷ್ಣಪ್ಪ ,
ಖಜಾಂಚಿ ನವೀನ್ ಕುಮಾರ್,ಮಾಜಿ ಅಧ್ಯಕ್ಷ ಅಶ್ವತ್ಥಪ್ಪ, ಯುವ ಘಟಕದ ಅಧ್ಯಕ್ಷ ವಿಜಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ನಾಗಚಂದ್ರ ಹಾಗು ತಾಲ್ಲೂಕಿನ ವಿವಿಧ ಗ್ರಾಮಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.










