--Ads--

ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ

On: September 5, 2026 9:57 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದ ಲೆಜೆಂಡ್ಸ್ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಶ್ರೇಷ್ಠ ಶಿಕ್ಷಣ ತಜ್ಞರಾದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಲಾಯಿತು. ಬಳಿಕ ಶಾಲೆಯ ಎಲ್ಲಾ ಶಿಕ್ಷಕರು ಒಗ್ಗೂಡಿ ಕೇಕ್ ಕತ್ತರಿಸುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರು ಯರೇಗೌಡ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಕರ ಮಹತ್ವ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಾಗೂ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಮಹತ್ವ ಹೆಚ್ಚಾಗಿದೆ .ಮಾಜಿ ರಾಷ್ಟ್ರಪತಿ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಈ ದಿನವನ್ನು ಮೀಸಲಿಡಲಾಗಿದೆ. ಸಮಾಜದಲ್ಲಿ ಶಿಕ್ಷಕರ ಅಮೂಲ್ಯ ಕೊಡುಗೆ ಮತ್ತು ಪರಿಶ್ರಮವನ್ನು ಸ್ಮರಿಸಲು ಶಿಕ್ಷಕರ ದಿನಾಚರಣೆ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಶಿಕ್ಷಕರ ದಿನಾಚರಣೆಯು ಶಾಲಾ ವಾತಾವರಣದಲ್ಲಿ ಸಂತಸ ಮತ್ತು ಸಂಭ್ರಮವನ್ನು ಮೂಡಿಸಿತು.

ಶಾಲೆಯ ಮುಖ್ಯ ಶಿಕ್ಷಕರಾದ ಕಲಾವತಿ ಯರೇಗೌಡರವರು ಮಾತನಾಡಿ ಶಾಲಾ ಸಿಬ್ಬಂದಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ತಿಳಿಸಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ತಮ್ಮ ವೃತ್ತಿಯ ಮಹತ್ವವನ್ನು ಸಾರಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now