ವಿಜಯ ದರ್ಪಣ ನ್ಯೂಸ್…..
ನಿರುದ್ಯೋಗಿ ಯುವಕರು ಯುವತಿಯರು ಉದ್ಯೋಗ ಮೇಳಗಳಲ್ಲಿ ಭಾಗವಹಿಸಿ ಉದ್ಯೋಗ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಿ: ಸಚಿವ ಡಾ. ಯತೀಂದ್ರ ಸಿದ್ರಾಮಯ್ಯ ಕರೆ

ತಾಂಡವಪುರ ಸೆಪ್ಟೆಂಬರ್ 5 ಜನಸ್ಪಂದನ ಟ್ರಸ್ಟ್ (ರಿ.) ವತಿಯಿಂದ ಮೈಸೂರು ನಗರದ ಚಿಕ್ಕಮ್ಮಾನಿಕೇತನ ಕಲ್ಯಾಣ ಮಂಟಪದಲ್ಲಿ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಜ್ಯೋತಿ ಬೆಳಗಿಸುವ ಮೂಲಕ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯನವರು ಉದ್ಘಾಟಿಸಿ, ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು
ಬಳಿಕ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಅವರು ಯುವಕ ಯುವಕರಿಗೆ ಉದ್ಯೋಗ ಸಮಸ್ಯೆಯನ್ನು ಹೊರಿತು ಈ ಭಾಗದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡು ಈ ಉದ್ಯೋಗ ಮೇಳದಲ್ಲಿ ಹಲವಾರು ಸ್ಥಳೀಯ ಕಂಪನಿಗಳು ಭಾಗವಹಿಸಿ ಯುವಕ ಯುವತಿಯರ ದಾಖಲೆ ಪಡೆದುಕೊಂಡು ಉದ್ಯೋಗ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಾರೆ ಆ ನಿಟ್ಟಿನಲ್ಲಿ ಮಾಜಿ ಶಾಸಕ ಎಂಕೆ ಸೋಮಶೇಖರ್ ಅವರು ಇಂತಹ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳುವ ಮೂಲಕ ಜನಪರವಾದ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಜನಸ್ಪಂದನ ಟ್ರಸ್ಟಿನ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಹೆಚ್.ಎ. ವೆಂಕಟೇಶ್, ಮಾಜಿ ಮಹಾಪೌರರಾದ ನಾರಾಯಣ್, ಶ್ರೀಮತಿ ಪುಷ್ಪಾಲತಾ ಚಿಕ್ಕಣ್ಣ, ಮಾಜಿ ಉಪ ಮಹಾಪೌರರಾದ ಸಿದ್ದರಾಜು, ನಗರಪಾಲಿಕೆ ಮಾಜಿ ಸದಸ್ಯ ಜೆ.ಗೋಪಿ ಸೇರಿದಂತೆ ಹಲವು ಗಣ್ಯರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಉದ್ಯೋಗ ಆಕಾಂಕ್ಷಿಗಳು ವಿವಿಧ ಕಂಪನಿಯ ಅಧಿಕಾರಿಗಳು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಟಿಕೆ ಬಸವರಾಜ










