ವಿಜಯ ದರ್ಪಣ ನ್ಯೂಸ್…
ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಾರ್ವಜನಿಕರ ಸಹಕಾರ. ಶಾಸಕ ದರ್ಶನ್ ದ್ರುವ ನಾರಾಯಣ್

ತಾಂಡವಪರತಾ ಸಪ್ಟೆಂಬರ್ 6 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಜನರ ಸಮಸ್ಯೆಗಳಿಗೆ ಸರ್ಕಾರವೇ ಸ್ಪಂದಿಸಿ, ಪರಿಹಾರ ಒದಗಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಆಂದೋಲನ ಸಭೆ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರು ಉದ್ಘಾಟನೆ ನೆರವೇರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು
ನಂಜನಗೂಡು ತಾಲೂಕಿನಿ ವಿವಿಧ ಗ್ರಾಮಗಳಿಂದ ಬಂದಿದ್ದ ಸಾರ್ವಜನಿಕರಿಂದ ಅಹವಾಲುಗಳ ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಿ ಪರಿಹಾರ ನೀಡುವ ಮೂಲಕ ಪ್ರಜಾಸೇವೆ ನೂತನ ಕಾರ್ಯಕ್ರಮಕ್ಕೆ ತಾಲ್ಲೂಕಿನಲ್ಲಿ ಚಾಲನೆ ನೀಡಲಾಯಿತು.
ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ನೇರವಾಗಿ ಸಲ್ಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಪಡೆಯಬಹುದು. ಸರ್ಕಾರ ಜನರ ಬಳಿಗೆ ಬಂದು, ಅವರ ಸಮಸ್ಯೆಗಳನ್ನು ಆಲಿಸಿ, ತ್ವರಿತವಾಗಿ ಪರಿಹಾರ ನೀಡುವುದು ‘ಪ್ರಜಾಸೇವೆ’ಯ ಮುಖ್ಯ ಉದ್ದೇಶ. ಎಂದು ಹೇಳಿದರು
ಸರ್ಕಾರವೇ ಜನರ ಬಾಗಿಲಿಗೆ ಬಂದು, ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ಈ ಮಹತ್ವದ ಜನಪರ ಹೆಜ್ಜೆಯ ಮೂಲಕ ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಎಂದು ಶಾಸಕರು ತಿಳಿಸಿದರು
ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸ್ಮಿತಾ ರಾಮು ರವರು, ನಗರಸಭಾ ಆಯುಕ್ತರಾದ ಬಸವರಾಜ್ ರವರು, EO ಜೆರಾಲ್ಡ್ ರಾಜೇಶ್ ರವರು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಖಂಡರುಗಳು ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು











