ವಿಜಯ ದರ್ಪಣ ನ್ಯೂಸ್….
ರಾಷ್ಟ್ರೀಯ ಹೆದ್ದಾರಿ 234 ರ ಹೊಸಹಳ್ಳಿ ಗೇಟ್ ಬಳಿ ಅಪಘಾತ 3 ಮಹಿಳೆಯರು ಸಾವು

ಶಿಡ್ಲಘಟ್ಟ : ಭಾನುವಾರ ರಾತ್ರಿ ಸುಮಾರು 3 ಗಂಟೆಯ ವೇಳೆ ಹೊಸಹಳ್ಳಿ ಗೇಟ್ ಸಮೀಪ ಓಮಿನಿ ಕಾರು ಹಾಗೂ ಈಚರ್ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.
ಒಮಿನಿ ಕಾರ್ ಹಾಗು ಏಚರ್ ಗೂಡ್ಸ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 234ರ ಹೊಸಹಳ್ಳಿ ಗೇಟ್ ಸಮೀಪ ಭಾನುವಾರ ತಡರಾತ್ರಿ ನಡೆದಿದೆ.
ಮೃತರನ್ನು ಚಿಂತಾಮಣಿ ತಾಲ್ಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30) ರತ್ನಮ್ಮ (45) ಹಾಗೂ ಮುನಿಚೆನ್ನಮ್ಮ (40) ಎಂದು ಗುರುತಿಸಲಾಗಿದೆ.
ಮೃತರು ಹೂ ಕಟಾವು ಕೆಲಸಕ್ಕಾಗಿ ಮಲ್ಲಿಕಾರ್ಜುನಪುರದಿಂದ ತಾಲ್ಲೂಕಿನ ಹುಜುಗೂರು ಗ್ರಾಮಕ್ಕೆ ಓಮಿನಿ ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಈ ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








