ವಿಜಯ ದರ್ಪಣ ನ್ಯೂಸ್….
ಸಾದಲಿಯಲ್ಲಿ ‘ಪ್ರಜಾಸೇವೆ’ ಕಾರ್ಯಕ್ರಮ: ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ

ಶಿಡ್ಲಘಟ್ಟ : ಜನರಿಗೆ ತಾವು ಇರುವಲ್ಲಿಯೇ ಸರ್ಕಾರಿ ಸೇವೆ ದೊರೆಯಬೇಕು ಅಧಿಕಾರಿಗಳು ಸ್ವೀಕರಿಸುವ ಅರ್ಜಿಗಳನ್ನು ಪರಿಶೀಲಿಸಿ, ಒಂದು ವಾರದೊಳಗೆ ಸಾಧ್ಯವಾದಷ್ಟು ಸಮಸ್ಯೆಗಳನ್ನು ಪರಿಹರಿಸಬೇಕು ಎಂದು
ಶಾಸಕ ಬಿ.ಎನ್.ರವಿಕುಮಾರ್ ಸೂಚಿಸಿದರು.
ತಾಲ್ಲೂಕಿನ ಸಾದಲಿ ಹೋಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ‘ಪ್ರಜಾಸೇವೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ವೈಯಕ್ತಿಕ ಕೆಲಸಗಳನ್ನು ಬದಿಗೊತ್ತಿ ತಾಲ್ಲೂಕು ಕೇಂದ್ರಕ್ಕೆ ಪದೇಪದೇ ಅಲೆದಾಡುವ ಪರಿಸ್ಥಿತಿ ಇರಬಾರದು ಶೀಪ್ರಗತಿಯಲ್ಲಿ ಅವರ ಕೆಲಸಗಳನ್ನು ಪರೊಲಿಹರಿಸಬೇಕು ಎಂದು ಹೇಳಿದರು.
ಪ್ರಜಾಸೇವೆ ಆಂದೋಲನ ಆರಂಭಿಸುವ ಸಂದರ್ಭದಲ್ಲಿ ಕೆಲ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿತ್ತು ಆದರೆ ಕಾರ್ಯಕ್ರಮದ ಉದ್ದೇಶ ಮತ್ತು ಪ್ರಯೋಜನ ಈಗ ಜನರಿಗೆ ಅರ್ಥವಾಗಿದೆ ಸಾರ್ವಜನಿಕರು ಸಹಕಾರ ನೀಡಿದಾಗ ಮಾತ್ರ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪಲು ಸಾಧ್ಯ ಎಂದರು.
ಸಾದಲಿ ಹೋಬಳಿಯ ತಲಕಾಯಲಬೆಟ್ಟ, ಸಾದಲಿ, ಈ.ತಿಮ್ಮಸಂದ್ರ, ದಿಬ್ಬೂರಹಳ್ಳಿ, ಎಸ್.ದೇವಗಾನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಸೇರಿದ ಗ್ರಾಮಸ್ಥರು ಸಭೆಯಲ್ಲಿ ನೆರೆದಿದ್ದು ಕಂದಾಯ, ಪಂಚಾಯತ್ ರಾಜ್, ಕೃಷಿ, ನೀರಾವರಿ, ತೋಟಗಾರಿಕೆ, ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಒಂದೇ ಸೂರಿನಡಿ ಕುಳಿತು ಜನರ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಸಮಸ್ಯಾದರಿತ ಅರ್ಜಿ ನೀಡಿದ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಅದೇ ರೀತಿಯಾಗಿ‘ರಸ್ತೆ ಒತ್ತುವರಿ ತೆರವು, ಪೌತಿ ಖಾತೆ, ಪಹಣಿ ತಿದ್ದುಪಡಿ, ಖಾತೆ, ಇ-ಸ್ವತ್ತು, ವೃದ್ಧಾಪ್ಯ, ವಿಧವಾ, ಅಂಗವಿಕಲರ ಪಿಂಚಣಿ, ಮನಸ್ವಿನಿ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಸೇರಿದಂತೆ ಎಲ್ಲಾ ರೀತಿಯ ಸೇವೆಗಳನ್ನು ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸುವಂತೆ ಆಗಬೇಕು ಎಂದರು.

ತಹಶೀಲ್ದಾರ್ ಗಗನಸಿಂಧು ಮಾತನಾಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಲಭ್ಯವಿರುವುದರಿಂದ ಜನರು ಒಂದೇ ದಿನದಲ್ಲಿ ಹಲವು ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಪ್ರಜಾಸೇವೆ ಆಂದೋಲನ ದ ಮೂಲಕ ಆಡಳಿತ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ತಾಲ್ಲೂಕಿನ ಇತರ ಹೋಬಳಿಗಳಲ್ಲಿಯೂ ಇಂತಹ ಜನಸ್ಪಂದನ ಸಭೆಗಳನ್ನು ನಡೆಸಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರ ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ತಾಲ್ಲೂಕು ಪಂಚಾಯತಿ ಇಒ. ಆರ್.ಹೇಮಾವತಿ ಮಾತನಾಡಿ, ವಸತಿ ಯೋಜನೆಯಡಿ ಮಂಜೂರಾದ ನಿವೇಶನ ಮತ್ತು ಹಕ್ಕು ಪತ್ರಗಳು, ತಾಲ್ಲೂಕಿನ 28 ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಮತ್ತು ವಿವಿಧ ಯೋಜನೆಗಳ ಬಗ್ಗೆ ಹಾಗು ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಸಭೆಯಲ್ಲಿ ವಿಬಿ-ಜಿ-ರಾಮ್-ಜಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಸಾದಲಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ಸಭೆಯಲ್ಲಿ ತಲಕಾಯಲಬೆಟ್ಟ, ಸಾದಲಿ, ಈ.ತಿಮ್ಮಸಂದ್ರ, ದಿಬ್ಬೂರಹಳ್ಳಿ ಹಾಗೂ ಎಸ್.ದೇವಗಾನಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಎಸ್.ಎಸ್. ಅಬೀದ್, ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸ್ವಾಮಿ, ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ತಾಲ್ಲೂಕು ವಸತಿ ಯೋಜನಾಧಿಕಾರಿ ನಾಗೇಶ್ ,ಮುಖಂಡರಾದ ಶಿವಾರೆಡ್ಡಿ, ಗೋವಿಂದರಾಜು, ಧನಂಜಯರೆಡ್ಡಿ,ನರಸಿಂಹರೆಡ್ಡಿ, ಅಶ್ವತ್ಥರೆಡ್ಡಿ, ವಿಜಯೇಂದ್ರ,ರಾಜ್ಯ ರೈತ ಸಂಘದ ಅಧ್ಯಕ್ಷರುಗಳು,
ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಯವರು, ಸಿಬ್ಬಂದಿ, ಸಾದಲಿ, ಎಸ್.ದೇವಗಾನಹಳ್ಳಿ, ದಿಬ್ಬೂರಹಳ್ಳಿ, ಈ.ತಿಮ್ಮಸಂದ್ರ, ತಲಕಾಯಲಬೆಟ್ಟ ಗ್ರಾಮ ಪಂಚಾಯತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಮತ್ತು ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ ಮತ್ತು ಸಿಬ್ಬಂದಿ, ಟಿಐಇಸಿ, ಎನ್.ಆರ್.ಎಲ್.ಎಂ ಅಧಿಕಾರಿಗಳು & ಸಿಬ್ಬಂದಿ, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಯ ಮಾಜಿ ಹಾಗೂ ಹಾಲಿ ಸದಸ್ಯರು, ಸಾರ್ವಜನಿಕರು ಪಾಲ್ಗೊಂಡಿದ್ದರು.







