--Ads--

“ಶೋಷಿತರ ಹಾಗೂ ಕಲ್ಯಾಣ ಕರ್ನಾಟಕದ ಹಕ್ಕುಗಳಿಗಾಗಿ ‘ಬಳ್ಳಾರಿ ಚಲೋ ”

On: September 11, 2026 8:49 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

“ಶೋಷಿತರ ಹಾಗೂ ಕಲ್ಯಾಣ ಕರ್ನಾಟಕದ ಹಕ್ಕುಗಳಿಗಾಗಿ ‘ಬಳ್ಳಾರಿ ಚಲೋ ”

ಲಿಂಗಸುಗೂರಿನಿಂದ ಆರಂಭಗೊಂಡು ಒಂಬತ್ತು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿದ ಪಕ್ಷದ ಐತಿಹಾಸಿಕ ‘ಬಳ್ಳಾರಿ ಚಲೋ’ ಜನಾಕ್ರೋಶದ ಪಾದಯಾತ್ರೆಯು, ಇಂದು ಬಳ್ಳಾರಿಯಲ್ಲಿ ಅಭೂತಪೂರ್ವ ಬೃಹತ್ ಜನಸಮಾವೇಶದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು ಇದರ ಐತಿಹಾಸಿಕ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ಭ್ರಷ್ಟ ಆಡಳಿತದ ವಿರುದ್ಧ ಧ್ವನಿ ಎತ್ತಲಾಯಿತು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟಿ ಕೋಟಿ ಲೂಟಿ ಹೊಡೆದು ಬಡವರಿಗೆ ಅನ್ಯಾಯ ಎಸಗಲಾಗಿದೆ. ಇದಕ್ಕೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ರೈತ ಸಮುದಾಯಕ್ಕೆ ಎಸಗಿರುವ ವಂಚನೆಯ ಪ್ರತಿಯೊಂದು ಪೈಸೆಯೂ ಮರಳಿ ಸಿಗುವವರೆಗೆ, SCP-TSP ಅನುದಾನದ ದುರ್ಬಳಕೆ ತಡೆಯುವವರೆಗೆ ಹಾಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸೂಕ್ತ ಅನುದಾನ ಬಿಡುಗಡೆಯಾಗುವವರೆಗೆ ನಮ್ಮ ಈ ಹೋರಾಟ ನಿಲ್ಲುವುದಿಲ್ಲ. ಇಂದು ಬಳ್ಳಾರಿಯಲ್ಲಿ ಮೊಳಗಿದ ಜನಾಕ್ರೋಶದ ರಣಕಹಳೆ, ಈ ಜನವಿರೋಧಿ ಸರ್ಕಾರವನ್ನು ಕೆಳಗಿಳಿಸುವವರೆಗೂ ಮುಂದುವರಿಯಲಿದೆ.

ಈ ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ , ಪಕ್ಷದ ರಾಜ್ಯಾಧ್ಯಕ್ಷ  ವಿಜಯೇಂದ್ರ ಯಡಿಯೂರಪ್ಪ  , ರಾಜ್ಯ ಉಸ್ತುವಾರಿಗಳಾದ  ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ , ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ  , ರಾಜ್ಯ ಸಹ ಉಸ್ತುವಾರಿ ಪಂಗುಲೇಟಿ ಸುಧಾಕರ್ ರೆಡ್ಡಿ , ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದ ಬಸವರಾಜು ಬೊಮ್ಮಾಯಿ  , ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ , ಮಾಜಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ , ಮಾಜಿ ಸಚಿವ ಬಿ ಶ್ರೀರಾಮುಲು  , ಶಾಸಕ ಗಾಲಿ ಜನಾರ್ದನ ರೆಡ್ಡಿ  ಸೇರಿದಂತೆ ಶಾಸಕರುಗಳು, ಸಂಸದರು, ಪದಾಧಿಕಾರಿಗಳು ಹಾಗೂ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now