ವಿಜಯ ದರ್ಪಣ ನ್ಯೂಸ್…..
ಪಕ್ಷ ಸಂಘಟನೆಗೆ ಸಹಕಾರ ನೀಡಿ : ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಬಿ ಬಸವಣ್ಣ

ತಾಂಡವಪುರ ಸೆಪ್ಟೆಂಬರ್ 11 ನಿಮ್ಮ ಪ್ರೀತಿ ವಿಶ್ವಾಸ ಅಭಿಮಾನಕ್ಕೆ ನಾನು ಸದಾ ಚಿರಋಣಿ ಅದೇ ರೀತಿ ಪಕ್ಷ ಸಂಘಟನೆಗೂ ಸಹ ಇದೇ ರೀತಿ ಸಹಕಾರ ನೀಡಿ ಎಂದು ಕಾಂಗ್ರೆಸ್ ಪಕ್ಷದ ಮುಖಂಡರಲ್ಲಿ ವಿನಂತಿಸಿದರು.
ಬಿ ಬಸವಣ್ಣನವರ ನಿವಾಸದಲ್ಲಿ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿಯ ಮಾಜಿ ಉಪಾಧ್ಯಕ್ಷ ಬಿ ಶಿವಣ್ಣರವರು ಹಾಗೂ ಮುಖಂಡರು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಗೌರವ ಸ್ವೀಕರಿಸಿ ಮಾತನಾಡಿದ ಬಿ ಬಸವಣ್ಣನವರು ನನ್ನನ್ನು ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲು ಕಾರಣಕರ್ತರಾದ ಪಕ್ಷದ ವರಿಷ್ಠರು ಹಾಗೂ ಮೈಸೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ನಾನು ಈ ಸಮಯದಲ್ಲಿ ನೆನಪು ಮಾಡಿಕೊಳ್ಳುತ್ತಾ ಅವರೆಲ್ಲರಿಗೂ ನಾನು ತುಂಬು ಹೃದಯದ ಧನ್ಯವಾದ ಗಳನ್ನು, ತಿಳಿಸುತ್ತೇನೆ.
ಅದೇ ರೀತಿ ಕಾಂಗ್ರೆಸ್ ಪಕ್ಷದ ವರಿಷ್ಠರು ನನಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ಜವಾಬ್ದಾರಿಯಿಂದ ನಿಭಾಯಿಸುವ ಜೊತೆಗೆ ಪಕ್ಷ ಸಂಘಟನೆ ಮತ್ತು ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪುವ ದಿಕ್ಕಿನಲ್ಲಿ ಸ್ಥಳೀಯ ಮಠದ ಕಾಂಗ್ರೆಸ್ ಮುಖಂಡರ ಜೊತೆಗೂಡಿ ಈ ಎಲ್ಲಾ ಕೆಲಸಗಳನ್ನು ನಾವು ನಿಷ್ಠೆಯಿಂದ ಮಾಡುತ್ತೇನೆ ಇದಕ್ಕೆ ತಮ್ಮೆಲ್ಲರ ಸಹಕಾರ ಬಹಳ ಮುಖ್ಯ ಎಂದು ಬಸವಣ್ಣನವರು ತಿಳಿಸಿದರು.
ಈ ಸಂದರ್ಭದಲ್ಲಿ ತಾಂಡವಪುರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಮುಖಂಡ ಬಿ ಶಿವಣ್ಣ ಅವರು ಹಾಗೂ ಮುಖಂಡರುಗಳು ಹಾಜರಿದ್ದರು










