--Ads--

ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

On: September 13, 2026 4:24 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಹೊಸಕೋಟೆಯಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ

ಜಿಲ್ಲಾಧಿಕಾರಿಗಳಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಹೊಸಕೋಟೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆ.12;

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಜಾ ಸೇವಾ ಆಂದೋಲನದ ಭಾಗವಾಗಿ ಇಂದು ತಾಲ್ಲೂಕು ಮಟ್ಟದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಹೊಸಕೋಟೆ ಟೌನ್ ನ ಯಾದವ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ತಾಲ್ಲೂಕಿನ ನಾನಾ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರ ಕುಂದು ಕೊರತೆ, ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಆಲಿಸಿದರು.

ಜನರಿಂದ ಸ್ವೀಕರಿಸಿದ ಅರ್ಜಿಗಳ ಪೈಕಿ ಸ್ಥಳದಲ್ಲೇ ಪರಿಹಾರ ಸಿಗುವ ಅರ್ಜಿಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಬಾಗಿಲಿಗೆ ಬಂತು ಸರ್ಕಾರ ಸರ್ಕಾರದ ಸೇವೆಗೆ ಇರಲಿ ನಿಮ್ಮ ಸಹಕಾರ ಎಂಬ ಧ್ಯೇಯದೊಂದಿಗೆ ಆರಂಭವಾಗಿರುವ ಪ್ರಜಾ ಸೇವಾ ಇಲಾಖೆಯ ಮೂಲಕ ಪ್ರಜಾ ಸೇವಾ ಆಂದೋಲನ ಸಭೆಯನ್ನು ಪ್ರತಿ ಶನಿವಾರ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗುತ್ತಿದೆ. ಸರ್ಕಾರವೇ ಜನರ ಬಳಿಗೆ ಹೋಗಿ ಅವರ ಕುಂದುಕೊರತೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಪ್ರಜಾ ಸೇವಾ ಇಲಾಖೆ ಕೆಲಸ ಮಾಡಲಿದೆ.

ಸಭೆಯಲ್ಲಿ ಸಿಇಒ ಡಾ ವಾಸಂತಿ ಅಮರ್, ಎಸಿ ಮಂಜುನಾಥ್, ಜಿಪಂ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ, ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 12 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳು ವಶ, ಓರ್ವ ಬಂಧನ

ಅಮಾವಾಸ್ಯೆ ಪ್ರಯುಕ್ತ ಶ್ರೀ ಭದ್ರಕಾಳಿ ಶಕ್ತಿ ಪೀಠದಲ್ಲಿ ವಿಶೇಷ ಪೂಜೆ ಹಾಗೂ ಮಹಾ ಪ್ರತ್ಯಂಗಿರಾ ಹೋಮ

ವಿಕಸಿತ ಭಾರತ ಯುವ ನಾಯಕತ್ವ ಸಂವಾದ-2027 ಭಾಗವಾಗಿ ಯುವಜನತೆಗೆ ಕ್ವಿಜ್ ಸ್ಪರ್ಧೆ ಆಯೋಜನೆ

ಶಾಸಕ ಶರತ್ ಬಚ್ಚೇಗೌಡರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಅಭಿವೃದ್ಧಿ: 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ