ವಿಜಯ ದರ್ಪಣ ನ್ಯೂಸ್…..
ಮೈಸೂರಿನ ಪೌರಕಾರ್ಮಿಕ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದೆ. ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್

ತಾಂಡವಪುರ ಸೆಪ್ಟೆಂಬರ್ 12ಮೈಸೂರಿನ ಪೌರಕಾರ್ಮಿಕ ಸಮುದಾಯ ಭವನದಲ್ಲಿ ಪೌರಕಾರ್ಮಿಕರ ಬೇಡಿಕೆಗಳನ್ನು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿ ಆಲಿಸಿದ ಹಿರಿಯ ಪತ್ರಕರ್ತರು . ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ರವರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು
ಪೌರಕಾರ್ಮಿಕ ಬಂಧುಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಜ್ಞಾನಾರ್ಜನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಲೋನಿಯಲ್ಲಿ ಎರಡು ಗ್ರಂಥಾಲಯವನ್ನು ನನ್ನ ಅನುದಾನದಲ್ಲಿ ನಿರ್ಮಿಸಿಕೊಡಲಾಗುವುದು.
ಶ್ರಮಿಕ ಜೀವಿಗಳಾದ ಪೌರಕಾರ್ಮಿಕರ ಸಮಸ್ಯೆಗಳು ನನಗೆ ಅರಿವಿದೆ. ನಿಮ್ಮೆಲ್ಲರ ಬೇಡಿಕೆಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವರಿಕೆ ಮಾಡುತ್ತೇನೆ.
ನಗರದಲ್ಲಿ ಎರಡು ಸುಸಜ್ಜಿತ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸಲು ಸರ್ಕಾರದ ಗಮನಕ್ಕೆ ತರಲಾಗುವುದು. ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಬಳಿಸಿಕೊಳ್ಳಬೇಕು. ಎಲ್ಲಾ ಬಗೆಯ ಕಲ್ಯಾಣ ಕಾರ್ಯಕ್ರಮಗಳ ಉಪಯೋಗ ಪಡೆದು ಎರಡನೇ ತಲೆಮಾರಿಗೆ ಉನ್ನತ ಉದ್ಯೋಗದಲ್ಲಿರಬೇಕು ಎಂದು ಕಿವಿಮಾತು ಹೇಳಿದರು
ಹಬ್ಬಹರಿದಿನಗಳಲ್ಲಿ ಸಾಲ ಮಾಡಿಕೊಂಡು ದುಬಾರಿ ಖರ್ಚು ಮಾಡಬೇಡಿ. ಕೆಲವರು ದುಶ್ಚಟಗಳಿಗೆ ಒಳಗಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ದುರಭ್ಯಾಸಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಸಲಹೆ ನೀಡಿದರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀನಿವಾಸ, ಮುಖಂಡರಾದ ಮಾರ ಸೇರಿದಂತೆ ಮುಂತಾದವರು ಹಾಜರಿದ್ದರು.











