--Ads--

ಮಾಜಿ ಸಿಎಂ ಸಿದ್ದರಾಮಯ್ಯನವರ ಆಶೀರ್ವಾದ ಪಡೆದ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ

On: September 13, 2026 5:36 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮಾಜಿ ಸಿಎಂ ಸಿದ್ದರಾಮಯ್ಯನವರ ಆಶೀರ್ವಾದ ಪಡೆದ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ

ತಾಂಡವಪುರ ಸೆಪ್ಟೆಂಬರ್ 13 ಮೈಸೂರು ಜಿಲ್ಲಾ ಗ್ರಾಮಂತರ ಜಿಲ್ಲಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬೀರಿಹುಂಡಿ ಬಸವಣ್ಣನವರು ಬೆಂಗಳೂರಿನ ಸಿದ್ದರಾಮಯ್ಯನವರ ಗೃಹಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸನ್ಮನ್ಸಿ ಗೌರವಿಸಿ ಆಶೀರ್ವಾದ ಪಡೆದರು.

ಇದೆ ವೇಳೆ ಸನ್ಮಾನ ಸ್ವೀಕರಿಸಿ ಬಿ ಬಸವಣ್ಣನವರಿಗೆ ಆಶೀರ್ವಾದ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಠದಿಂದ ಸಂಘಟಿಸಿ ಎಲ್ಲ ವರ್ಗದವರನ್ನು ವಿಶ್ವಾಸ ಪಡೆದುಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುವ ಜೊತೆಗೆ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಬಡವರಿಗೆ ರೈತರಿಗೆ ದೀನ ದಲಿತರಿಗೆ ಹಾಗೂ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರ ಯೋಜನೆಗಳು ತಲುಪುವಂತೆ ನೋಡಿಕೊಳ್ಳಿ ಎಂದು ನೂತನ ಅಧ್ಯಕ್ಷರು ಹಾಗೂ ಮುಖಂಡರುಗಳಿಗೆ ಸಿದ್ದರಾಮಯ್ಯನವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕೂರ್ಗಳ್ಳಿ ಮಹದೇವು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಕೇಶ್ ಪಾಪಣ್ಣ ಉದ್ಬೂರು ಕೃಷ್ಣ ಪೆಟ್ರೋಲ್ ಬಂಕ್ ಮಾಲೀಕ ರವಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಗೋಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now