ವಿಜಯ ದರ್ಪಣ ನ್ಯೂಸ್….
ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ತಾವರೆಕೆರೆ : ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಜೈ ಭೀಮ್ ವಿನಾಯಕ ಗೆಳೆಯರ ಬಳಗದ ವತಿಯಿಂದ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಗಣೇಶ ಹಬ್ಬದ ಅಂಗವಾಗಿ ಸುಮಾರು 20 ಅಡಿ ಎತ್ತರದ ಭವ್ಯ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದ್ದು ಹಾಗೂ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಟಿ.ಎಸ್ ರಾಜಶೇಖರ್ ಮಾತನಾಡಿ ಗಣೇಶ ಚತುರ್ಥಿ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದಲ್ಲಿ ಒಗ್ಗಟ್ಟು, ಸಹೋದರತ್ವ ಹಾಗೂ ಸೌಹಾರ್ದತೆಯನ್ನು ಬೆಳೆಸುವಂತಹ ಆಚರಣೆಯಾಗಬೇಕು ಎಂದು ಹೇಳಿದರು.
ಯುವಕರು ಕೇವಲ ಹಬ್ಬ-ಹರಿದಿನಗಳ ಆಚರಣೆಗೆ ಸೀಮಿತವಾಗದೆ, ಗ್ರಾಮದ ಅಭಿವೃದ್ಧಿ, ಸ್ವಚ್ಛತೆ, ಶಿಕ್ಷಣ, ಸಾಮಾಜಿಕ ಜಾಗೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.ಗ್ರಾಮದಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಕೂಡ ಪ್ರಸ್ತಾಪಿಸಿದರು.
ಮಾನ್ಯ ಶಾಸಕ ಶರತ್ ಬಚ್ಚೇಗೌಡರು ಗ್ರಾಮದ ಅಭಿವೃದ್ಧಿಗೆ ಕೈಗೊಂಡಿರುವ ಹಲವು ಕಾಮಗಾರಿಗಳನ್ನು ಸ್ಮರಿಸಿದರು.ವಿಶೇಷವಾಗಿ ಸುಮಾರು 3.5 ಕೋಟಿ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ, ಗ್ರಾಮದ ವಿವಿಧ ಭಾಗಗಳಲ್ಲಿ ಐಮಾಸ್ಕ್ ಲೈಟ್‌ಗಳ ಅಳವಡಿಕೆ, ಸಿಸಿ ರಸ್ತೆ ನಿರ್ಮಾಣ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿರುವುದನ್ನು ಅವರು ಉಲ್ಲೇಖಿಸಿದರು.
ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಅವರು ಕಾರ್ಯಕ್ರಮದ ಮೂಲಕ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಹೊಸಕೋಟೆ ತಾಲೂಕು ಯೋಜನಾ ಪ್ರಾಧಿಕಾರದ ಸದಸ್ಯ ಎಚ್.ಎಂ. ಸುಬ್ಬರಾಜು ಅವರು ಮಾತನಾಡಿ, ಸಾರ್ವಜನಿಕ ಗಣೇಶೋತ್ಸವದ ಐತಿಹಾಸಿಕ ಹಿನ್ನೆಲೆಯನ್ನು ಸ್ಮರಿಸಿದರು.ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬಾಲಗಂಗಾಧರ ತಿಲಕರು ಸಾರ್ವಜನಿಕ ಗಣೇಶೋತ್ಸವಕ್ಕೆ ಚಾಲನೆ ನೀಡುವ ಮೂಲಕ ಜನರನ್ನು ಒಗ್ಗೂಡಿಸುವ ಪ್ರಯತ್ನ ಮಾಡಿದ್ದರು.ಅಂದಿನಿಂದಲೂ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಪರಂಪರೆ ವಿವಿಧ ಭಾಗಗಳಲ್ಲಿ ಮುಂದುವರಿದುಕೊಂಡು ಬಂದಿದೆ ಎಂದು ಅವರು ತಿಳಿಸಿದರು.ಇಂದಿಗೂ ಗಣೇಶೋತ್ಸವವು ಜನರನ್ನು ಒಂದುಗೂಡಿಸುವ ಪ್ರಮುಖ ಸಾಂಸ್ಕೃತಿಕ ಆಚರಣೆಯಾಗಿ ಮುಂದುವರಿದಿದೆ.
ತಾವರೆಕೆರೆ ಗ್ರಾಮದಲ್ಲಿಯೂ ಯುವಕರು ಹಾಗೂ ಗ್ರಾಮಸ್ಥರು ಒಗ್ಗಟ್ಟಿನಿಂದ ಗಣೇಶೋತ್ಸವವನ್ನು ಆಯೋಜಿಸಿರುವುದು ಸಂತಸದ ವಿಚಾರವಾಗಿದೆ ಎಂದು ಹೇಳಿದರು.
ತಾವರೆಕೆರೆ ಗ್ರಾಮದಲ್ಲಿ ಈ ಬಾರಿ 20 ಅಡಿ ಎತ್ತರದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿರುವುದು ವಿಶೇಷ ಆಕರ್ಷಣೆಯಾಗಿದ್ದು, ತಾಲೂಕಿನಲ್ಲಿಯೇ ಎತ್ತರದ ಗಣೇಶ ಮೂರ್ತಿಗಳ ಪೈಕಿ ಪ್ರಮುಖವಾಗಿ ಗಮನ ಸೆಳೆಯುತ್ತಿದೆ ಎಂದು ಎಚ್.ಎಂ. ಸುಬ್ಬರಾಜು ಹೇಳಿದರು.
ಗಣೇಶೋತ್ಸವದ ಮೂಲಕ ಯುವಕರಲ್ಲಿ ಸಂಘಟನಾ ಮನೋಭಾವ ಬೆಳೆಸುವುದರ ಜೊತೆಗೆ, ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಅವರು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಬಿವಿ ರಾಜಶೇಖರ್ ಗೌಡರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ರವಿಕುಮಾರ್, ಪವಿತ್ರ ಮಂಜುನಾಥ್, ಗುರುಬಸಪ್ಪ, ಡಿ ನರಸಿಂಹಯ್ಯ, ಯಲಚಹಳ್ಳಿ ದೇವರಾಜ್, ಮಮತಾ ಮಂಜುನಾಥ್, ವೆಂಕಟೇಶ್, ಜಿಯಾವುಲ್ಲ, ವೀರಭದ್ರ ಚಾರಿ, ನ್ಯಾನಮೂರ್ತಿ, ಲೋಕೇಶ್, ರವಿ , ಚಿನ್ನಪ್ಪ ಕಾರ್ಯಕ್ರಮದ ಆಯೋಜಕರಾದ ಕಿರಣ್, ಮಂಜುನಾಥ್ ಟಿ.ಕೆ ಹಾಗೂ ಶಿವ, ಸಂಜಯ್, ಶಂಕರ್, ಗಗನ್, ಮುರಳಿ, ವೆಂಕಟೇಶ್ ಗ್ರಾಮಸ್ಥರು ಹಾಗೂ ಜೈ ಭೀಮ್ ವಿನಾಯಕ ಗೆಳೆಯರ ಬಳಗದ ಎಲ್ಲ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.











