ಮಂಗಳೂರು ಬಜ್ಪೆಯಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ ‘ಹಜ್ ಭವನ’ದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಬಾಗಿ
ಮಂಗಳೂರು : ಸೆಪ್ಟೆಂಬರ್ 17 ಮಂಗಳೂರು ಬಜ್ಪೆಯಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ ‘ಹಜ್ ಭವನ’ದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಬಾಗಿ ಹಾಗಿ ಸಚಿವರಾದ ಯುಟಿ ಖಾದರ್ ಮತ್ತು ಮುಖಂಡರು ನೀಡಿದ ಸಮಾನವನ್ನು ಸ್ವೀಕರಿಸಿದರು.
ಬಳಿಕ ಮಾತನಾಡಿದ ಸಚಿವರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಯೋಜನೆಯ ಸಾಕಾರಕ್ಕಾಗಿ ₹20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಸಮಾಜದ ಪ್ರತಿಯೊಂದು ಸಮುದಾಯವನ್ನು ಸಮಾನವಾಗಿ ಬೆಳೆಸಿ, ಒಗ್ಗೂಡಿಸಿಕೊಂಡು ಹೋಗುವುದೇ ನಮ್ಮ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.
ಈ ಶುಭ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಗುರುಗಳಾದ ಹಝ್ರತ್ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಗಲ್ ಸಾಹೇಬ್, ದಕ್ಷಿಣ ಕನ್ನಡ ಜಿಲ್ಲೆಯ ಖಾಜಿ ಹಝ್ರತ್ ಪಣಕ್ಕಾಡ್ ಸಯ್ಯಿದ್ ನಾಸಿರ್ ಅಬ್ದುಲ್ ಹಯ್ಯ್ ಶಿಹಾಬುದ್ದೀನ್ ಬಾ-ಅಲವಿ ತಂಗಲ್ ಹಾಗೂ ಮುಫ್ತಿ ಇಫ್ತಿಕಾರ್ ಅಹ್ಮದ್ ಸಾಹೇಬ್ ಅವರ ಉಪಸ್ಥಿತಿ ಕಾರ್ಯಕ್ರಮಕ್ಕೆ ಮೆರುಗು ತಂದಿತು. ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ ಸಚಿವರು
ಹಜ್ ಭವನದ ನಿರ್ಮಾಣಕ್ಕಾಗಿ ಅತ್ಯಂತ ಉದಾರವಾಗಿ ಜಮೀನನ್ನು ದಾನವಾಗಿ ನೀಡಿದ ಶ್ರೀ ಇನಾಯತ್ ಅಲಿ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ, ಅಭಿನಂದಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು. ಟಿ. ಖಾದರ್, ವಸತಿ ಸಚಿವದ ಬಿ. ಜೆಡ್. ಜಮೀರ್ ಅಹ್ಮದ್ ಖಾನ್, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಮಂಗಳೂರು ಹಜ್ ನಿರ್ವಹಣಾ ಸಮಿತಿ ಅಧ್ಯಕ್ಷ ಯೆನೆಪೋಯ ಅಬ್ದುಲ್ಲ ಕುಂಞಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಕೆ. ಅಲ್ತಾಫ್ ಖಾನ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸಯ್ಯಿದ್ ಮೊಹಮ್ಮದ್ ಅಲಿ ಅಲ್ ಹುಸೇನಿ ಸೇರಿದಂತೆ ಹಲವು ಗಣ್ಯರು ಮುಖಂಡರುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು