--Ads--

ರಾಜ್ಯದಲ್ಲೇ ನಂಬರ್-1: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಪ್ರಥಮ ಬಹುಮಾನ

On: September 18, 2026 4:22 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ರಾಜ್ಯದಲ್ಲೇ ನಂಬರ್-1: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಪ್ರಥಮ ಬಹುಮಾನ

ಅಪೆಕ್ಸ್ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಸಿಇಒ ವನಜಾಕ್ಷಿಗೆ ಪ್ರಶಸ್ತಿ ಪ್ರದಾನ

ಮಂಡ್ಯ, ಸೆ.18: 2025-26ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಹಕಾರ ಬ್ಯಾಂಕ್ ಆಗಿ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು (DCC) ರಾಜ್ಯದಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದಲ್ಲಿ ಗಮನ ಸೆಳೆದಿದೆ.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯು ದಿನಾಂಕ 18-09-2026 ರಂದು ನಡೆದಿದ್ದು, ಈ ಸಮಾರಂಭದಲ್ಲಿ ಮಂಡ್ಯ DCC ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಸನ್ಮಾನಿಸಲಾಗಿದೆ.

ಬ್ಯಾಂಕಿನ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಿ.ವನಜಾಕ್ಷಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಬ್ಯಾಂಕು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು ಹಾಗೂ ಬ್ಯಾಂಕಿನ ಸಮಸ್ತ ಸಿಬ್ಬಂದಿ ವರ್ಗದವರಿಗೆ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಯುವನಿಧಿ ಯೋಜನೆಗೆ ಆನ್‌ ಲೈನ್ ನಲ್ಲಿ ‌ ನೋಂದಣಿ

ಬೆಂಗಳೂರು ಗ್ರಾಮಾಂತರಜಿಲ್ಲೆ ಸೆಪ್ಟೆಂಬರ್ 18 :

2025-2026 ನೇ ಸಾಲಿನಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಪ್ರಯೋಜನೆ ಪಡೆಯಲು ಆನ್ಲೈನ್ ನಲ್ಲಿ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಯಡಿಯಲ್ಲಿ ಶೈಕ್ಷಣಿಕ ಸಾಲಿನಲ್ಲಿ ತೇರ್ಗಡೆ ಆಗಿ ಉದ್ಯೋಗ ಲಭಿಸದ ಪದವೀಧರರಿಗೆ (ವೃತ್ತಿಪರ ಕೋರ್ಸ್ಗಳು ಸೇರಿದಂತೆ) ಪ್ರತಿ ತಿಂಗಳು ರೂ. 3000 ಹಾಗೂ ಡಿಪ್ಲೋಮಾ ಪಾಸಾದವರಿಗೆ ಪ್ರತಿ ತಿಂಗಳು ರೂ.1500
ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು
https://sevaone.karnataka.gov.in ನಲ್ಲಿ‌ ನೋಂದಾಯಿಸಿಕೊಳ್ಳಬಹುದು.

ಪದವಿ/ಡಿಪ್ಲೋಮಾ ತೇರ್ಗಡೆ ಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 1ರಿಂದ25ನೇ ತಾರೀಖಿನೊಳಗೆ ಘೋಷಣೆಯನ್ನು ಅನ್‌ಲೈನ್‌ನಲ್ಲಿ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:1800-599-7154 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ಬೀರಸಂದ್ರ ಗ್ರಾಮ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ: 132, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕನ್ಯಾಘಟ್ಟದಲ್ಲಿ 100 ಸಾರಿಗೆ ಬಸ್‌ಗಳ ಭರವಸೆ : ದೇವಸ್ಥಾನ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಸಚಿವ ಭೈರತಿ ಸುರೇಶ್ ಘೋಷಣೆ

“ಕಾವೇರಿ ವಿಚಾರದಲ್ಲಿ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ – ಸೋಮವಾರ ಸುಪ್ರೀಂನಲ್ಲಿ ನಿರ್ಣಾಯಕ ಹೋರಾಟ: ಸಚಿವ ಚಲುವರಾಯಸ್ವಾಮಿ”

ಸಿಎಂ ಡಿ.ಕೆ. ಶಿವಕುಮಾರ್ ಸರ್ಕಾರದ 100 ದಿನಗಳ ಸಂಭ್ರಮ – ವಿದ್ಯುತ್ ದೀಪಗಳಿಂದ ಝಗಮಗಿಸಿದ ಕೃಷ್ಣರಾಜಸಾಗರ”

ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕ – ಅಭಿನಂದಿಸಿದ ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿ ಮಕ್ಕಳ 17 ನೇ ಸಾಂಸ್ಕೃತಿಕ ಸಮ್ಮೇಳನ. ಕರ್ನಾಟಕದ ಸಾಂಸ್ಕೃತಿಕ ವೈಭವಕ್ಕೆ ಪರಂಪರೆ ಇದೆ : ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರ ಅಭಿಮತ

ಗ್ಯಾರಂಟಿ ಯೋಜನೆಗಳ ಮೂಲಕ ₹1,500 ಕೋಟಿ ಹಣ ಅರ್ಹರ ಖಾತೆಗೆ: ಎನ್. ಚಲುವರಾಯಸ್ವಾಮಿ