--Ads--

ದೊಡ್ಡಬಳ್ಳಾಪುರ ಬರ ಪೀಡಿತ ತಾಲ್ಲೂಕು ಘೋಷಣೆಗೆ ಸರ್ಕಾರಕ್ಕೆ ವರದಿ: ಸಚಿವ ಕೆ.ಹೆಚ್ ಮುನಿಯಪ್ಪ

On: September 19, 2026 6:24 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….‌

ಕನಸವಾಡಿಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ

ದೊಡ್ಡಬಳ್ಳಾಪುರ ಬರ ಪೀಡಿತ ತಾಲ್ಲೂಕು ಘೋಷಣೆಗೆ ಸರ್ಕಾರಕ್ಕೆ ವರದಿ: ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ ಬೆಂಗಳೂರು ಗ್ರಾ ಜಿಲ್ಲೆ ಸೆ.19:

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದ ಬೆಳೆಗಳು ಹಾನಿಯಾಗಿದ್ದು ಈಗಾಗಲೇ ಮೊದಲ ಪಟ್ಟಿಯಲ್ಲಿ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿದ್ದು ದೊಡ್ಡಬಳ್ಳಾಪುರವನ್ನು ಬರ ಪೀಡಿತ ತಾಲ್ಲೂಕನ್ನಾಗಿ ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ‌ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು

ಮೊದಲ ಪಟ್ಟಿಯಲ್ಲಿ ಮೂರು ತಾಲ್ಲೂಕುಗಳು ಬೇರೆ ಪೀಡಿತ ಎಂದು ಘೋಷಣೆಯಾಗಿ ದೊಡ್ಡಬಳ್ಳಾಪುರ ಹಾಗೆ ಉಳಿದಿದ್ದು ನನಗೆ ಆಶ್ಚರ್ಯ ತಂದಿದೆ. ದೊಡ್ಡಬಳ್ಳಾಪುರದಲ್ಲಿಯೂ ಕೂಡ ಮಳೆ ಕೊರತೆಯಿಂದ ಬೆಳೆಗಳು ಹಾನಿಯಾಗಿವೆ. ಈಗಾಗಲೇ ಮಾನ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ, ಕಂದಾಯ ಸಚಿವರಾದ ಪರಮೇಶ್ವರ್ ಅವರಿಗೆ ದೊಡ್ಡಬಳ್ಳಾಪುರವನ್ನು ಬರಪೀಡಿತ ತಾಲೂಕು ಪಟ್ಟಿಗೆ ಸೇರಿಸಲು ತಿಳಿಸಿದ್ದೇನೆ. ಜೊತೆಗೆ ಜಿಲ್ಲಾಡಳಿತದಿಂದ ವರದಿ ಸಲ್ಲಿಸಲಾಗುವುದು ಎಂದರು.

ಅಧಿಕಾರಿಗಳೇ ಜನರ ಬಳಿಗೆ ಹೋಗಿ ಅವರ ಸಮಸ್ಯೆ ಆಲಿಸಬೇಕು, ತಾಲ್ಲೂಕು ಜಿಲ್ಲಾ ಮಟ್ಟದ ಅಧಿಕಾರಿಗಳು ಆ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂಬುದು ಪ್ರಜಾ ಸೇವಾ ಆಂದೋಲನ ಸಭೆಯ ಮುಖ್ಯ ಉದ್ದೇಶ. ಜನರ ಕಷ್ಟ, ಸಮಸ್ಯೆ ಬಗೆಹರಿಸಲು ಜನಪ್ರತಿನಿಧಿಗಳಾದ ನಾವು, ಅಧಿಕಾರಿಗಳು ಇರುವುದು. ಪ್ರತಿ ಶನಿವಾರ ಪ್ರಜಾ ಸೇವಾ ಆಂದೋಲನ ಸಭೆ ನಡೆಯಲಿದ್ದು ಜನರ ಅಹವಾಲು ಸ್ವೀಕರಿಸಿ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು.

ಭಾರತ್ ಜೋಡೋ ಸಂಘಗಳಿಗೆ ಪಕ್ಷಾತೀತವಾಗಿ ಎಲ್ಲಾ ವರ್ಗದವರು ಸೇರಬಹುದು. ಯುವ ಸಮೂಹವನ್ನು ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡಾ ಚಟುವಟಿಕೆಗಳ ಮೂಲಕ ಒಗ್ಗೂಡಿಸುವುದು ಭಾರತ್ ಜೋಡೋ ಯುವ ಸಂಘಗಳ ಉದ್ದೇಶ. ಪ್ರತಿಯೊಬ್ಬ ಯುವಕರು ಭಾರತ್ ಜೋಡೋ ಸಂಘಗಳಿಗೆ ಸದಸ್ಯತ್ವ ಪಡೆದುಕೊಳ್ಳಬೇಕು ಎಂದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಮಾತನಾಡಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿವೇಶನ ಅಭಿವೃದ್ಧಿಗೆ 540 ಎಕರೆ ಗುರುತಿಸಲಾಗಿದೆ. ತಾಲ್ಲೂಕಿಗೆ 12,000 ನಿವೇಶನ, 7800 ಮನೆ ಅವಶ್ಯಕತೆ ಇದೆ. 500 ನಿವೇಶನ ಮಂಜೂರಾಗಿದ್ದರು ಇನ್ನೂ ಬಿಡುಗಡೆ ಆಗಿಲ್ಲ. ಕನಿಷ್ಟ 2500 ಮನೆ ತಕ್ಷಣ ಮಂಜೂರು ಮಾಡಲು ಸಚಿವರಿಗೆ ಮನವಿ ಮಾಡಿದರು.

ಮದ್ಯ ಮಾರಾಟ ಹಾವಳಿ ಹೆಚ್ಚಳ
ದೊಡ್ಡಬಳ್ಳಾಪುರದ ಪ್ರತಿ ಹಳ್ಳಿಯ ಚಿಲ್ಲರೆ ಅಂಗಡಿಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟವಾಗುತ್ತಿದೆ. ಲೈಸೆನ್ಸ್ ಬಾರ್ ಗಳೇ ಮದ್ಯ ಸರಬರಾಜು ಮಾಡುತ್ತಿವೆ. ಯಾರು ಸರಬರಾಜು ಮಾಡುತ್ತಿದ್ದಾರೆ ಅವರ ಬಾರ್ ಲೈಸೆನ್ಸ್ ರದ್ದು ಮಾಡಿ ಕಾನೂನು ಕ್ರಮ ಜರುಗಿಸಿ. ಮದ್ಯ ಸೇವನೆಯಿಂದ ಯುವಕರೇ ಹೆಚ್ಚು ಹಾಳಾಗುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಸಕರು ಸಚಿವರಿಗೆ ತಿಳಿಸಿದರು. ಸಚಿವರು ಪ್ರತಿಕ್ರಿಯಿಸಿ ಶಾಸಕರ ಮನವಿಯನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಾಜಿ ಶಾಸಕರು ಹಾಗೂ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೆಂಕಟರಮಣಯ್ಯ, ಸಿಇಒ ಡಾ ವಾಸಂತಿ ಅಮರ್, ಎಸ್ಪಿ ಚಂದ್ರಕಾಂತ್ ಎಂ.ವಿ, ಎಸಿ ಮಂಜುನಾಥ್, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now