--Ads--

ಸೆಪ್ಟೆಂಬರ್ 28 ರಂದು ಮಾಕಳಿ ದುರ್ಗಾ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

On: September 21, 2026 1:11 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಸೆಪ್ಟೆಂಬರ್ 28 ರಂದು ಮಾಕಳಿ ದುರ್ಗಾ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಸೆ. 21:

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ 28 ರಂದು ದೊಡ್ಡಬಳ್ಳಾಪುರ ತಾಲ್ಲೂಕು ಮಾಕಳಿ ದುರ್ಗಾ ಬೆಟ್ಟದಲ್ಲಿ ಆಯೋಜಿಸಲಾಗುತ್ತಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರವಾಸೋದ್ಯಮ ಅಭಿವೃದ್ಧಿ ಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ದಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ ಎಂಬ ಸಂದೇಶದೊಂದಿಗೆ ಈ ವರ್ಷ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳು, ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮ ವಹಿಸಬೇಕು.

ಕಾರ್ಯಕ್ರಮದಲ್ಲಿ ಲಘು ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಸುರಕ್ಷತೆ ಒದಗಿಸುವುದು ಹಾಗೂ ರೈಲ್ವೆ ಟ್ರಾಕ್ ಬಳಿ ಸುರಕ್ಷಿತವಾಗಿ ಸಂಚರಿಸಲು ಮಾರ್ಗದರ್ಶನ ,ಮೊಬೈಲ್ ಕ್ಲಿನಿಕ್ ಮತ್ತು ಪ್ರಥಮ ಚಿಕಿತ್ಸೆಕರ ತಂಡವನ್ನು ಒದಗಿಸುವುದು, ಪ್ರಚಾರ ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡಲು ಜಾಗವನ್ನು ಗುರುತಿಸುವುದು, ಸಸಿಗಳನ್ನು ಸೂಕ್ತ ಜಾಗಕ್ಕೆ ತಕ್ಕಂತೆ ಆಯ್ಕೆ ಮಾಡಿ ನೆಡಬೇಕು ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಸಬೇಕು ಹಾಗೂ ಮಾಕಳಿ ದುರ್ಗಾ ಬೆಟ್ಟದಲ್ಲಿ ಟ್ರಕಿಂಗ್ ಮಾಡಲು 10 ಜನ ಜೇತನಾ ತಂಡವನ್ನು ಕರೆತರಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ , ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಪ್ರೀತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಂಸ್ಕೃತಿಕ ಸ್ಪರ್ಧೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ. 21:

ವಿಕಲಚೇತನರ ಹಾಗೂ ಹಿರಿಯ ನಗರಿಕರ ಸಬಲೀಕರಣ ಇಲಾಖೆಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2026 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಏರ್ಪಡಿಸಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಪ್ರತ್ಯೇಕವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರ ಟೌನ್‌ನಲ್ಲಿರುವ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 23 ಬೆಳಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.

ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಬಿರುಸಿನ ನಡಿಗೆ, ಬಕೆಟ್ ನಲ್ಲಿ ಬಾಲ್ ಎಸೆಯುವುದು, ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ, ತೃತೀಯ ಪ್ರಶಸ್ತಿ ಪತ್ರ ಮತ್ತು ಪದಕಗಳನ್ನು ನೀಡಲಾಗುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗುವುದು ಹಾಗೂ ಒಬ್ಬ ವ್ಯಕ್ತಿಯು 1 ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾಕೇಂದ್ರ ದೂರವಾಣಿ ಸಂಖ್ಯೆ: 080- 29787441 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲೂಕು, ಬೀರಸಂದ್ರ ಗ್ರಾಮ, ಜಿಲ್ಲಾಡಳಿತ ಭವನ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಲು ಅಂಗವಿಕಲರ ಕಲ್ಯಾಣಾಧಿಕಾರಿ ಅರುಣ್ ಕುಮಾರ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ತಾವರೆಕೆರೆಯಲ್ಲಿ ಅದ್ಧೂರಿಯಾಗಿ ಜೈ ಭೀಮ್ ವಿನಾಯಕ ಗೆಳೆಯರ ಬಳಗದ 27ನೇ ವರ್ಷದ ಗಣೇಶೋತ್ಸವ

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ಹೊಸಕೋಟೆಯಲ್ಲಿ ಮತದಾರರ ಜಾಗೃತಿ ಮ್ಯಾರಾಥಾನ್ ಹಾಗೂ SIR ವಿಶೇಷ ಆಂದೋಲನಕ್ಕೆ ಜಿ. ಪಂ. ಸಿಇಒ ಡಾ.ವಾಸಂತಿ ಅಮರ್ ಚಾಲನೆ

ದೇವನಹಳ್ಳಿ ತಾಲ್ಲೂಕು ಆಡಳಿತ ಸೌಧದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ತಾವರೆಕೆರೆಯಲ್ಲಿ ಅದ್ಧೂರಿ ಗಣೇಶೋತ್ಸವ ಜೈ ಭೀಮ್ ವಿನಾಯಕ ಗೆಳೆಯರ ಬಳಗದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ : ರಸಮಂಜರಿ ಕಾರ್ಯಕ್ರಮಕ್ಕೆ ಮೆರುಗು

ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ: ಮತದಾರರ ನೋಂದಣಾಧಿಕಾರಿ (ERO)