--Ads--

ಹಾಡಹಗಲೇ ಕಳ್ಳರು ಮನೆಗೆ ನುಗ್ಗಿ ಕಳವು ಪರಾರಿ

On: September 22, 2026 5:35 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಹಾಡಹಗಲೇ ಕಳ್ಳರು ಮನೆಗೆ ನುಗ್ಗಿ ಕಳವು ಪರಾರಿ

ಶಿಡ್ಲಘಟ್ಟ : ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಗ್ರಾಮದ ಕೃಷ್ಣಪ್ಪ ಮತ್ತು ನಾರಾಯಣಮ್ಮ ದಂಪತಿ ಕುರಿ ಮೇಯಿಸಲು ತೆರಳಿದ್ದ ಸಂದರ್ಭದಲ್ಲಿ ಬೆಳಿಗ್ಗೆ 9ರಿಂದ 10ರ ನಡುವೆ ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ ಎನ್ನಲಾಗಿದೆ.

ಬಳಿಕ ಬೀರು ಒಡೆದು ಅದರಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ.

ದೂರಿನನ್ವಯ ಸರ್ಕಲ್ ಇನ್‌ಸ್ಪೆಕ್ಟರ್ ಆನಂದ್ ಕುಮಾರ್, ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿ.ಎಸ್.ಐ.ಸುನಿಲ್‌ ಕುಮಾ‌ರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ,ಜಿಲ್ಲಾ ಬೆರಳಚ್ಚು ತಜ್ಞರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಬೆಂಗಳೂರು ತಜ್ಞರಿಂದ ಬೆಳವಣಿಗೆ ವಿಳಂಬ ಹೊಂದಿರುವ ಮಕ್ಕಳಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ತಪಾಸಣಾ ಶಿಬಿರ

ಮಳ್ಳೂರಿನ ಡಾ.ಪುವ್ವಾಡ ಸಂದೀಪ್ ಅವರಿಗೆ 2025-26ನೇ ಶೈಕ್ಷಣಿಕ ಸಾಲಿನ “ವಾರ್ಷಿಕ ಆದರ್ಶ ಶಿಕ್ಷಕ ಪ್ರಶಸ್ತಿ” ಪ್ರಧಾನ

ಸಾಲ ವಸೂಲಾತಿ ಕೊರತೆಯಿಂದ ಪಿ.ಎಲ್.ಡಿ. ಬ್ಯಾಂಕ್ 8 ಕೋಟಿ ರೂ. ನಷ್ಟದಲ್ಲಿದೆ: ಬಂಕ್ ಮುನಿಯಪ್ಪ

ಪ್ರಧಾನಿ ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ 10 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ “ಆಶೀರ್ವಾದದ ದೀಪ” ಕಾರ್ಯಕ್ರಮ ಭಕ್ತಿಭಾವ ಸಂಭ್ರಮದಿಂದ ಆಚರಣೆ

ರೇಷ್ಮೆ ಆಧಾರಿತ ಕೈಗಾರಿಕೆಗಳು, ಮಹಿಳೆಯರಿಗೆ ಗಾರ್ಮೆಂಟ್ಸ್ ತಾಲ್ಲೂಕಿನಲ್ಲೇ ಸ್ಥಾಪಿಸಬೇಕು : ಸಾಮಾಜಿಕ ಹೋರಾಟಗಾರ ನವಾಜ್ ಪಾಷ

ಹಿರಿಯರಿಗೆ ಹಾಗೂ ದಿವ್ಯಾಂಗರಿಗೆ ಆತ್ಮವಿಶ್ವಾಸ ನೀಡುವ ಕೆಲಸದಲ್ಲಿ ಸಾರ್ಥಕತೆಯ ಭಾವ: ಸಂಸದ ಡಾ.ಕೆ.ಸುಧಾಕರ್‌