--Ads--

ದೊಡ್ಡಬೆಳವಂಗಲ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ:ಸಿಇಒ ಡಾ. ವಾಸಂತಿ ಅಮರ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

On: September 26, 2026 1:10 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ದೊಡ್ಡಬೆಳವಂಗಲ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ:ಸಿಇಒ ಡಾ. ವಾಸಂತಿ ಅಮರ್ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೆ.26:

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು ಸಾರ್ವಜನಿಕರ ಅಹವಾಲು ಆಲಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಸಭೆಯಲ್ಲಿ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ, ಸಮಸ್ಯೆಗಳ ಬಗ್ಗೆ ಮಾಹಿತಿ ಆಲಿಸಿದ ಸಿಇಒ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆ ಜಾರಿ ಇರುವುದರಿಂದ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿಲ್ಲ. ಸಾರ್ವಜನಿಕರ ಅರ್ಜಿ ಸ್ವೀಕಾರಕ್ಕೆ ಇಲಾಖೆವಾರು ಕೌಂಟರ್ಗಳನ್ನು ತೆರೆಯಲಾಗಿದೆ. ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸ್ವೀಕೃತಿವಾಗುವ ಅರ್ಜಿಗಳಿಗೆ ಸಂಬಂಧಿಸಿದಂತೆ ಅರ್ಜಿದಾರರಿಗೆ ಎಂಡಾರ್ಸಮೆಂಟ್(ಸ್ವೀಕೃತಿ ಪ್ರತಿ) ನೀಡಲಾಗುವುದು. ಕಾನೂನು ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು 30 ದಿನದೊಳಗೆ ವಿಲೇವಾರಿ ಮಾಡಲು ಕ್ರಮ ವಹಿಸಲಾಗುತ್ತದೆ ಎಂದರು.

ಪೋಡಿ, ಪಹಣಿ ತಿದ್ದುಪಡಿ, ಹಕ್ಕು ಪತ್ರ, ವಸತಿ, ನಿವೇಶನ, ಪಿಂಚಣಿ, ರೇಶನ್ ಕಾರ್ಡ್ ಸೇರಿದಂತೆ ಕಂದಾಯ, ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಿದರು.

ಸಭೆಯಲ್ಲಿ ಎಸಿ ಮಂಜುನಾಥ್, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ತಹಶೀಲ್ದಾರ್ ಮಲ್ಲಪ್ಪ, ಇಒ ಮಂಜುನಾಥ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಮಾದಕ ವಸ್ತುಗಳ  ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಅಕ್ರಮ ಕ್ಯಾಟ್ ಫಿಶ್ ಸಾಕಾಣಿಕೆ ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಿಸಲು ಸೂಚನೆ

ಕಾನಿಪ ಧ್ವನಿ ಸಂಘಟನೆಯ ಹೊಸಕೋಟೆ ತಾಲೂಕು ಅಧ್ಯಕ್ಷರಾಗಿ ತಾವರೆಕೆರೆ ವಿನೋದ್ ಆಯ್ಕೆ

ಅರ್ಜುನ ವಿನಾಯಕ ಗೆಳೆಯರ ಬಳಗದ ವಿಜೃಂಭಣೆಯ ಗಣೇಶೋತ್ಸವ: ಸಡಗರದಿಂದ ಮೂರ್ತಿ ವಿಸರ್ಜನೆ

ಮುತ್ಸಂದ್ರ ಸಹಕಾರ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ : ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ 

ಸೆಪ್ಟೆಂಬರ್ 28 ರಂದು ಮಾಕಳಿ ದುರ್ಗಾ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ