ಹೊರಗುತ್ತಿಗೆ ಸೇವೆ: ಆನ್ ಲೈನ್ ಟೆಂಡರ್ ಆಹ್ವಾನ.

ವಿಜಯ ದರ್ಪಣ ನ್ಯೂಸ್, 

ಬಾಲಗಂಗಾಧರನಾಥ ಸ್ವಾಮೀಜಿ ನಗರ (ಬಿಜಿಎಸ್ ನಗರ) ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 11

ನಿರ್ದೇಶಕರು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯ, ಕೆಆರ್ ವೃತ್ತ, ಬೆಂಗಳೂರು ರವರ ಪತ್ರ ಸಂ:ಕಂ ಇ: ಎಜೆಎಸ್ ಕೆ: ಆಡಳಿತ:78/2023-24, ದಿನಾಂಕ 03-08-2023 ರಂತೆ ಜಿಲ್ಲೆಯ ಜಿಲ್ಲಾಡಳಿತ ಭವನದ ಸ್ಪಂದನ ಕೇಂದ್ರಕ್ಕೆ 1, ನಾಡಕಚೇರಿಗಳಿಗೆ 17, ತಾಲ್ಲೂಕು ಕಚೇರಿಗಳ ಆರ್ ಟಿ ಸಿ ಕೇಂದ್ರಗಳಿಗೆ 4 ಹಾಗೂ ಆಧಾರ್ ನೋಂದಣಿಗಾಗಿ 4 ಒಟ್ಟು 26 ಎಂಟ್ರಿ ಆಪರೇಟರ್ ಗಳ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಒದಗಿಸುವ ಕುರಿತು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯಿದೆ 1999ರ ಅಡಿಯಲ್ಲಿ ಆನ್ ಲೈನ್ ಮೂಲಕ ಟೆಂಡರ್ ಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಲು ಕೋರಿದೆ ಹೆಚ್ಚಿನ ಮಾಹಿತಿಯನ್ನು http://eproc.karnataka.gov.in ನಲ್ಲಿ ಪಡೆದುಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

##################################

ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ನೋಂದಣಿಗೆ ಆಗಸ್ಟ್ 16 ಕೊನೆಯ ದಿನಾಂಕ

2023 ಮುಂಗಾರು ಹಂಗಾಮಿನ “ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು” ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ. ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ.

ಪ್ರಸ್ತುತ ವಿಮಾ ನೋಂದಣಿ ಪ್ರಗತಿಯಲ್ಲಿದ್ದು, ಜಿಲ್ಲೆಯ ಅಧಿಸೂಚಿತ ಬೆಳೆಗಳಾದ ತೊಗರಿ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ ನೆಲಗಡಲೆ (ಮಳೆಯಾಶ್ರಿತ) ಮತ್ತು ಟೊಮ್ಯಾಟೊ ಬೆಳೆಗಳಿಗೆ ವಿಮೆಗೆ ನೋಂದಾಯಿಸಲು ಅಂತಿಮ ದಿನಾಂಕ ಮುಗಿದಿದ್ದು, ಉಳಿದಂತೆ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ), ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ಹುರುಳಿ (ಮಳೆಯಾಶ್ರಿತ) ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನಾಂಕವಿದ್ದು ಅಂತಿಮ ದಿನದವರೆಗೆ ಕಾಯದೆ ವಿಮೆಗೆ ನೋಂದಾಯಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರು ಹತ್ತಿರದ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (Common Service Centre), ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳುವುದು.

*ಹೆಚ್ಚಿನ ವಿವರಗಳಿಗೆ*

ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ ರಿಲಯನ್ಸ್ ಜನರಲ್ ಇನ್ಶ್ಯೂರನ್ಸ್ ಕಂಪನಿ ಲಿ., (ಟೋಲ್ ಪ್ರೀ ನಂ: 1800 102 4088)
ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ- ಜಿಲ್ಲಾ ಪ್ರತಿನಿಧಿ:ಸೋಮನಾಥ್ ಕನಗಲ್: +918655952074,

ದೇವನಹಳ್ಳಿ ಕಾಂತಕುಮಾರ್ : 9341627547, ದೊಡ್ಡಬಳ್ಳಾಪುರ ರವಿಶಂಕರ್ : 9620838348, ಹೊಸಕೋಟೆ: ಶ್ರೀನಿವಾಸ ಮೂರ್ತಿ 9900450778,      ನೆಲಮಂಗಲ ಕುಮಾರಸ್ವಾಮಿ : 8618812813.

ವಿಶೇಷ ಸೂಚನೆ

ರೈತರು ಅಂದಾಜು / ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಹಾಗೂ ಬಿತ್ತನೆ ದೃಡೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗಧಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

&&&&&&&&&&&&&&&&&&&&&&&&&&

ನನ್ನ ಮಣ್ಣು ನನ್ನ ದೇಶ ಅಭಿಯಾನ ದಲ್ಲಿ ಸಕ್ರಿಯವಾಗಿ ಭಾಗವಹಿಸಿ: ಜಿಲ್ಲಾಧಿಕಾರಿ         ಡಾ. ಶಿವಶಂಕರ ಎನ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 12- ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಸ್ಮರಣಾರ್ಥ ಕೇಂದ್ರ ಸರ್ಕಾರದ ವತಿಯಿಂದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 15ರಂದು ಪ್ರತಿ ಮನೆಗಳ ಮೇಲೂ ರಾಷ್ಟ್ರ ಧ್ವಜ ಹಾರಿಸುವುದು ಸೇರಿದಂತೆ
ಆಗಸ್ಟ್15ರೊಳಗೆ ಮಣ್ಣು ಅಥವಾ
ಮಣ್ಣಿನ ದೀಪ ಹಿಡಿದು ಪಂಚಪ್ರಾಣ ಪ್ರತಿಜ್ಞೆ ಕೈಗೊಳ್ಳುವುದು ಮತ್ತು ಅದರ ಭಾವಚಿತ್ರ ತೆಗೆದು www.yuva.gov.in ಗೆ ಕಳಿಸುವುದು, ವೀರಯೋಧರ ಸ್ಮರಣಾರ್ಥ ವಿಶೇಷ ಶಿಲಾಫಲಕಗಳನ್ನು ಸ್ಥಾಪಿಸುವುದು, ಅಮೃತ ಮಹೋತ್ಸವದ ನೆನಪಿಗಾಗಿ 75 ಸಸಿ ನೆಡುವ ಕಾರ್ಯಕ್ರಮ, ವೀರಯೋಧರ ಸ್ಮರಣೆ, ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ, ತಾಲ್ಲೂಕು ಮಟ್ಟದಲ್ಲಿ ಜಿಲ್ಲಾದ್ಯಂತ ಹಮ್ಮಿಕೊಂಡು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು, ಅಭಿಯಾನದಲ್ಲಿ ಶಾಲಾ ಮಕ್ಕಳೂ ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸಕ್ರಿಯವಾಗಿ ಭಾಗವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.