ವಿಜಯ ದರ್ಪಣ ನ್ಯೂಸ್….
ಅಕ್ಟೋಬರ್ ಒಳಗೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭರವಸೆ
ತಾಂಡವಪುರ ಸೆಪ್ಟೆಂಬರ್ 26 ಅಕ್ಟೋಬರ್ ಒಳಗೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವುದಾಗಿ ಶಾಸಕ ದರ್ಶನ್ ಧ್ರುವ ನಾರಾಯಣ್ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಜನತೆಗೆಭರವಸೆ ನೀಡಿದರು
ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ ತಾಲೂಕಿನ ರೈತರು ಸಾರ್ವಜನಿಕರು ಈ ಬಾರಿ ಮಳೆ ಇಲ್ಲದೆ ಕೆರೆಕಟ್ಟೆಗಳಿಗೆ ನೀರು ಇಲ್ಲದೆ ದನಕರುಗಳಿಗೆ ಕುಡಿಯಲು ನೀರಿಲ್ಲ ಅಲ್ಲದೆ ಅಕ್ಕಪಕ್ಕದ ಜಮೀನುಗಳಲ್ಲಿ ಇರುವ ಬೋರ್ವೆಲ್ಗಳು ಸಹ ನೀರಿಲ್ಲದೆ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಕೆರಗಳಿಗೆ ನೀರು ತುಂಬಿಸುವಂತೆ ಶಾಸಕರಲ್ಲಿ ರೈತರು ಮನವಿ ಮಾಡಿದರು
ರೈತರ ಮನವಿಗೆ ಸ್ಪಂದಿಸಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾತನಾಡಿ ಕೂಡಲೇ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನಡೆದರು
ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ಇಂದು ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ಶಾಸಕ ದರ್ಶನ್ ಧ್ರುವನಾರಾಯಣ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸಾರ್ವಜನಿಕರಿಂದ ಅಹವಾಲುಗಳನ್ನು , ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ, ಅಗತ್ಯ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಸೂಚನೆ ಹಾಗೂ ನಿರ್ದೇಶನ ನೀಡಿದರು

ಜನರ ಸಮಸ್ಯೆಗಳಿಗೆ ಸ್ಪಂದಿಸುವುದು, ಪರಿಹಾರ ಕಲ್ಪಿಸುವುದು ಮತ್ತು ಜನಸೇವೆಯನ್ನು ಪರಿಣಾಮಕಾರಿಯಾಗಿ ತಲುಪಿಸುವುದೇ ನಮ್ಮ ಗುರಿ ಮತ್ತು ಆದ್ಯತೆ. ಎಂದು ಶಾಸಕರು ತಿಳಿಸಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ ತಾಲೂಕು, ತಹಸೀಲ್ದಾರ್ ಸ್ಮಿತಾ ರಾಮು, EO ಜೆರಾಲ್ಡ್ ರಾಜೇಶ್, ನಗರಸಭಾ ಪೌರಾಯುಕ್ತರಾದ ಬಸವರಾಜ್ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯಕ್ಕೆ ಮಾರುತಿ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು












