--Ads--

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ಅವರಿಗೆ ವಕೀಲರ ಸಂಘದಿಂದ ಸನ್ಮಾನ

On: September 28, 2026 4:58 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ಅವರಿಗೆ ವಕೀಲರ ಸಂಘದಿಂದ ಸನ್ಮಾನ

ತಾವರೆಕೆರೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಹೊಸಕೋಟೆ ತಾಲ್ಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ತಾವರೆಕೆರೆ ವಿನೋದ್ ಅವರನ್ನು ಹೊಸಕೋಟೆ ತಾಲ್ಲೂಕು ವಕೀಲರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಹೊಸಕೋಟೆ ತಾಲ್ಲೂಕು ವಕೀಲರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ಅವರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನೂತನ ಅಧ್ಯಕ್ಷರಿಗೆ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ರಮೇಶ್. ಕೆ, ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನರಿಗೆ ತಲುಪಿಸುವ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳು, ಸ್ಥಳೀಯ ಅಭಿವೃದ್ಧಿ ವಿಚಾರಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಸಂಬಂಧಪಟ್ಟವರ ಗಮನಕ್ಕೆ ತರುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಹೊಸಕೋಟೆ ತಾಲ್ಲೂಕಿನ ಪತ್ರಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ಪತ್ರಿಕಾ ಕ್ಷೇತ್ರದ ಘನತೆಯನ್ನು ಮತ್ತಷ್ಟು ಹೆಚ್ಚಿಸಬೇಕು. ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ಅವರ ನೇತೃತ್ವದಲ್ಲಿ ಸಂಘವು ಪತ್ರಕರ್ತರ ಹಿತಾಸಕ್ತಿ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ರಮೇಶ್. ಕೆ ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ತಾವರೆಕೆರೆ ವಿನೋದ್ ತಮ್ಮನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ಸಂಘದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದು, ಸಂಘವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಎಲ್ಲ ಪತ್ರಕರ್ತರನ್ನು ಒಗ್ಗೂಡಿಸಿಕೊಂಡು ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಹನುಮಂತ ರಾವ್, ಪ್ರದಾನ ಕಾರ್ಯದರ್ಶಿ ರಾಜಪ್ಪ, ಜಂಟಿ ಕಾರ್ಯದರ್ಶಿ ಮುನಿರಾಜು, ಖಜಾಂಚಿ ನಾಗಜ್ಯೋತಿ, ನಿರ್ದೇಶಕರಾದ ವೆಂಕಟೇಶ್, ಪ್ರಕಾಶ್ ಮೂರ್ತಿ, ಗಣೇಶ್, ಅಮರ್, ಅಭಿಷೇಕ್, ಹಾಗೂ ಹಿರಿಯ ವಕೀಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now