ವಿಜಯ ದರ್ಪಣ ನ್ಯೂಸ್…..
ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಂದ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

ತಾಂಡವಪುರ ಸೆಪ್ಟೆಂಬರ್ 28 ದಕ್ಷಿಣ ಕಾಶಿ ನಂಜನಗೂಡು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ, ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಪಾಲ್ಗೊಂಡು, ಕಾರ್ಯಕ್ರಮಗಳ ಸಿದ್ಧತೆ, ಆಚರಣೆಯ ಕುರಿತು ಅಧಿಕಾರಿಗಳಿಂದ ಮುಖಂಡರಿಂದ ಸಲಹೆ–ಸೂಚನೆಗಳನ್ನು ಪಡೆದು, ಚರ್ಚಿಸಿ ಅಗತ್ಯ ಕ್ರಮಗಳ ಕುರಿತು ಸೂಕ್ತ ನಿರ್ಧಾರಗಳನ್ನು ಕ್ರಮ ಕೈಗೊಂಡು ಈ ಎಲ್ಲಾ ಕಾರ್ಯಕ್ರಮಗಳು ಬಹಳ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ನಡೆಯಬೇಕು ಎಂದು ಸೂಚನೆ ನೀಡಿದರು
ಈ ಸಭೆಯಲ್ಲಿ ತಹಸೀಲ್ದಾರ್ ಸ್ಮಿತಾ ರಾಮು ರವರು, ನಗರ ಬ್ಲಾಕ್ ಅಧ್ಯಕ್ಷರಾದ ಸಿ. ಎಂ ಶಂಕರ್ ರವರು ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿಯ, ಅಧ್ಯಕ್ಷರಾದ ಚಿನ್ನದ ಗುಡಿ ಹುಂಡಿ ಬಸವೇಗೌಡರು, EO ಜೆರಾಲ್ಡ್ ರಾಜೇಶ್ ಮುಖಂಡರಾದ ಹೆಡತಲೆ ನಾಗರಾಜ್ ರವರು, ಗಾಯತ್ರಿ ಮೋಹನ್ ರವರು, ಶ್ರೀಧರ್ ರವರು ಸೇರಿದಂತೆ ಹಲವು ಮುಖಂಡರು ವಿವಿಧ ಸಂಘಟನೆಗಳ ಅಧ್ಯಕ್ಷರು ಪದಾಧಿಕಾರಿಗಳು, ಅಧಿಕಾರಿಗಳು ಹಾಜರಿದ್ದರು.











