--Ads--

ಡಾಲ್ಪಿನ್ಸ್ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ

On: September 28, 2026 5:50 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಡಾಲ್ಪಿನ್ಸ್ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ


ಶಿಡ್ಲಘಟ್ಟ : ಜಿಲ್ಲಾ ಕ್ರೀಡಾಕೂಟದಲ್ಲಿ ಬಲಿಷ್ಠ ತಂಡಗಳನ್ನು ಎದುರಿಸಿದ ಡಾಲ್ಪಿನ್ಸ್ ಕಾಲೇಜಿನ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಸ್ತಿ ಗೆದ್ದರು. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್‌.ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ 2026-27ನೇ ಸಾಲಿನ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಕೂಟದಲ್ಲಿ ನಗರದ “ಡಾಲ್ಪಿನ್ಸ್ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ” ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ
ಪಡೆದಿದೆ ,ಇದರೊಂದಿಗೆ ಕರಾಟೆ ಹಾಗೂ ಭಾರ ಎತ್ತುವ ಸ್ಪರ್ಧೆಗಳಲ್ಲಿಯೂ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕ್ರೀಡಾಪಟುಗಳು ಸಂಸ್ಥೆಯ ಕ್ರೀಡಾ ಶಿಕ್ಷಣ ನಿರ್ದೇಶಕ ಪ್ರೊ.ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.ಡಾಲ್ಫಿನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್. ಅಶೋಕ್‌ ಮಾತನಾಡಿ ,ನಿತ್ಯ ಕಠಿಣ ಅಭ್ಯಾಸದೊಂದಿಗೆ ಸಂಯಮ ಮತ್ತು ಕ್ರೀಡಾ ಮನೋಭಾವದಿಂದ ಆಟವಾಡಿ ಜಿಲ್ಲೆಯ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಕಿವಿಮಾತು ಹೇಳಿದರು.

ಪಠ್ಯ ಚಟುವಟಿಕೆಗಳ ಜೊತೆಗೆ ಪಕ್ಷೇತರ ಚಟುವಟಿಕೆಗಳಲ್ಲಿಯೂ ಡಾಲ್ಪಿನ್ಸ್ ಸಂಸ್ಥೆ ಗಮನಾರ್ಹ ಸಾಧನೆ ಮಾಡುತ್ತಿದೆ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ
ಗೌರವಕ್ಕೆ ಧಕ್ಕೆಯಾಗದಂತೆ ಸ್ಪರ್ಧಿಸಬೇಕು ಎಂದ ಅವರು
ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಅಭಿನಂದನೆ ಸಲ್ಲಿಸಿದರು.

WhatsApp

Join Now

Telegram

Join Now

Instagram

Join Now