--Ads--

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ : ಜಿಲ್ಲಾಧಿಕಾರಿ ಅನುರಾಧ 

On: October 1, 2026 4:12 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…….

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ : ಜಿಲ್ಲಾಧಿಕಾರಿ ಅನುರಾಧ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಅಕ್ಟೋಬರ್ . 01:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ, ಅಗತ್ಯವಿದ್ದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ ಎನ್ ಅನುರಾಧ ಅವರು ಎಚ್ಚರಿಕೆ ನೀಡಿದ್ದಾರೆ.

SIR ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಸಿದ್ಧತೆ ಕುರಿತು ಜಿಲ್ಲಾ ಚುನಾವಣಾಧಿಕಾರಿ ರವರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಾಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೆಪ್ಟೆಂಬರ್ 28 ರಂದು ನಡೆದ ಸಭೆಯಲ್ಲಿ ಮಾತನಾಡಿ,

ಸಾರ್ವಜನಿಕರಿಗೆ SIR ಕುರಿತು ಅಧಿಕೃತ ಹಾಗೂ ಪರಿಶೀಲಿತ ಮಾಹಿತಿಯನ್ನಷ್ಟೇ ನೀಡಬೇಕು. 18 ವರ್ಷ ಮೇಲ್ಪಟ್ಟ ಭಾರತೀಯ ನಾಗರಿಕರು ಹಾಗೂ ನಿಗದಿತ ಅರ್ಹತೆ ಹೊಂದಿರುವವರು ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅಗತ್ಯ ಮಾರ್ಗದರ್ಶನ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು. ಸೆಪ್ಟೆಂಬರ್‌ 29 ರಂದು ಅಧಿಸೂಚನೆ ಪ್ರಕಟವಾಗಿದ್ದು, ಅಕ್ಟೋಬರ್‌ 06 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 7ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್‌.9ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಅಕ್ಟೋಬರ್‌.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ. ಅ.31ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಅರ್ಜಿ ಸ್ವೀಕೃತಿ, ದಾಖಲೆಗಳು ಹಾಗೂ ರಿಜಿಸ್ಟರ್‌ಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಚುನಾವಣಾ ಆಯೋಗದ ಮಾರ್ಗಸೂಚನೆಯಂತೆ ಅರ್ಜಿಗಳನ್ನು ನಿಗಧಿತ ಅವಧಿಯಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾದ ಡಾ. ಕೆ. ಎನ್ ಅನುರಾಧ ಅವರು ನಿರ್ದೇಶನ ನೀಡಿದರು.

WhatsApp

Join Now

Telegram

Join Now

Instagram

Join Now