ವಿಜಯ ದರ್ಪಣ ನ್ಯೂಸ್…..
ಮಾಜಿ ಸಂಸದ ಬಿ.ಎನ್. ಬಚ್ಚೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಸಾವಿರಾರು ಜನರಿಗೆ ವಿಶೇಷ ಹೋಳಿಗೆ ಊಟ

ತಾವರೆಕೆರೆ :ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಬಿ.ಎನ್. ಬಚ್ಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಹೊಸಕೋಟೆ ತಾಲೂಕು ಕಚೇರಿ ಆವರಣದಲ್ಲಿ ಸಾವಿರಾರು ಜನರಿಗೆ ವಿಶೇಷ ಹೋಳಿಗೆ ಊಟದ ವ್ಯವಸ್ಥೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಹೊಸಕೋಟೆ ತಾಲೂಕು ಘಟಕದ ಅಧ್ಯಕ್ಷರಾದ ಬಿ.ವಿ. ಬೈರೇಗೌಡ ಹಾಗೂ ಯೋಜನಾ ಪ್ರಾಧಿಕಾರದ ಸದಸ್ಯರಾದ ಎಚ್.ಎಂ. ಸುಬ್ಬರಾಜು ಅವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪ್ರತಿನಿತ್ಯ ಹೊಸಕೋಟೆ ತಾಲೂಕು ಕಚೇರಿ ಆವರಣಕ್ಕೆ ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ದೂರದ ಊರುಗಳಿಂದಲೂ ನೂರಾರು, ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ತಮ್ಮ ವಿವಿಧ ಕೆಲಸಗಳಿಗಾಗಿ ಆಗಮಿಸುತ್ತಾರೆ. ಬೆಳಗ್ಗೆಯಿಂದಲೇ ತಾಲೂಕು ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳಿಗಾಗಿ ಕಾಯುವ ಸಾರ್ವಜನಿಕರಿಗೆ ಮಧ್ಯಾಹ್ನದ ಊಟದ ಸಮಸ್ಯೆ ಎದುರಾಗುತ್ತದೆ.
ಈ ಹಿನ್ನೆಲೆಯಲ್ಲಿ ಹುಟ್ಟುಹಬ್ಬದ ಆಚರಣೆಯ ಹೆಸರಿನಲ್ಲಿ ಅನಗತ್ಯವಾಗಿ ದುಂದು ವೆಚ್ಚ ಮಾಡುವ ಬದಲು, ಸಾರ್ವಜನಿಕರಿಗೆ ಉಪಯೋಗವಾಗುವಂತಹ ಸಮಾಜಮುಖಿ ಕಾರ್ಯವನ್ನು ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಒಂದು ಹೊತ್ತಿನ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದ ಬಿ.ವಿ. ಬೈರೇಗೌಡ ಹಾಗೂ ಎಚ್.ಎಂ. ಸುಬ್ಬರಾಜು ಅವರು, ಹುಟ್ಟುಹಬ್ಬವೆಂದರೆ ಕೇವಲ ಸಂಭ್ರಮಾಚರಣೆ, ಬ್ಯಾನರ್, ಹಾರ-ತುರಾಯಿ ಹಾಗೂ ದುಂದು ವೆಚ್ಚಕ್ಕೆ ಸೀಮಿತವಾಗಬಾರದು. ಸಮಾಜಕ್ಕೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ತಾಲೂಕು ಕಚೇರಿ ಆವರಣಕ್ಕೆ ಪ್ರತಿನಿತ್ಯ ವಿವಿಧ ಕೆಲಸಗಳಿಗಾಗಿ ಆಗಮಿಸುವ ಬಡವರು, ಮಧ್ಯಮ ವರ್ಗದವರು, ರೈತರು ಹಾಗೂ ಸಾರ್ವಜನಿಕರಿಗೆ ಒಂದು ಹೊತ್ತಿನ ಊಟ ನೀಡುವುದರಿಂದ ಅವರಿಗೆ ನೆರವಾಗುತ್ತದೆ. ಈ ಕಾರಣದಿಂದ ವಿಶೇಷವಾಗಿ ಹೋಳಿಗೆ ಸೇರಿದಂತೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಎಚ್ಎಮ್ ಸುಬ್ಬರಾಜು ಮಾತನಾಡಿ ಹೊಸಕೋಟೆ ಕ್ಷೇತ್ರಕ್ಕೆ ಬಿ ಎನ್ ಬಚ್ಚೇಗೌಡರ ಕೊಡುಗೆ ಅಪಾರ ಅಂದು ತಂದೆಯವರು ಮಾಡಿದ ಸಾಧನೆಗಳನ್ನು ಇಂದು ಅವರ ಮಗನಾದ ಶರತ್ ಬಚ್ಚೇಗೌಡರು ಜನಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿ, ತಾಲೂಕಿನಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಹುಟ್ಟು ಹಬ್ಬದ ಪ್ರಯುಕ್ತ ಇಂದು ತಾಲೂಕು ಕಚೇರಿಯ ಆವರಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಸ್ಥಳೀಯ ಜನರಿಗೆ ವಿಶೇಷ ರೀತಿಯ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.
ಹೋಳಿಗೆ ಸೇರಿದಂತೆ ವಿವಿಧ ಖಾದ್ಯಗಳನ್ನು ಒಳಗೊಂಡ ವಿಶೇಷ ಊಟವನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಅನೇಕರು ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿರುವ ಈ ಸಮಾಜಮುಖಿ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಭಾಷ್ ಗೌಡರು, ವಿ ಸದಾನಂದ, ಹಾಗೂ ತಾಲೂಕು ಕಚೇರಿಯ ಕೆಲಸದ ನಿಯಮಿತ ಆಗಮಿಸಿದ್ದ ಸ್ಥಳೀಯ ಜನರು ಹಾಗೂ ಬಿ ಎನ್ ಬಚ್ಚೇಗೌಡರ ಅಭಿಮಾನಿ ಬಳಗವು ಕಾರ್ಯಕ್ರಮದಲ್ಲಿ ಹಾಜರಿದ್ದರು.









