--Ads--

ಶಿಕ್ಷಕ ಎನ್.ರಾಮಾಂಜಿ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯಮಟ್ಟದ ‘ಶಿಕ್ಷಣ ಸೇವಾರತ್ನ’ ಪ್ರಶಸ್ತಿ

On: October 1, 2026 4:57 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಶಿಕ್ಷಕ ಎನ್.ರಾಮಾಂಜಿ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯಮಟ್ಟದ ‘ಶಿಕ್ಷಣ ಸೇವಾರತ್ನ’ ಪ್ರಶಸ್ತಿ

ಶಿಡ್ಲಘಟ್ಟ : ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ನಗರದ ಡಾಲ್ಪಿನ್ CBSE ವಿಭಾಗದ ಕನ್ನಡ ಭಾಷಾ ಶಿಕ್ಷಕ ಎನ್. ರಾಮಾಂಜಿ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ನ 2026ನೇ ಸಾಲಿನ ರಾಜ್ಯಮಟ್ಟದ ‘ಶಿಕ್ಷಣ ಸೇವಾರತ್ನ’ ಪ್ರಶಸ್ತಿ ದೊರೆತಿದೆ.

ಬೆಂಗಳೂರಿನ ಟೌನ್ ಹಾಲ್ ನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಸ್.ಜಿ.ರಮೇಶ್ ಅವರು ರಾಮಾಂಜಿ ಅವರನ್ನು ಗೌರವಿಸಿ ಸನ್ಮಾನಿಸಿದರು.

ಕಳೆದ ಎರಡು ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಎನ್.ರಾಮಾಂಜಿ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಜತೆಗೆ ಹಾಡುಗಾರಿಕೆ ಮತ್ತು ನಾಟಕ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಿದ್ದಾರೆ.
CBSE ಪರೀಕ್ಷೆಗಳಲ್ಲಿ ಶಾಲೆ ಶೇ.100ರಷ್ಟು ಫಲಿತಾಂಶ ಸಾಧಿಸುವಲ್ಲಿ ಅವರ ಬೋಧನಾ ಕೌಶಲ್ಯ ಹಾಗೂ ಪರಿಶ್ರಮ ಪ್ರಮುಖ ಪಾತ್ರ ವಹಿಸಿದೆ.

ಕನ್ನಡ ವಿಷಯದಲ್ಲಿ ವಿದ್ಯಾರ್ಥಿಗಳು 100, 99 ಹಾಗೂ 98 ಅಂಕ ಗಳಿಸುವಂತೆ ಪರಿಣಾಮಕಾರಿ ಬೋಧನಾ ವಿಧಾನಗಳನ್ನು ಅವರು ಅಳವಡಿಸಿಕೊಂಡಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ಶಿಕ್ಷಕ ಎನ್.ರಾಮಾಂಜಿ ಮಾತನಾಡಿ,
ಪಾಠ ಬೋಧಿಸುವುದಕ್ಕೆ ಸೀಮಿತವಾದುದಲ್ಲ ಶಿಕ್ಷಕ ವೃತ್ತಿ
ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ, ಆತ್ಮವಿಶ್ವಾಸ ಬೆಳೆಸಿ ಉತ್ತಮ ವ್ಯಕ್ತಿತ್ವ ರೂಪಿಸುವ ಜವಾಬ್ದಾರಿಯೂ ಶಿಕ್ಷಕರ ಮೇಲಿದೆ ಎಂದು ಅವರು ಹೇಳಿದರು.

WhatsApp

Join Now

Telegram

Join Now

Instagram

Join Now