--Ads--

ಗಾಂಧಿಜಿಯವರ ತತ್ವ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಡಾ.ಕೆ.ಎನ್. ಅನುರಾಧ

On: October 3, 2026 3:53 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…….

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಗಾಂಧಿಜಿಯವರ ತತ್ವ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ :ಡಾ.ಕೆ.ಎನ್. ಅನುರಾಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲೆ ಅ. 2 :

ಗಾಂಧಿಜಿಯವರ ಕುರಿತು ಪಠ್ಯ ಪುಸ್ತಕಗಳನ್ನು ಓದಿದರೆ ಸಾಲದು ಅವರ ಆದರ್ಶ, ತತ್ವಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಇಂದು ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157 ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಸಾಮಾಜಿಕ ಜಾಲತಾಲಣವು ಇಲ್ಲದ ಹಿಂದಿನ ಕಾಲದಲ್ಲಿ ಮಹಾತ್ಮ ಗಾಂಧಿಜಿಯವರು ಪ್ರಭಾವಿ ವ್ಯಕ್ತಿಯಾಗಿದ್ದರು. ಅಂತರಾಷ್ಟ್ರೀಯ ಮಟ್ಟದಲ್ಲಿ ಪೂಜಿಸಲ್ಪಡುವ ವ್ಯಕ್ತಿಗಳೆಂದರೆ ಮಹಾತ್ಮ ಗಾಂಧಿಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಎಂದು ತಿಳಿಸಿದರು.

ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರ್ಯ ವನ್ನು ತಂದುಕೊಟ್ಟು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಜಗತ್ತಿಗೆ ಪರಿಚಯಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲು ಮಹಿಳೆಯರಿಗೆ ಪ್ರೊತ್ಸಾಹ ನೀಡಿದರು. ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿದರು. ಅವರ ಸತ್ಯ, ಅಹಿಂಸೆ,
ಸ್ಥಳೀಯವಾಗಿ ತಯಾರಿಸಿದ ವಸ್ತುಗಳನ್ನು ಬಳಸುವುದು ದೇಶದ ಬಡವರ ಉದ್ದಾರಕ್ಕೆ ಮತ್ತು ಆರ್ಥಿಕ ಸ್ವಾವಲಂಬನೆಗೆ ದಾರಿ ಎಂದು ನಂಬಿದ್ದರು. ಸತ್ಯವೇ ದೇವರೆಂದು ನಂಬಿದ್ದ ಅವರು ಮಾತು ಮತ್ತು ಕೃತಿಯಲ್ಲಿ ಸತ್ಯವನ್ನು ಪಾಲಿಸಬೇಕೆಂದು ಹೇಳಿದರು.

ಸಿಇಓ ವಾಸಂತಿ ಅಮರ್ ಮಾತನಾಡಿ ಗಾಂಧಿಜಿಯವರ ತತ್ವಗಳನ್ನು ಮಕ್ಕಳು ಬೆಳೆಸಿಕೊಂಡು ನಡೆನುಡಿಯಲ್ಲಿ ಪ್ರಾಮಾಣಿಕರಾಗಿ, ವಿದ್ಯಾವಂತರಾಗಿ, ಗುಣವಂತರಾಗಬೇಕು ಎಂದು ತಿಳಿಸಿದರು.

ವಿಶ್ವನಾಥಪುರದ ಸರ್ಕಾರಿ ಶಾಲೆಯ ಶಿಕ್ಷಕರಾದ ಬಸವರಾಜು ಅವರು ಉಪನ್ಯಾಸ ನೀಡಿ ಮಹಾತ್ಮ ಗಾಂಧಿಜಿಯವರು ಜೀವನದುದ್ದಕ್ಕೂ ಸತ್ಯ, ಸರಳತೆ, ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡಿದ್ದರು. ಗಾಂಧಿಜಿಯವರ ಬದುಕು ತೆರದ ಪುಸ್ತಕ ಅವಮಾನವನ್ನು ಕಡೆಗಣಿಸಿ ಸಾಧನೆಯ ಮಟ್ಟಿಲು ಏರಿದ ಮಾಹಾನ್ ಚೈತನ್ಯ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಮೂರ್ತಿ ಚಿಕ್ಕದಾರರೂ ಕೀರ್ತಿ ದೊಡ್ಡದು. ಅವರು ಗೃಹ ಮಂತ್ರಿಯಾಗಿದ್ದರು ಆದರೆ ಅವರಿಗೆ ಸ್ವಂತ ಗೃಹವೇ ಇರಲಿಲ್ಲ. ಸರಳ ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಮುಗ್ದ ಚೇತನ ಅವರ ಆದರ್ಶಗಳನ್ನು ನಾವು ಪಾಲನೆ ಮಾಡಬೇಕು ಎಂದು‌ ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಅಶೋಕ್ ಕುಮಾರ್ ಡಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now