--Ads--

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು, ಶಾಸಕರುಗಳು

On: October 8, 2026 2:35 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು, ಶಾಸಕರುಗಳು

ತಾಂಡವಪುರ ಅಕ್ಟೋಬರ್ 7 ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಅಂಗಳದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿಕಾಮಗಾರಿಗಳನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯ ರವರು ಹಾಗೂ ಶಾಸಕರಾದ ದರ್ಶನ್ ಧ್ರುವ ನಾರಾಯಣ್ , ಡಾ ಡಿ ತಿಮ್ಮಯ್ಯ ಹಿರಿಯ ಪತ್ರಕರ್ತರು ವಿಧಾನ ಪರಿಷತ್ ಸದಸ್ಯ ಕೆ ಶಿವಕುಮಾರ್ ರವರು ಕಾಮಗಾರಿ ನಡೆದಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಸಚಿವರು ಕಾಮಗಾರಿಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿ ಜೊತೆ ಮಾತನಾಡಿ ಕಾಮಗಾರಿ ಗುಣಮಟ್ಟದಿಂದ ಕೂಡಿದ್ದು ಆದಷ್ಟು ಬೇಗನೆ ಕಾಮಗಾರಿಗಳು ಮುಗಿಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ವಸ್ತುಪ್ರದರ್ಶನ ಆವರಣ ಹಾಗೂ ಮೈಸೂರು ಅರಮನೆ ಅಂಗಳದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಮತ್ತು ಪೂರ್ವಸಿದ್ಧತೆಗಳನ್ನು ಸಚಿವರು ಶಾಸಕರು ಪರಿಶೀಲನೆ ಮಾಡಿದರು.

ವಸ್ತುಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳ ತಾತ್ಕಾಲಿಕ ಮುಖ್ಯ ವೇದಿಕೆ, ವರ್ಣರಂಜಿತ ದೀಪಾಲಂಕಾರ, ದಸರಾ ವೀಕ್ಷಣೆಗೆ ಆಸನ ವ್ಯವಸ್ಥೆ, ನೆರಳು, ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ನಿಗದಿತ ಸಮಯಕ್ಕೆ ಎಲ್ಲಾ ವ್ಯವಸ್ಥೆಗಳು ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರುಕಟ್ಟುನಿಟ್ಟಿನ ಸೂಚನೆ ನೀಡಿದರು.

ನಾಡಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಆಗಮಿಸುವ ಲಕ್ಷಾಂತರ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ, ಸುರಕ್ಷಿತ, ಸುಸಜ್ಜಿತ ಹಾಗೂ ವ್ಯವಸ್ಥಿತ ರೀತಿಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ , ಕೆ ಶಿವಕುಮಾರ್, ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಎಪಿಎಂಸಿ ಮಾಜಿ ಅಧ್ಯಕ್ಷ ಬಂಡಿಪಾಳ್ಯ ಬಸವರಾಜು ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಗೋಪಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ