ವಿಜಯ ದರ್ಪಣ ನ್ಯೂಸ್……
ಮೈಸೂರಿನ ಜಿ. ಪಂ. ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಅಕ್ಟೋಬರ್ 13: ಮೈಸೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಡಾ. ದೇವರಾಜ ಅರಸು ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಾಲೋಚನಾ ಸಭೆಯನ್ನು ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು ಅಧಿಕಾರಿಗಳಿಂದ ಈ ಕುರಿತು ಮಾಹಿತಿ ಪಡೆದುಕೊಂಡು
ರಾಜ್ಯದಲ್ಲಿ ‘ಮನೆಮನೆಗೆ ಶುದ್ಧ ಜಲ’ (Drink Directly from Tap) ಅಭಿಯಾನವನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದ್ದು, ಮೈಸೂರು ನಗರದಲ್ಲಿ ಮುಂದಿನ ಒಂದು ವರ್ಷದೊಳಗೆ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ನಗರ ಅಭಿವೃದ್ಧಿ ಸಚಿವರಾದ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರು ನಿರ್ದೇಶನ ನೀಡಿ ಸೂಚನೆ ನೀಡಿದರು
ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರು ಪೂರೈಸುವ ಈ ಯೋಜನೆಯು ಸಾರ್ವಜನಿಕ ಆರೋಗ್ಯ ರಕ್ಷಣೆ ಹಾಗೂ ನಗರವಾಸಿಗಳ ಜೀವನಮಟ್ಟ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ಈ ಯೋಜನೆಯನ್ನು ಅಳವಡಿಸಿಕೊಂಡಿವೆ. ಒಡಿಶಾದ ಪುರಿ ಸೇರಿದಂತೆ ವಿವಿಧ ನಗರಗಳಲ್ಲಿ ಅನುಷ್ಠಾನಗೊಂಡಿರುವ ಈ ಮಾದರಿಯನ್ನು ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ, ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ಬಳಿಕ ರಾಜ್ಯದ ಇತರ ನಗರಗಳಿಗೂ ವಿಸ್ತರಿಸುವ ಕುರಿತು ಸಚಿವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು
ಇದೇ ಸಂದರ್ಭದಲ್ಲಿ ಕೊಳಗೇರಿ ಪ್ರದೇಶಗಳ ಸಮಗ್ರ ಪರಿವರ್ತನೆ, ತಂತ್ರಜ್ಞಾನ ಆಧಾರಿತ ಯೋಜನೆಗಳ ಅನುಷ್ಠಾನ, ಸಾಮಾಜಿಕ ಮೂಲಸೌಕರ್ಯಗಳ ಬಲವರ್ಧನೆ, ಮೂಲಭೂತ ನಾಗರಿಕ ಸೌಲಭ್ಯಗಳ ಸುಧಾರಣೆ ಹಾಗೂ ಸುಸ್ಥಿರ ಜೀವನೋಪಾಯದ ಅವಕಾಶಗಳ ಕುರಿತು ಸಮಾಲೋಚನೆ ನಡೆಸಿದ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು
ಒಡಿಶಾ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶ್ರೀ ಎಂ.ಜಿ.ಮತಿ ವಾತನನ್ ಅವರು ಸಭೆಯಲ್ಲಿ ಭಾಗವಹಿಸಿ, ತಮ್ಮ ಅನುಭವದ ಆಧಾರದ ಮೇಲೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಅವರಿಗೆ ಜಿಲ್ಲಾ ಉಸ್ತುವಾರಿ ಸಚವರು ಧನ್ಯವಾದಗಳನ್ನು ತಿಳಿಸಿದರು
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶ್ರೀಮತಿ ಬಿ. ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯದ (DMA) ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (KUWSDB) ನಿರ್ದೇಶಕರು ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು
ಶುದ್ಧ ಕುಡಿಯುವ ನೀರು, ಸುಸ್ಥಿರ ನಗರಾಭಿವೃದ್ಧಿ ಹಾಗೂ ಉತ್ತಮ ಜೀವನಮಟ್ಟದತ್ತ ನಮ್ಮ ಸಂಕಲ್ಪ! ಆಗಿದ್ದು ಅಧಿಕಾರಿಗಳು ಇದಕ್ಕಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಇದೇ ವೇಳೆ ಸೂಚನೆ ನೀಡಿದರು











