--Ads--

ಒಗ್ಗಟ್ಟಿನಿಂದ ಎನ್‌ಡಿಎ ಅಭ್ಯರ್ಥಿ ಪರ ಮತಯಾಚಿಸಿ ಗೆಲ್ಲಿಸಬೇಕು : ಶಾಸಕ ಬಿ.ಎನ್.ರವಿಕುಮಾರ್ ಮನವಿ

On: October 13, 2026 5:50 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಒಗ್ಗಟ್ಟಿನಿಂದ ಎನ್‌ಡಿಎ ಅಭ್ಯರ್ಥಿ ಪರ ಮತಯಾಚಿಸಿ ಗೆಲ್ಲಿಸಬೇಕು : ಶಾಸಕ ಬಿ.ಎನ್.ರವಿಕುಮಾರ್ ಮನವಿ

ಶಿಡ್ಲಘಟ್ಟ : ಚುನಾವಣೆಗೆ ಕಡಿಮೆ ಸಮಯ ಇರುವುದರಿಂದ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿ ಗ್ರಾಮದ ಪದವೀಧರ ಮತದಾರರನ್ನು ಸಂಪರ್ಕಿಸಿ, ಅಭ್ಯರ್ಥಿಯ ಪರವಾಗಿ ಮತ ಯಾಚಿಸಿ ಗೆಲ್ಲಸಸಬೇಕೆಂದು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು.

ತಾಲ್ಲೂಕಿನ ಹಂಡಿಗನಾಳದ ಬಾಲಾಜಿ ಕನ್ವೆನ್ಸನ್‌ ಹಾಲ್‌ನಲ್ಲಿ ನಡೆದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ತಾಲ್ಲೂಕಿನ ಸಮನ್ವಯ ಸಮಿತಿ ಸಭೆ ಹಾಗೂ ಆಗ್ನೇಯ ಪದವೀಧರ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಎನ್‌ಡಿಎ ಮೈತ್ರಿ ಅಭ್ಯರ್ಥಿ ಕೆ.ಎಂ.ಸುರೇಶ್ ಪರವಾಗಿ ಬೂತ್ ಮಟ್ಟದಲ್ಲಿ ಸಮನ್ವಯದಿಂದ ಕೆಲಸ ಮಾಡುವ ಮೂಲಕ ಎರಡೂ ಪಕ್ಷಗಳ ಮುಖಂಡರು, ಕಾರ್ಯ ಕರ್ತರು ಕೆಲಸ ಮಾಡಿ ಅವರನ್ನು ಗೆಲ್ಲಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.

ತೂಪಲ್ಲಿ ಚೌಡರೆಡ್ಡಿ ಅವರು ಕ್ಷೇತ್ರದಲ್ಲಿ ಸುತ್ತಾಡಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು, ಇಲ್ಲವಾದಲ್ಲಿ ನಮ್ಮ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು ಈ ಚುನಾವಣೆಯು ಮುಂದಿನ ಎಲ್ಲಾ ಚುನಾವಣೆಗಳಿಗೂ ದಿಕ್ಕೂಚಿಯಾಗಲಿದ್ದು ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ಮೂಲಕ ಉತ್ತಮ ಸಂದೇಶ ನೀಡಬೇಕು ಎಂದು ಮನವಿ ಮಾಡಿದರು.

ಆಗ್ನೇಯ ಪದವೀಧರ ಕ್ಷೇತ್ರವನ್ನು 3 ಬಾರಿ ಪ್ರತಿನಿಧಿಸಿ ಒಮ್ಮೆ ಗೆದ್ದಿರುವ ತೂಪಲ್ಲಿ ಚೌಡರೆಡ್ಡಿ ಅವರು ಆಗ್ನಿಯ ಪದವೀಧರ ಕ್ಷೇತ್ರದ ಮತದಾರರೊಂದಿಗೆ ನಿಕಟ ಸಂಪರ್ಕ ಇಟ್ಟು ಕೊಂಡಿದ್ದು ಈ ಬಾರಿ ಮೈತ್ರಿ ಅಭ್ಯರ್ಥಿ ಕೆ.ಎಂ.ಸುರೇಶ್ ಅವರನ್ನು ಗೆಲ್ಲಿಸುವಲ್ಲಿ ಚೌಡರೆಡ್ಡಿ ಪಾತ್ರ ಮುಖ್ಯ ಒಂದೊಮ್ಮೆ ಕೆ.ಎಂ.ಸುರೇಶ್ ಸೋತರೆ ಅದಕ್ಕೆ ತೂಪಲ್ಲಿ ಚೌಡರೆಡ್ಡಿ ಅವರೆ ನೇರ ಹೊಣೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮ ಚಂದ್ರಗೌಡ ಮಾತನಾಡಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಚುನಾವಣಾ ಸಿದ್ಧತೆ ಕುರಿತು ಸಭೆ ನಡೆದಿದ್ದು, ಅಭ್ಯರ್ಥಿಯ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ಮಾಜಿ ಸಂಸದ ಎನ್.ಮುನಿ ಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಜೆಡಿಎಸ್,ಬಿಜೆಪಿ ಪಕ್ಷದ ಜಿಲ್ಲಾ ಹಾಗು ತಾಲ್ಲೂಕು ಮಟ್ಟದ ಮುಖಂಡರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now