ವಿಜಯ ದರ್ಪಣ ನ್ಯೂಸ್……
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ನಾಡಹಬ್ಬ ಜಂಬುಸವಾರಿಯಲ್ಲಿ ಅಂಬಾರಿ ಹೊರುವ ಆನೆ ಪ್ರಶಾಂತ್ ಆಯ್ಕೆಯಾಗಿದ್ದಾನೆ ಸಚಿವ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಅಕ್ಟೋಬರ್ 14: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’ ಆನೆಯನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ಪತ್ರಿಕ ಮಾಧ್ಯಮದವರಿಗೆ ಮಾಹಿತಿ ನೀಡಿದರು
ಈ ಕುರಿತು ಇಂದು ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರು ಪತ್ರಿಕಾಗೋಷ್ಠಿ ನಡೆಸಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ರವರು
54 ವರ್ಷ ವಯಸ್ಸಿನ ಪ್ರಶಾಂತ್ ಕಳೆದ 18 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ಅನುಭವ, ಆರೋಗ್ಯ, ಶಾಂತ ಸ್ವಭಾವ ಹಾಗೂ ಅಂಬಾರಿ ಹೊರುವ ಸಾಮರ್ಥ್ಯವನ್ನು ಪರಿಶೀಲಿಸಿ ಆಯ್ಕೆ ಮಾಡಲಾಗಿದೆ. ಆನೆಗಳ ಆರೋಗ್ಯ, ಸುರಕ್ಷತೆ, ಪೌಷ್ಟಿಕ ಆಹಾರ ಮತ್ತು ವಿಶ್ರಾಂತಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು

ಅಂಬಾರಿ ಹೊರುವ ಮೀಸಲು ಆನೆಯಾಗಿ ಧನಂಜಯ, ನಿಶಾನೆ ಆನೆಯಾಗಿ ಅಭಿಮನ್ಯು, ನೌಪತ್ ಆನೆಯಾಗಿ ಗೋಪಿ ಹಾಗೂ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪ ಆಯ್ಕೆಯಾಗಿದ್ದಾರೆ. ಏಕಲವ್ಯ, ಸುಗ್ರೀವ, ಲಕ್ಷ್ಮೀ, ಶ್ರೀಕಂಠ, ಶ್ರೀರಾಮ ಹಾಗೂ ಮಹೇಂದ್ರ ಆನೆಗಳು ಸಾಲಾನೆ ತಂಡದಲ್ಲಿರಲಿವೆಎಂದು ಸಚಿವರು ಮಾಹಿತಿ ನೀಡಿದರು.
ಈ ಬಾರಿಯ ದಸರಾಗೆ ಕೇರಳ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಲು ಸಮ್ಮತಿ ಸೂಚಿಸಿದ್ದು, ಸುಮಾರು 40 ಪ್ರಸಿದ್ಧ ಸಿನಿಮಾ ಕಲಾವಿದರು ಭಾಗವಹಿಸುವ ನಿರೀಕ್ಷೆಯಿದೆ. ನಾಡಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಇದೇ ಸಂದರ್ಭದಲ್ಲಿ ಪ್ರಧಾನ ಅಂಬಾರಿ ಆನೆ ಪ್ರಶಾಂತ್ನ ಆಯ್ಕೆಯನ್ನು ಸಾರುವ ಬಿತ್ತಿಚಿತ್ರವನ್ನು ಸಚಿವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್. ಬಸವಂತಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಜಿ., ಅರಣ್ಯ ಇಲಾಖೆ ಹಾಗೂ ಮೈಸೂರು ಅರಮನೆ ಮಂಡಳಿಯ ಹಿರಿಯ ಅಧಿಕಾರಿಗಳು ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು











