--Ads--

ಜಗದ್ಗುರು ರಾಜೇಂದ್ರ ಶ್ರೀಗಳು ಕಾಶಿಯಿಂದ ಹಿಂತಿರುಗಿದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಸಂಕಲ್ಪ ಹೊಂದಿದ್ದರಿಂದಲೇ ಜೆ ಎಸ್ ಸಮೂಹ ಸಂಸ್ಥೆಗಳು ತಲೆ ಎತ್ತಿವೆ : ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

On: October 16, 2026 6:11 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಜಗದ್ಗುರು ರಾಜೇಂದ್ರ ಶ್ರೀಗಳು ಕಾಶಿಯಿಂದ ಹಿಂತಿರುಗಿದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಸಂಕಲ್ಪ ಹೊಂದಿದ್ದರಿಂದಲೇ ಜೆ ಎಸ್ ಸಮೂಹ ಸಂಸ್ಥೆಗಳು ತಲೆ ಎತ್ತಿವೆ : ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

ತಾಂಡವಪುರ ಅಕ್ಟೋಬರ್ 16 : ಜಗದ್ಗುರು ರಾಜೇಂದ್ರ ಶ್ರೀಗಳು ಕಾಶಿಯಿಂದ ಹಿಂತಿರುಗಿದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಸಂಕಲ್ಪ ಹೊಂದಿದ್ದರಿಂದಲೇ ಜೆ ಎಸ್ ಸಮೂಹ ಸಂಸ್ಥೆಗಳು ತಲೆ ಎತ್ತಿವೆ ಎಂದು ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ರವರು ಹೇಳಿದರು

ಅವರು ನಂಜನಗೂಡಿನ ಜೆಎಸ್‌ಎಸ್ ಮಂಗಳ ಮಂಟಪದಲ್ಲಿ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಭಕ್ತವೃಂದದಿಂದ ಆಯೋಜಿಸಿದ್ದ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವ ಸಮಾರಂಭವನ್ನು ಉದ್ಘಾಟನೆ ಹಾಗೂ ರಾಜೇಂದ್ರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .

ಶ್ರೀಗಳು ಸಮಾರಂಭದಲ್ಲಿ ನೆರೆದಿದ್ದ ಸರ್ವರಿಗೆ ಆಶೀರ್ವಚನ ನೀಡುತ್ತಾ ಮಾತನಾಡಿದ ಸುತ್ತೂರು ಶ್ರೀಗಳು ಜೀವನದಲ್ಲಿ ತಮಗೆ ಯಾವುದನ್ನು ದೊರಕಿಸಿಕೊಳ್ಳಲು ಸಾಧ್ಯವಾಗಲಿಲ್ಲವೋ ಸಮಾಜದಲ್ಲಿ ಯಾರಿಗೆ ದೊರಕಿಸಿಕೊಳ್ಳಲು ಸಾಧ್ಯವಿಲ್ಲವೋ ಅವರು ಬದುಕನ್ನು ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡುವುದು ಎಂದು ರಾಜೇಂದ್ರ ಶ್ರೀಗಳು ಸಂಕಲ್ಪ ಮಾಡಿದ ಕಾರಣದಿಂದಾಗಿಯೇ ಜೆಎಸ್ಎಸ್ ಸಮೂಹಗಳ ಸಂಸ್ಥೆ ವಿಶ್ವದ್ಯಂತ ತಲೆ ಎತ್ತಿದೆ ಎಂದರು.

ಮಾನವೀಯ ನೆಲೆಗಟ್ಟಿನಲ್ಲಿ ರಾಜೇಂದ್ರ ಸ್ವಾಮೀಜಿಯವರು ಮನುಕುಲಕ್ಕೆ ಸಲ್ಲಿಸಿದ ಸೇವೆ ಅಮೂಲ್ಯವಾಗಿದ್ದು ಜನರ ಭಾವನೆಗಳಿಗೆ ಸ್ಪಂದಿಸುವ ಮೂಲಕ ಶಿಕ್ಷಣ, ಆರೋಗ್ಯ ಹಾಗೂ ದಾಸೋಹ ಕ್ಷೇತ್ರದಲ್ಲಿ ಸಮಾಜಕ್ಕೆ ಗಣನೀಯವಾಗಿ ನೆರವಾಗಿದ್ದಾರೆ. ಅವರ ಜಯಂತಿ ಮಹೋತ್ಸವದ ಸಮಯದಲ್ಲಿ ಸಾಂಸ್ಕೃತಿಕ, ಕ್ರೀಡಾ ಹಾಗೂ ಶೈಕ್ಷಣಿಕ ಕ್ಷೇತ್ರಗಳ ಸಾಧಕ ವಿದ್ಯಾರ್ಥಿಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ಮೂಲಕ ಪ್ರೋತ್ಸಾಹಿಸುತ್ತಿರುವುದು ಉತ್ತಮ ಕಾರ್ಯ ಎಂದು ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ಕೆಲವು ತಿಂಗಳ ಅಂತರದಲ್ಲಿ ತಂದೆ ತಾಯಿಯನ್ನು ಕಳೆದುಕೊಂಡ ನಮ್ಮ ಕುಟುಂಬಕ್ಕೆ ಆಸರೆಯಾಗಿ ನಮಗೆ ಮಾರ್ಗದರ್ಶನ ಹಾಗೂ ಧೈರ್ಯವನ್ನು ತುಂಬಿದ್ದು ಸುತ್ತೂರಿನ ಶ್ರೀಗಳು ಇಂದಿಗೂ ನನ್ನ ರಾಜಕೀಯ ಜೀವನಕ್ಕೆ ಅವರೇ ಮಾರ್ಗದರ್ಶಕರು ಸಮಾಜಸೇವೆ ಹಾಗೂಸರ್ಕಾರಿ ಕೆಲಸಗಳನ್ನು ಮಾಡುವ ಬಗ್ಗೆ ನನಗೆ ಮಾರ್ಗದರ್ಶನ ನೀಡುತ್ತಾ ಮಾಡುತ್ತಿರುತ್ತಾರೆ.ಬಸವೇಶ್ವರರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕಾಯಕ ಹಾಗೂ ದಾಸೋಹದ ಮಹತ್ವವನ್ನು ಸಮಾಜಕ್ಕೆ ತಿಳಿಸಿಕೊಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಲಕ್ಷಾಂತರ ಮಂದಿಗೆ ಅಕ್ಷರದ ಬೆಳಕನ್ನು ನೀಡಿದ ರಾಜೇಂದ್ರ ಸ್ವಾಮೀಜಿಯವರ ದೂರದೃಷ್ಟಿತ್ವದ ಫಲವಾಗಿ ಅಕ್ಷರ, ಅನ್ನ ಹಾಗೂ ಆರೋಗ್ಯ ಸೇವೆಗಳು ಜೆಎಸ್‌ಎಸ್ ಸಂಸ್ಥೆಯ ಮೂಲಕ ಜನರಿಗೆ ತಲುಪುತ್ತಿದೆ ಎಂದು ಶಾಸಕರು ರಾಜೇಂದ್ರ ಶ್ರೀಗಳನ್ನು ಸ್ಮರಿಸಿಕೊಂಡರು.

ನಿವೃತ್ತ ಪೊಲೀಸ್ ಮಹಾನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಸಮಾರಂಭದಲ್ಲಿ ರಾಜೇಂದ್ರ ಶ್ರೀಗಳಿಗೆ ನುಡಿ ನಮನ ಸಲ್ಲಿಸಿದರು.

ಇದೇ ಸಂದರ್ಭ ವಿವಿಧ ಶಿಕ್ಷಣ, ಕ್ರೀಡಾ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಗಣನೀಯ ಸಾಧನೆ ತೋರಿರುವ ನಂಜನಗೂಡು ತಾಲೂಕಿನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಮಾಜಿ ಶಾಸಕ ಕೇಶವಮೂರ್ತಿ ಪ್ರಥಮ ದರ್ಜೆ ಗುತ್ತಿಗೆದಾರ ಯು.ಎನ್.ಪದ್ಮನಾಭರಾವ್, , ಶೋಭ ರವಿಕಾಂತೇಗೌಡ, ದೇವನೂರು ಗುರುಮಲ್ಲೇಶ್ವರ ದಾಸೋಹ ಮಠಾಧ್ಯಕ್ಷ ಶ್ರೀ ಮಹಾಂತಸ್ವಾಮೀಜಿ, ಶ್ರೀ ಗುರು ಕಂಬಳೀಶ್ವರ ಮಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ಧಲಿಂಗಸ್ವಾಮೀಜಿ ವಿವಿಧ ಮಠಾಧೀಶರು ಭಕ್ತಾದಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ರೈತ ದಸರಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಸಚಿವರು

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ನಾಡಹಬ್ಬ ಜಂಬುಸವಾರಿಯಲ್ಲಿ  ಅಂಬಾರಿ ಹೊರುವ ಆನೆ ಪ್ರಶಾಂತ್ ಆಯ್ಕೆಯಾಗಿದ್ದಾನೆ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರಿನ ಜಿ. ಪಂ. ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕೊಪ್ಪಳದ ಶ್ರೀಗಳು ಸುತ್ತೂರು ಮಠಕ್ಕೆ ಭೇಟಿ

ಸುತ್ತೂರು ಮಠದ ಶ್ರೀ ಶಿವರಾತ್ರಿಶ್ವರ ಮಾಧ್ಯಮ ಪ್ರಶಸ್ತಿ ಪುರಸ್ಕೃತ  ಪತ್ರಕರ್ತ ಟಿಕೆ ಬಸವರಾಜು ರವರಿಗೆ ರೈತ ಸಂಘದಿಂದ ಸನ್ಮಾನ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದ ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರು, ಶಾಸಕರುಗಳು