ವಿಜಯ ದರ್ಪಣ ನ್ಯೂಸ್….
ನಂಜನಗೂಡಿನ ಸಿಟಿಜನ್ ಶಾಲೆಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳು ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳಬೇಕು :ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ ಅಕ್ಟೋಬರ್ 17 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನ ಸಿಟಿಜನ್ ಶಾಲೆಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಂಜನಗೂಡು ತಾಲ್ಲೂಕು ಆಡಳಿತ ಹಾಗೂಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಪಾಲ್ಗೊಂಡು. ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರೆವೇರಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳೊಂದಿಗೆ ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ಯುವಜನರ ಜವಾಬ್ದಾರಿಗಳ ಕುರಿತು ಅರ್ಥಪೂರ್ಣವಾಗಿ ಚರ್ಚಿಸಿ ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸಿದರು
ಯುವಜನರು ಕೇವಲ ಭವಿಷ್ಯದ ನಾಯಕರು ಮಾತ್ರವಲ್ಲ, ಇಂದಿನ ಪ್ರಜಾಪ್ರಭುತ್ವದ ಸಕ್ರಿಯ ಪಾಲುದಾರರೂ ಹೌದು. ತಮ್ಮ ಹಕ್ಕುಗಳನ್ನು ಅರಿತು, ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸಿ, ಸಮಾಜದ ಒಳಿತಿಗಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಯುವಕರ ಜವಾಬ್ದಾರಿಯಾಗಿದೆ. ಎಂದ ಶಾಸಕರು ಪ್ರಶ್ನಿಸುವ ಮನೋಭಾವ, ವಿಚಾರಪೂರ್ಣ ಚರ್ಚೆ ಮತ್ತು ಸಂವಿಧಾನದ ಮೌಲ್ಯಗಳ ಮೇಲಿನ ನಂಬಿಕೆಯೇ ಬಲಿಷ್ಠ ಪ್ರಜಾಪ್ರಭುತ್ವದ ಅಡಿಪಾಯ. ಎಂದು ಶಾಸಕರು ಹೇಳಿದರು
ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವುದು, ಸಂವಿಧಾನದ ಮೌಲ್ಯಗಳನ್ನು ಗೌರವಿಸುವ ಮನೋಭಾವ ಬೆಳೆಸುವುದು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಪ್ರೇರೇಪಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಯುವಕ-ಯುವತಿಯೂ ಪ್ರಜಾಪ್ರಭುತ್ವದ ನಿರ್ಮಾಣದಲ್ಲಿ ತನ್ನ ಪಾತ್ರವನ್ನು ಅರಿತು, ಸಕ್ರಿಯವಾಗಿ ಭಾಗವಹಿಸಿದಾಗ ಮಾತ್ರ ನಮ್ಮ ದೇಶದ ಪ್ರಜಾಪ್ರಭುತ್ವ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ದರ್ಶನ್ ಧ್ರುವನಾರಾಯಣ್ ರವರು ಹೇಳಿದರು
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ , ತಹಸೀಲ್ದಾರ್ ಸ್ಮಿತಾ ರಾಮು , BEO ಮಹೇಶ್ , ಗಾಯತ್ರಿ ಮೋಹನ್ ಸೇರಿದಂತೆ ಹಲವರು ಹಾಜರಿದ್ದರು.











