ವಿಜಯ ದರ್ಪಣ ನ್ಯೂಸ್……
ನಿವೃತ್ತ ಶಿಕ್ಷಕ ಚಂದ್ರಶೇಖರ ಮನೆಯಲ್ಲಿ ದುರ್ಗಾಷ್ಟಮಿ ಪೂಜಾ

ವಿಜಯಪುರ, ದೇವನಹಳ್ಳಿ ತಾಲ್ಲೂಕು: ಸುಮಾರು 35 ವರ್ಷಗಳ ಕಾಲದಿಂದ ದುರ್ಗಾಷ್ಟಮಿ ಪೂಜೆಯನ್ನು ನಮ್ಮ ಮನೆಯಲ್ಲಿ ಸಾಂಕೇತಿಕವಾಗಿ ಆಚರಿಸುತ್ತಿದ್ದು, ನಮ್ಮ ಕುಟುಂಬಕ್ಕೆ ಬಂದ ಕಷ್ಟ ಕಾರ್ಪಣ್ಯಗಳು ದೂರವಾಗಿ ಸುಖಿಯ ಜೀವನವನ್ನು ನಡೆಸುತ್ತಿದ್ದೇವೆ ಇಂದು ತಿಳಿಯಪಡಿಸುತ್ತಾ
ಚಿ.ಮಾ ಸುಧಾಕರ್ ರವರ ಆಶಯದಂತೆ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ಆಚರಿಸಲಾಗುತ್ತಿದೆ ಎಂದು ಕೆ.ಎಚ್ ಚಂದ್ರಶೇಖರ್ ತಿಳಿಸಿದರು.
ವಿಜಯಪುರ ಪಟ್ಟಣದ ಬಸವೇಶ್ವರ ನಗರದಲ್ಲಿ ವಾಸವಾಗಿರುವ ನಿವೃತ್ತ ಶಿಕ್ಷಕರಾದ ಕೆ ಎಚ್ ಚಂದ್ರಶೇಖರ್ ರವರ ನಿವಾಸದಲ್ಲಿ ಅಖಿಲ ಕರ್ನಾಟಕ ಮಿತ್ರ ಸಂಘ ಕನ್ನಡ ಸಾಹಿತ್ಯ ಪರಿಷತ್ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ರವರ ಸಹಕಾರದೊಂದಿಗೆ ದುರ್ಗಾಷ್ಟಮಿ ಪೂಜೆಯನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಕಡಪದ್ ದಸರಾ ಪೂಜೆಯ ಮಾಹಿತಿ ನೀಡುತ್ತಾಹಿಂದೂ ಧರ್ಮದಲ್ಲಿ ದುರ್ಗಾ ದೇವಿಯ ಒಂಬತ್ತು ಅಭಿವ್ಯಕ್ತಿಗಳು. ಈ ಅಭಿವ್ಯಕ್ತಿಗಳು ವಿಶೇಷವಾಗಿ ನವರಾತ್ರಿ ಹಬ್ಬದ ಸಮಯದಲ್ಲಿ ಪೂಜಿಸಲ್ಪಡುತ್ತಾರೆ. ಅಲ್ಲಿ ಪ್ರತಿ ರಾತ್ರಿಯೂ ಕ್ರಮವಾಗಿ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ. ದುರ್ಗಾ ದೇವಿಯ ಒಂಬತ್ತು ರೂಪಗಳು (ಗೌರಿಯ ಸಮಾನಾರ್ಥಕ) ಅಥವಾ (ಪಾರ್ವತಿ): ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡ, ಸ್ಕಂದಮಾತಾ, ಕಾಳರಾತ್ರಿ, ಕಾತ್ಯಾಯನಿ, ಮಹಾಗೌರಿ ಮತ್ತು ಸಿದ್ಧಿಧಾತ್ರಿ ರಾಜನು ಕುಬೇರನನ್ನು ಪ್ರಾರ್ಥಿಸಿದಾಗ ಅಲ್ಲಿಯೇ ಇದ್ದ ಶಮೀ ಮರದ ಒಂದೊಂದು ಎಲೆಯೂ ಚಿನ್ನದ ನಾಣ್ಯವಾಗುತ್ತವೆ.
ಇದರಿಂದ ಸಂತಸಗೊಂಡ ಕೌಸ್ತನು ನಾಣ್ಯಗಳನ್ನು ಗುರುಗಳಿಗೆ ಅರ್ಪಿಸುತ್ತಾನೆ. ಗುರುದಕ್ಷಿಣೆ ನೀಡಿ, ಉಳಿದ ನಾಣ್ಯಗಳನ್ನು ದಾನ ಮಾಡುತ್ತಾನೆ. ಆದ್ದರಿಂದ ಶಮೀ (ಬನ್ನಿ) ಮರವೆಂದರೇ ಚಿನ್ನ, ಬಂಗಾರ ಎನ್ನುವ ನಂಬಿಕೆ ಮೂಡಿಬಂದಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಅಧ್ಯಕ್ಷ ಮಾರ್ಕೆಟ್ ವೆಂಕಟೇಶ್ ವಹಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಮಿತ್ರ ಸಂಘದ ಅಧ್ಯಕ್ಷ ಚಿ.ಮಾ. ಸುಧಾಕರ್ ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕ ಅಧ್ಯಕ್ಷ ಕನಕ ರಾಜ್ ದೇವನಹಳ್ಳಿ ತಾಲ್ಲೂಕು ಕನ್ನಡ ಕಲಾವಿದರ ಸಂಘದ ಗೌರವ ಕಾರ್ಯದರ್ಶಿ ಸುಬ್ರಮಣಿ ,ವಾಲ್ಮೀಕಿ ಸಂಘದ ನಿರ್ದೇಶಕ ಕುಮಾರ್, ಪೋಲಿಸ್ ಇಲಾಖೆಯ ವಿಶ್ರಾಂತ ನೌಕರ ನಾಗರಾಜ್, ಮಹಂತಿಮಠ ಧರ್ಮ ಸಂಸ್ಥೆಯ ಕಾರ್ಯದರ್ಶಿ ವಿಶ್ವನಾಥ್, ರಾಷ್ಟ್ರೀಯ ಸೀನಿಯರ್ ಚೇಂಬರ್ ಕಾರ್ಯದರ್ಶಿಗಳು ರಾಷ್ಟ್ರ ಪ್ರಶಸ್ತಿ ವಿಜೇತ ಎಂ ಶಿವಕುಮಾರ್, ಸಾಮಾಜಿಕ ಕಾರ್ಯಕರ್ತ ವಿ ಎನ್ ಸೂರ್ಯ ಪ್ರಕಾಶ್, ನಿವೃತ್ತ ಶಿಕ್ಷಕರಾದ ಓಂಕಾರಮ್ಮ ಪದ್ಮ ಗೋಪಾಲ್, ವಿನುತ ಸಂಪತ್ತು, ತನುಜಾ ಮಣಿಕಂಠ ಎ.ಬಿ.ಪರಮೇಶಯ್ಯ ಎ.ಎಂ.ನಾರಾಯಣಸ್ವಾಮಿ ಮಹಾತ್ಮಾಂಜೀನೆಯ ,ಭರತ್ ಶಿಕ್ಷಕರು ಹಾಗೂ ವಿವಿಧ ಇಲಾಖೆಯ ನೌಕರರು ಉಪಸ್ಥಿತರಿದ್ದರು.
.









