--Ads--

ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಹೋಮ : ಶ್ರೀ ಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು

On: October 22, 2026 1:27 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಶ್ರೀ ಆದಿಶಕ್ತಿ ಮಹಾ ಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಪೂಜೆ ಸಂಪನ್ನ

ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಹೋಮ : ಶ್ರೀ ಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಶಿವನಾಪುರ ಗ್ರಾಮದ ಶ್ರೀ ಆದಿಶಕ್ತಿ ಮಹಾ ಸಂಸ್ಥಾನ ಮಠದ ವಹ್ನಿಕುಲ ಕ್ಷತ್ರಿಯ ಗುರುಪೀಠದಲ್ಲಿ ಶರನ್ನವರಾತ್ರಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡವು.

ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಸುಮಾರು 11 ದಿನಗಳ ಕಾಲ ನಿರಂತರವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ದೇವಿಗೆ ಅಭಿಷೇಕ, ಚಂಡಿಹೋಮ, ಮಹಾಪೂರ್ಣಾಹುತಿ, ಪ್ರಧಾನ ಅಭಿಷೇಕ, ಮಹಾಮಂಗಳಾರತಿ ಹಾಗೂ ಭಕ್ತರಿಗೆ ಪ್ರಸಾದ ವಿನಿಯೋಗ ನೆರವೇರಿಸಲಾಯಿತು.

ಶರನ್ನವರಾತ್ರಿಯ ಕೊನೆಯ ದಿನವಾದ ಬುಧವಾರ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ಬಳಿಕ ಶ್ರೀ ಆದಿಶಕ್ತಿಯ ಪಲ್ಲಕ್ಕಿ ಉತ್ಸವವನ್ನು ಮಠದಿಂದ ಆರಂಭಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಯಿತು. ಭಕ್ತರ ಭಾಗವಹಿಸುವಿಕೆಯೊಂದಿಗೆ ಉತ್ಸವ ಸಂಭ್ರಮದಿಂದ ಜರುಗಿದ್ದು, ಶರನ್ನವರಾತ್ರಿ ಕಾರ್ಯಕ್ರಮಗಳಿಗೆ ಅದ್ದೂರಿ ತೆರೆ ಎಳೆಯಲಾಯಿತು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಪ್ರಣವಾನಂದಪುರಿ ಮಹಾಸ್ವಾಮಿಗಳು, ಶರನ್ನವರಾತ್ರಿ ಪೂಜಾ ಕಾರ್ಯಕ್ರಮಗಳ ಯಶಸ್ಸಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮುದಾಯದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಿದರು.

“ಭಕ್ತರ ಸಹಕಾರದಿಂದ ಪೂಜಾ ಕಾರ್ಯಕ್ರಮಗಳು ನಾವು ನಿರೀಕ್ಷಿಸಿದ್ದಕ್ಕಿಂತಲೂ ಅದ್ಭುತವಾಗಿ ಹಾಗೂ ಸಕಾಲದಲ್ಲಿ ನೆರವೇರಿವೆ. ತಾಯಿ ಜಗನ್ಮಾತೆಯ ಆಶೀರ್ವಾದ ಸಮಸ್ತ ಭಕ್ತರ ಮೇಲೂ ಸದಾ ಇರಲಿ. ಮಠದ ಅಭಿವೃದ್ಧಿ ಹಾಗೂ ಸಮಸ್ತ ಮನುಕುಲದ ಕಲ್ಯಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕು,” ಎಂದು ಶ್ರೀಗಳು ಕರೆ ನೀಡಿದರು.

ಶರನ್ನವರಾತ್ರಿ ಉತ್ಸವದ ಕಾರ್ಯಕ್ರಮದಲ್ಲಿ ಶ್ರೀ ಆದಿಶಕ್ತಿ ಮಹಾ ಸಂಸ್ಥಾನ ಮಠದ ಕಮಿಟಿಯ ಸದಸ್ಯರುಗಳು ವಹ್ನಿಕುಲ ಕ್ಷತ್ರಿಯ ಸಮುದಾಯದ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now