--Ads--

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕೋತನೂರು ಕೋಡಹಳ್ಳಿ ಬೆಟ್ಟಹಳ್ಳಿ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ್ ಪ್ರಸಾದ್ ಭೂಮಿ ಪೂಜೆ

On: October 24, 2026 4:04 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್..,…..

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕೋತನೂರು ಕೋಡಹಳ್ಳಿ ಬೆಟ್ಟಹಳ್ಳಿ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ್ ಪ್ರಸಾದ್ ಭೂಮಿ ಪೂಜೆ

ತಾಂಡವಪುರ ಅಕ್ಟೋಬರ್ 24 ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕೋತನೂರು ಕೋಡಹಳ್ಳಿ ಬೆಟ್ಟಹಳ್ಳಿ ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ 30 ಲಕ್ಷ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ್ ಪ್ರಸಾದ್ ಭೂಮಿ ಪೂಜೆ ನೆರೆವೇರಿಸಿದರು

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕೂತನೂರು ಗ್ರಾಮದಲ್ಲಿ ಅಂದಾಜು ₹50 ಲಕ್ಷ ವೆಚ್ಚದಲ್ಲಿ ಸಾಮಾನ್ಯ ವರ್ಗದವರ ಬೀದಿಯಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಗಣೇಶ್ ಪ್ರಸಾದವರು ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜನರಿಗೆ ಉತ್ತಮ ರಸ್ತೆ ಸೌಲಭ್ಯ ಕಲ್ಪಿಸುವುದು ನಮ್ಮ ಸಂಕಲ್ಪವಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನಮ್ಮ ಧ್ಯೇಯ. ನಮ್ಮ ಗುರಿ ಎಂದು ಹೇಳಿದ ಶಾಸಕರುಕೋಡಹಳ್ಳಿ ಗ್ರಾಮದಲ್ಲಿ ಅಂದಾಜು ₹50 ಲಕ್ಷ ವೆಚ್ಚದಲ್ಲಿ ಸಾಮಾನ್ಯ ವರ್ಗದವರ ಬೀದಿಯಲ್ಲಿ ಕೈಗೊಳ್ಳಲಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ತೆಗೆದುಕೊಳ್ಳಲಾಗಿದೆ ಎಂದರು.

ಬೆಟ್ಟಹಳ್ಳಿ ಗ್ರಾಮದಲ್ಲಿ ಅಂದಾಜು ₹30 ಲಕ್ಷ ವೆಚ್ಚದಲ್ಲಿ ಸಾಮಾನ್ಯ ವರ್ಗದವರ ಬೀದಿಯಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ಮಾಡಲಾಗಿದೆ ಎಂದು ಹೇಳಿದ ಶಾಸಕರು ಈಗಾಗಲೇ ಬಹುತೇಕ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗಿದ್ದು ರಸ್ತೆಗಳು ಪ್ರಗತಿಯಲ್ಲಿದ್ದು ಕಿರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಕಾಡಾ ಅಧ್ಯಕ್ಷ ನಂಜಪ್ಪನವರು, ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮದ ಮುಖಂಡರು ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now