--Ads--

ಮಹರ್ಷಿ ವಾಲ್ಮೀಕಿ ಜಯಂತಿ ಭವ್ಯ ಮೆರವಣಿಗೆಗೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ

On: October 26, 2026 11:33 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್………

ಮಹರ್ಷಿ ವಾಲ್ಮೀಕಿ ಜಯಂತಿ ಭವ್ಯ ಮೆರವಣಿಗೆಗೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ

ತಾಂಡವಪುರ ಅಕ್ಟೋಬರ್ 26: ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಭವ್ಯ ಮೆರವಣಿಗೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ  ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಚಿವರು ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ನಾಡಿನ ಜನತೆಗೆ ಶುಭಾಶಯ ಕೋರುವ ಮೂಲಕ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳನ್ನು ವಿವರಿಸಿದರು
ಜ್ಞಾನ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾದ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳು ಮತ್ತು ಜೀವನ ಸಂದೇಶಗಳು ಇಡೀ ಸಮಾಜಕ್ಕೆ ಸದಾ ದಾರಿ ದೀಪ ಹಾಗೂ ಪ್ರೇರಣೆಯಾಗಿವೆ. ರಾಮಾಯಣ ಮಹಾಕಾವ್ಯದ ಮೂಲಕ ಜಗತ್ತಿಗೆ ಶಾಂತಿ, ಸಮಾನತೆ ಮತ್ತು ನೈತಿಕ ಮೌಲ್ಯಗಳನ್ನು ಸಾರಿದ ವಾಲ್ಮೀಕಿ ಅವರ ತತ್ವಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಿದ್ದು, ಸಮಾಜದಲ್ಲಿ ಶೋಷಿತ ಮತ್ತು ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ವಾಲ್ಮೀಕಿಯವರ ಆಶಯಗಳು ಮುಖ್ಯ ಶಕ್ತಿಯಾಗಿವೆ. ಎಂದು ಹೇಳಿದರು

ಈ ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಮೈಸೂರು ಮೂಡ ಮಾಜಿ ಅಧ್ಯಕ್ಷ ರಾಜೀವ್ ಸೇರಿದಂತೆ ವಾಲ್ಮೀಕಿ ಸಮಾಜದ ಹಿರಿಯ ಮುಖಂಡರು, ವಿವಿಧ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಅಪಾರ ಸಂಖ್ಯೆಯ ಸಾರ್ವಜನಿಕರು ಮುಖಂಡರುಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಹಳ್ಳಿಕಾರ್ ತಳಿ ಜಾತಿಯ ಹೋರಿಗಳನ್ನು ಬೆಳೆಸಿ ಉಳಿಸಲು ಸರ್ಕಾರ ಪ್ರೋತ್ಸಾಹ ನೀಡಬೇಕು ರೈತ ಸಂಘದ ಮುಖಂಡ ಹೊಸಕೋಟೆ ಬಸವರಾಜು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ರೈತ ದಸರಾ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಸಚಿವರು

ಜಗದ್ಗುರು ರಾಜೇಂದ್ರ ಶ್ರೀಗಳು ಕಾಶಿಯಿಂದ ಹಿಂತಿರುಗಿದ ಮೇಲೆ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಸಂಕಲ್ಪ ಹೊಂದಿದ್ದರಿಂದಲೇ ಜೆ ಎಸ್ ಸಮೂಹ ಸಂಸ್ಥೆಗಳು ತಲೆ ಎತ್ತಿವೆ : ಸುತ್ತೂರು ಮಠಾಧ್ಯಕ್ಷ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ನಾಡಹಬ್ಬ ಜಂಬುಸವಾರಿಯಲ್ಲಿ  ಅಂಬಾರಿ ಹೊರುವ ಆನೆ ಪ್ರಶಾಂತ್ ಆಯ್ಕೆಯಾಗಿದ್ದಾನೆ ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರಿನ ಜಿ. ಪಂ. ಸಭಾಂಗಣದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ನಿರ್ವಹಣೆ ಹಾಗೂ ನಗರಾಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಾಲೋಚನಾ ಸಭೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿರುವ ಕೊಪ್ಪಳದ ಶ್ರೀಗಳು ಸುತ್ತೂರು ಮಠಕ್ಕೆ ಭೇಟಿ