--Ads--

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ

On: October 26, 2026 12:05 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಶಾಸಕ ಸಿ ಎನ್ ಬಾಲಕೃಷ್ಣ

ಚನ್ನರಾಯಪಟ್ಟಣ: ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶಾಸಕ ಸಿ ಎನ್ ಬಾಲಕೃಷ್ಣರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿಯವರು ಜಗತ್ತಿಗೆ ಶ್ರೀ ರಾಮಾಯಣಂ ದರ್ಶನಂ ಎಂಬ ಮಹಾಕಾವ್ಯವನ್ನು ಕೊಡುಗೆಯಾಗಿ ನೀಡಿದ ಆದಿಕವಿ ಹಾಗೂ ಮಹಾನ್ ದಾರ್ಶನಿಕರು ಎಂದರು. ಪ್ರತಿಯೊಬ್ಬ ಮನುಷ್ಯನ ಆದರ್ಶ ಜೀವನ ಹೇಗಿರಬೇಕು, ಮಾನವೀಯ ಮೌಲ್ಯಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು. ಸತ್ಯ, ಧರ್ಮ, ನ್ಯಾಯ ಹಾಗೂ ಕರ್ತವ್ಯ ನಿಷ್ಠೆಯೊಂದಿಗೆ ಬದುಕನ್ನು ಹೇಗೆ ರೂಪಿಸಿಕೊಳ್ಳಬೇಕು ಎಂಬುದನ್ನು ತಮ್ಮ ಕಾವ್ಯದ ಮೂಲಕ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ ಎಂದರು.

ವಾಲ್ಮೀಕಿಯವರ ಚಿಂತನೆಗಳು ಹಾಗೂ ರಾಮಾಯಣದ ತತ್ವಗಳು ವ್ಯಕ್ತಿಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಶಕ್ತಿಯನ್ನು ಹೊಂದಿವೆ. ಅವರ ಆದರ್ಶಗಳನ್ನು ಸ್ಮರಿಸಿ ಸಮಾಜದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯ ಭಾಷಣಗಾರರಾಗಿ ಭಾಗವಹಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸತೀಶ್ ರವರು ಮಾತನಾಡಿ ರಾಮಾಯಣದ ಮೌಲ್ಯಗಳು ಶತಮಾನಗಳಿಂದಲೂ ನಮ್ಮ ಜೀವನದ ಭಾಗವಾಗಿದ್ದು, ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ. ಮುಂದಿನ ಪೀಳಿಗೆಯ ಬದುಕಿಗೂ ಈ ಮೌಲ್ಯಗಳು ಮಾರ್ಗದರ್ಶನ ನೀಡಲಿವೆ. ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಜೆ ಎಸ್ ಶಂಕರಪ್ಪ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿಗಳಾದ ಜಿ ಆರ್ ಹರೀಶ್, ಡಿವೈಎಸ್ಪಿ ಶಿವಮೂರ್ತಿ, ಪುರಸಭಾ ಮುಖ್ಯ ಅಧಿಕಾರಿ ಪ್ರಕಾಶ್, ಸಮಾಜ ಕಲ್ಯಾಣ ಅಧಿಕಾರಿ ತ್ಯಾಗರಾಜು, ಕಚೇರಿ ವ್ಯವಸ್ಥಾಪಕ ಮೋಹನ್, ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಎಲ್ ಪಿ ಪ್ರಕಾಶ್, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಜಿ ಆರ್ ಮೂರ್ತಿ, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಬಿಎಂಆರ್ ಮಂಜಣ್ಣ, ಹೇಮಾವತಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ತೋಟಿ ಜಯರಾಮ್, ಟಿಎಪಿಎಂಎಸ್ ನ ನಿರ್ದೇಶಕ ಉಮೇಶ್, ಕೆಡಿಪಿ ಸದಸ್ಯರುಗಳಾದ ಗುರುಪ್ರಸಾದ್, ಕಬ್ಬಾಳ್ ಮಹೇಶ್, ದಡಿಗಟ್ಟ ಮಧು, ಸೇರಿದಂತೆ ಇತರರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now