ಆಗಸ್ಟ್ 20 ರಂದು ಡಿ. ದೇವರಾಜ ಅರಸು 108ನೇ ಜನ್ಮದಿನಾಚರಣೆ.

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ . ಆಗಸ್ಟ್ 18

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 20 ರಂದು ಬೆಳಗ್ಗೆ 10.00 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಹಿಂಭಾಗ ಇರುವ ಡಿ‌.ದೇವರಾಜು ಅರಸು ಭವನದಲ್ಲಿ ಡಿ.ದೇವರಾಜು ಅರಸುರವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟನೆ ಮಾಡಲಿದ್ದಾರೆ.

ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ, ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್,
ನೆಲಮಂಗಲ ವಿಧಾನಸಭಾ
ಕ್ಷೇತ್ರದ ಶಾಸಕ ಶ್ರೀನಿವಾಸಯ್ಯ.ಎನ್, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ತುಳಸಿ ಮದ್ದಿನೇನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಿರುಪಮ.ಸಿ.ಮೌಳಿ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಎಲ್ಲಾ ನಾಮನಿರ್ದೇಶಿತ ಸದಸ್ಯರು ಎಲ್ಲಾ ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

&&&&&&&&&&&&&&&&&&&&&&&&&&&&&&&&&&&&&&&&&&&&&&&&

ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಅಹ್ವಾನ .

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 18.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅರ್ಹ ಅತಿಥಿ ಶಿಕ್ಷಕರನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

2023-24ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಪಡೆಯಲು ಉದ್ದೇಶಿಸಿರುವುದರಿಂದ ಸ್ಥಳೀಯ ಅರ್ಹ ಅತಿಥಿ ಶಿಕ್ಷಕರು ತಮ್ಮ ಸ್ವವಿವರಗಳಿರುವ (biodata, resume) ಮನವಿಗಳನ್ನು ಅವಶ್ಯ ದಾಖಲೆಗಳೊಂದಿಗೆ ಈ ಕೆಳಕಂಡ ಕಛೇರಿಗೆ/ಶಾಲೆಗೆ ಸಲ್ಲಿಸುವುದು.

1.ಹೊಸಕೋಟೆ ತಾಲ್ಲೂಕಿನ ಗಿಡ್ಡಪ್ಪನಹಳ್ಳಿ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮಕ್ಕೆ :-ಬಿ.ಎಸ್.ಸಿ/ಬಿ.ಎಡ್ ವಿದ್ಯಾರ್ಹತೆ ಪಡೆದಿರುವ
ಗಣಿತ ಶಿಕ್ಷಕರು,

(11ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ಕನ್ನಡ ಭಾಷಾ ಶಿಕ್ಷಕರು
ವಿದ್ಯಾರ್ಹತೆ:-ಎಂ.ಎ/ಬಿ.ಎಡ್,

ಜೀವಶಾಸ್ತ್ರ ಶಿಕ್ಷಕರು
ವಿದ್ಯಾರ್ಹತೆ:- ಎಂ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

2.ದೇವನಹಳ್ಳಿ ತಾಲ್ಲೂಕಿನ ದೇವನಾಯಕನಹಳ್ಳಿ,
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ
(6 ರಿಂದ 10ನೇ ತರಗತಿ- ರಾಜ್ಯ ಪಠ್ಯಕ್ರಮ)
ವಿಜ್ಞಾನ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್,

(11 ನೇ ತರಗತಿ – ರಾಜ್ಯ ಪಠ್ಯಕ್ರಮ) (ಪಿ.ಸಿ.ಎಂ.ಬಿ)
ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Physics & Mathematics)

ವಿಜ್ಞಾನ ಶಿಕ್ಷಕರು
ಎಂ.ಎಸ್.ಸಿ/ಬಿ.ಎಡ್
ವಿದ್ಯಾರ್ಹತೆ:-(Chemistry & Biology) ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

3. ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾ||
ಆಂಗ್ಲ ಭಾಷಾ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು.

4.ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ, ನೆಲಮಂಗಲ ತಾ||
ಗಣಿತ ಶಿಕ್ಷಕರು
ವಿದ್ಯಾರ್ಹತೆ:- ಬಿ.ಎಸ್.ಸಿ/ಬಿ.ಎಡ್ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25/08/2023

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು
ಪ್ರಾಂಶುಪಾಲರು, ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಗಿಡ್ಡಪ್ಪನಹಳ್ಳಿ, ಹೊಸಕೋಟೆ ದೂರವಾಣಿ ಸಂಖ್ಯೆ
9632933397,
8660971267,
8310397004,

ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾ||
9742998287,
9900945262,

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ಗ್ರಾಮ, ನೆಲಮಂಗಲ ತಾಲ್ಲೂಕು.
8317403213,
8660197516

ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ತಾಲ್ಲೂಕು.
9739706158,
9986874875,

ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,
ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-29787455 ಅನ್ನು ಸಂಪರ್ಕಿಸಬಹುದು.

@@@@@@@@@@@@@@@@@@@@@@@@@@@@@@@@@@@@@##@@@@

ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ನಾಮನಿರ್ದೇಶಿತ ಸದಸ್ಯರಾಗಲು ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 18 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದ್ದು, ಸಮಿತಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಪ್ರತಿನಿಧಿಯನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿಕೊಂಡು ಹೊಸದಾಗಿ ಸಮಿತಿಯನ್ನು ರಚಿಸಬೇಕಾಗಿರುತ್ತದೆ. ಆದ್ದರಿಂದ ಸಮಿತಿಯ ಸದಸ್ಯರಾಗಲು ಆಸಕ್ತಿಯುಳ್ಳವರು ತಮ್ಮ ವಿವರಗಳನ್ನು ನಿಗದಿತ ನಮೂನೆಯ ಅರ್ಜಿಯಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 28 ಕೊನೆಯ ದಿನಾಂಕವಾಗಿರುತ್ತದೆ. ನಿಗದಿತ ದಿನಾಂಕದ ನಂತರ ಸ್ವೀಕೃತಗೊಳ್ಳುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿಯೊಂದಿಗೆ ಸಂಬಂಧಪಟ್ಟ ಅಗತ್ಯ ದಾಖಲಾತಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ಉಪ ನಿರ್ದೇಶಕರ ಕಛೇರಿ-080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ-080-7681784, ದೊಡ್ಡಬಳ್ಳಾಪುರ-080-7623681, ಹೊಸಕೋಟೆ-080-7931528, ನೆಲಮಂಗಲ-080-7723172 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಶ್ರೀಮತಿ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹₹

ಸ್ವಯಂ ಉದ್ಯೋಗ ಹೊಂದಲು ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 18

 2023-24 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾಪಟುಗಳು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು (ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರ).
ಅರ್ಜಿದಾರರು ನಿರುದ್ಯೋಗಿಗಳಾಗಿದ್ದು, ಸ್ವಯಂ ಉದ್ಯೋಗ ಹೊಂದಲು ಘಟಕ ವೆಚ್ಚದಲ್ಲಿ ಶೇಕಡಾ 75 ರಷ್ಟು ರೂ. 15.00 ಲಕ್ಷಗಳನ್ನು ಇಲಾಖೆ ವತಿಯಿಂದ ಭರಿಸಲಾಗುವುದು ಹಾಗೂ ಶೇಕಡಾ 25 ರಷ್ಟು ವೆಚ್ಚವನ್ನು ಸ್ವಯಂ ಭರಿಸುವ ಷರತ್ತಿಗೆ ಬದ್ಧರಾಗಿರಬೇಕು.
ಕ್ರೀಡಾಪಟುಗಳು ಅಂತರಾಷ್ಟ್ರೀಯ / ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು.

ಜಿಮ್ ಸಲಕರಣೆಗಳನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡಲಾಗುವುದು.

ಕ್ರೀಡಾಪಟುಗಳು ಕರ್ನಾಟಕದ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾ ತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ.
ಕ್ರೀಡಾಪಟುಗಳು ಸ್ವಯಂ ದೃಢೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಂಬಂಧಪಟ್ಟ ಜಿಲ್ಲೆಯ ಉಪ / ಸಹಾಯಕ ನಿರ್ದೇಶಕರ ಮೂಲಕ ಸಲ್ಲಿಸತಕ್ಕದ್ದು.
ಕ್ರೀಡಾಪಟುವಿನ ಹೆಸರು ಹಾಗೂ ಭಾವಚಿತ್ರವುಳ್ಳ ಪಡಿತರ ಚೀಟಿ, ಮತದಾರರ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸುವುದು.

ಅಂತರಾಷ್ಟ್ರೀಯ ಸಂಸ್ಥೆ ಮತ್ತು ಇತರೆ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್ ಗಳಲ್ಲಿ ಪದಕ ವಿಜೇತರಾದವರನ್ನು ಪರಿಗಣಿಸಲಾಗುವುದು. (ಮಾನ್ಯತೆ ಪಡೆಯದೇ ಇರುವ ಫೆಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಅರ್ಹರಿರುವುದಿಲ್ಲ)
ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಜಿಮ್ ಸ್ಥಾಪನೆಗೆ ಅರ್ಹರಿರುವುದಿಲ್ಲ.
ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟದ ಜೆರಾಕ್ಸ್ ಪ್ರತಿ ಲಗತ್ತಿಸಬೇಕು. (ಹೆಸರು, ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್ ಇರುವ ಪುಟ).
ಜಿಮ್ ಸ್ಥಾಪಿಸಲು ಅರ್ಜಿಯನ್ನು ಸಲ್ಲಿಸಲು ಕ್ರೀಡಾಪಟುಗಳು ಜಿಮ್ ಸ್ಥಾಪಿಸಲು ಸೂಕ್ತವಾದ ಸ್ಥಳವಕಾಶ ಹಾಗೂ ಕಟ್ಟಡದ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವುದು. ಸಂಪೂರ್ಣ ದಾಖಲೆಗಳು ಇಲ್ಲದಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುದಿಲ್ಲ.

ಜಿಮ್ ಸಲಕರಣೆಗಳನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಅಗತ್ಯ ಮಾನವ ಸಂಪನ್ಮೂಲ ಹೊಂದಿರತಕ್ಕದ್ದು.
ಜಿಮ್ ಶಾಲೆ ಸಲಕರಣೆಗಳನ್ನು ಬೇರೆ ಯಾರಿಗೂ ಮಾರುವುದಾಗಲೀ, ಪರಭಾರೆ ಮಾಡುವುದಾಗಲೀ ಮಾಡತಕ್ಕದ್ದಲ್ಲ.

ಅರ್ಜಿದಾರರು ಸ್ಥಳೀಯವಾಗಿ ಯಾವುದೇ ಅಪರಾಧ ಹಿನ್ನೆಲೆ ಉಳ್ಳವರಾಗಿರದ ಬಗ್ಗೆ ಸ್ವಯಂ ದೃಢೀಕರಿಸಿ ಸಲ್ಲಿಸುವುದು.
ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕಕ್ಕೆ 40 ವರ್ಷ ವಯಸ್ಸನ್ನು ಮೀರಿರಬಾರದು.
ಇಲಾಖೆಯ ಅಧಿಕಾರಿಗಳು ಪರಿಶೀಲನೆಗೆ ಬಂದ ಸಂದರ್ಭದಲ್ಲಿ ಸಂಪೂರ್ಣ ವರದಿಯನ್ನು ನೀಡಿ ಸಹಕರಿಸತಕ್ಕದ್ದು.

ಅರ್ಜಿಗಳನ್ನು ಸೆಪ್ಟೆಂಬರ್ 05 ಒಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರಿಗೆ ಸಲ್ಲಿಸುವಂತೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 080-29787443 / 9980590960 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*************************************************************””**”

2023-24 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಕ್ರೀಡಾಪಟು ಗಳಿಂದ ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 18 

ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಇಲಾಖೆಯಿಂದ ಮರುಪಾವತಿ ಮಾಡುವ ಮೂಲಕ ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳ ಅಧಿಕೃತ ಬೋಧನಾ ಶುಲ್ಕಗಳನ್ನು ವಾರ್ಷಿಕ ರೂ.50,000/-ಗಳ ಗರಿಷ್ಟ ಮೊತ್ತಕ್ಕೆ ಮರುಪಾವತಿ ಮಾಡತಕ್ಕದ್ದು, ಇದರಲ್ಲಿ ಕಟ್ಟಡ ಶುಲ್ಕ, ಡೊನೇಷನ್ ನಿರ್ವಹಣಾ ಶುಲ್ಕ, ಕಾರ್ಯಕ್ರಮ ಶುಲ್ಕ ಇನ್ನಿತರ ಶುಲ್ಕಗಳನ್ನು ಪಾವತಿಸಲು ಅವಕಾಶವಿರುವುದಿಲ್ಲ.
ಆಯಾ ವರ್ಷದ ಶೈಕ್ಷಣಿಕ ಶುಲ್ಕವನ್ನು ಹಿಂದಿನ 05 ವರ್ಷಗಳ ಕ್ರೀಡಾ ಸಾಧನೆಯನ್ನು ಪರಿಗಣಿಸಿ ನೀಡಲಾಗುವುದು.

ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪ್ರತಿನಿಧಿಸಿ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್ ಒಳಗೊಂಡಂತೆ) ವ್ಯಾಸಂಗ ಮಾಡುತ್ತಿರುವ ಕೇಂದ್ರ ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಹರಿರುತ್ತಾರೆ.
ಶೈಕ್ಷಣಿಕ ವರ್ಷದ ಶುಲ್ಕ ಪಾವತಿಸಿದ ರಸೀದಿಗಳೊಂದಿಗೆ ಶಾಲಾ ಮುಖ್ಯೋಪಾಧ್ಯಾಯರು / ಕಾಲೇಜು ಪ್ರಾಂಶುಪಾಲರ ಮೂಲಕ ದೃಢೀಕರಿಸಿ ಸಂಬಂಧಪಟ್ಟ ಜಿಲ್ಲೆಯ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಶಿಫಾರಸ್ಸಿನೊಂದಿಗೆ ಸಲ್ಲಿಸತಕ್ಕದ್ದು.

ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರಾದ ಕರ್ನಾಟಕದ ಕ್ರೀಡಾಪಟುಗಳು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವಿಕೆ, ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರ ಸಾಧನೆಯನ್ನು ಪರಿಗಣಿಸಲಾಗುವುದು.
ವಿಕಲಚೇತನ ಕ್ರೀಡಾಪಟುಗಳಿಗೂ ಇದೇ ಮಾನದಂಡ ಅನ್ವಯ ವಾಗುತ್ತದೆ. ಜೊತೆಗೆ ವಿಕಲಚೇತನ ಕ್ರೀಡಾಪಟುಗಳು ಕಡ್ಡಾಯವಾಗಿ ಸರ್ಕಾರಿ ವೈದ್ಯರಿಂದ ನಿಗದಿತ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು.
ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯವನ್ನು ಪ್ರತಿನಿಧಿಸದೇ ಇರುವ ಕ್ರೀಡಾಪಟುಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.

ಕ್ರೀಡಾ ಸಾಧನೆಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ, ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳ ಫೆಡರೇಷನ್ ಆಯೋಜಿಸಿರುವ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಬಗ್ಗೆ, ದಾಖಲಾಗಿರಬೇಕು.
ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸುವ ಆಹ್ವಾನ ಕ್ರೀಡಾಕೂಟಗಳಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗಿರುವುದಿಲ್ಲ.
ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಯಾವ ಕ್ರೀಡಾ ಸಂಸ್ಥೆಯ ಮೂಲಕ ರಾಜ್ಯವನ್ನು ಪ್ರತಿನಿಧಿಸಿರುತ್ತಾರೆ ಎಂಬುದರ ಬಗ್ಗೆ, ಭಾರತ ಸರ್ಕಾರದ ಮಾನ್ಯತೆ ಪಡೆದ ಸಂಬಂಧ ಪಟ್ಟ ಕ್ರೀಡೆಯ ರಾಷ್ಟ್ರೀಯ ಫೆಡರೇಷನ್, ಭಾರತೀಯ ಕ್ರೀಡಾ ಪ್ರಾಧಿಕಾರ ಇವರಿಂದ ಪ್ರಮಾಣೀಕರಿಸಿದ ಮೂಲ ಪತ್ರಗಳನ್ನು ಪರಿಗಣಿಸಿ ಶೈಕ್ಷಣಿಕ ಶುಲ್ಕ, ಮರುಪಾವತಿ ಪಡೆಯಲು ದೃಢೀಕರಣ ಪತ್ರವನ್ನು ಅರ್ಜಿಯ ಜೊತೆಗೆ ಒದಗಿಸಬೇಕು.

ಯಾವುದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸುವ ಕ್ರೀಡಾ ಸ್ಪರ್ಧೆಯಲ್ಲಿ ನೇರ ಪ್ರವೇಶ ಪಡೆದಂತಹ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಶುಲ್ಕ ಪಡೆಯಲು ಅವಕಾಶವಿರುವುದಿಲ್ಲ.
ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯದಿಂದ ಅಧಿಕೃತ ಕ್ರೀಡಾ ಸಂಸ್ಥೆಗಳಿಗೆ ಸಂಘಟಿಸಲಾದ ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ರಾಜ್ಯದ ಕ್ರೀಡಾಪಟುಗಳು ಈ ಯೋಜನೆಗೆ ಅರ್ಹರಿರುತ್ತಾರೆ.

ಒಲಂಪಿಕ್ ಗೇಮ್ /ಪ್ಯಾರಾ ಒಲಂಪಿಕ್ ಗೇಮ್ಸ್
ವರ್ಲ್ಡ್ ಗೇಮ್ಸ್/ಚಾಂಪಿಯನ್ ಷಿಪ್
ಏಷಿಯನ್ ಗೇಮ್ಸ್/ಪ್ಯಾರಾ ಏಷಿಯನ್ ಗೇಮ್ಸ್
ಕಾಮನ್‌ವೇಲ್ತ್ ಗೇಮ್ಸ್
ಏಷಿಯನ್ ಚಾಂಪಿಯನ್ ಷಿಪ್
ಕಾಮನ್‌ವೆಲ್ತ್ ಚಾಂಪಿಯನ್ ಷಿಪ್
ಎಸ್‌ಎಎಫ್ ಗೇಮ್ಸ್
ಮಾನ್ಯತೆ ಹೊಂದಿದ ಅಂತಾರಾಷ್ಟ್ರೀಯ ಕ್ರೀಡಾಕೂಟಗಳು (Non Ranking Competitions)
ರಾಷ್ಟ್ರೀಯ ಕ್ರೀಡಾಕೂಟ
ಸ್ಕೂಲ್ ಗೇಮ್ ಫೆಡರೇಷನ್ ಆಫ್ ಇಂಡಿಯಾ, ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟ
ರಾಷ್ಟ್ರೀಯ ಚಾಂಪಿಯನ್ಷಿಪ್
ವಿಶ್ವವಿದ್ಯಾಲಯ ಕ್ರೀಡಾಕೂಟ
ಅಖಿಲ ಭಾರತ ಅಂತರ ವಲಯ ಕ್ರೀಡಾಕೂಟ
ಭಾರತ ಸರ್ಕಾರದ ಅಂಗೀಕೃತ ಕ್ರೀಡಾ ಫೆಡರೇಷನ್‌ನಿಂದ ಸಂಘಟಿಸಲಾದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳು /ಶಾಲಾ ಮಟ್ಟದ ಚಾಂಪಿಯನ್ ಷಿಪ್ ಖೇಲೋ ಇಂಡಿಯಾ ಕ್ರೀಡಾಕೂಟಗಳು ಕ್ರೀಡೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಈ ಯೋಜನೆ ಜಾರಿಗೊಳಿಸಿ ಅನುಷ್ಠಾನಗೊಳಿಸಬಹುದು.

2023-24 ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ದಿನಾಂಕ : 30.09.2023 ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖಾಂತರ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 080-29787443 / 9980590960 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ.