--Ads--

ಹಾದನೂರು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರಿಂದ ಸಂಸದ ಸುನಿಲ್ ಬೋಸ್ ಅವರಿಗೆ ಮನವಿ

On: October 31, 2026 5:50 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಹಾದನೂರು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸ್ಥರಿಂದ ಸಂಸದ ಸುನಿಲ್ ಬೋಸ್ ಅವರಿಗೆ ಮನವಿ

ತಾಂಡವಪುರ ಅಕ್ಟೋಬರ್ 31 ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾದನೂರು ಗ್ರಾಮದ ಗ್ರಾಮಸ್ಥರು ಸಂಸದ ಸುನಿಲ್ ಬೋಸ್ ರವರನ್ನುಭೇಟಿ ಮಾಡಿ, ಗ್ರಾಮದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.

ಗ್ರಾಮಸ್ಥರ ಮನವಿಯಲ್ಲಿ ಗ್ರಾಮದ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಭೂ ಸಾಗುವಳಿ ಸಮಸ್ಯೆಯನ್ನು ಪರಿಹರಿಸುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಸಂಸದರು, ಅವರ ಬೇಡಿಕೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಸಂಸದರು ಗ್ರಾಮಗಳಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಗ್ರಾಮಸ್ಥರ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಒದಗಿಸಿಕೊಡುವುದೇ ನಮ್ಮ ಮುಖ್ಯ ಕರ್ತವ್ಯ ಆ ದಿಕ್ಕಿನಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿ ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಿಕೊಡುತ್ತೇನೆ ಎಂದು ಸಂಸದ ಸುನಿಲ್ ಬೋಸ್ ರವರು ಹೇಳಿದರು

ಅಲ್ಲದೆ ನಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮೀಣ ಭಾಗದ ಸಮಗ್ರ ಅಭಿವೃದ್ಧಿಗೆ ನನ್ನ ಅನುದಾನವನ್ನು ನೀಡುವ ಜೊತೆಗೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಹೇಳಿದ ಸಂಸದರು ಗ್ರಾಮಗಳ ಅಭಿವೃದ್ಧಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ದಲಿತ ಮುಖಂಡರು ಆದ ಹೆಜ್ಜಿಗೆ ಆರ್ ಇಂದನ್ ಬಾಬು ಹಾಗೂ ಕಾಂಗ್ರೆಸ್ ಮುಖಂಡ ನಾಗರಾಜು ಗುತ್ತಿಗೆದಾರ ಹೆಜ್ಜಿಗೆ ರವಿಕುಮಾರ್ ಹಾಗೂ ಮುಖಂಡರು ಸಾರ್ವಜನಿಕರು ಅಧಿಕಾರಿಗಳು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ತಾಂಡವಪುರ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಪತ್ರಕರ್ತ ಟಿಕೆ ಬಸವರಾಜು ಅವರಿಗೆ ಸನ್ಮಾನ 

ನಂಜನಗೂಡಿನ ಇಂದಿರಾ ಕ್ಯಾಂಟೀನ್‌ಗೆ ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ಊಟ ಸವಿದು ರುಚಿ ಪರಿಶೀಲನೆ 

ನೆಸ್ಲೆ ಪ್ರೈವೇಟ್ ಲಿಮಿಟೆಡ್ ಕಂಪನಿಯ ಸಿಎಸ್‌ಆರ್ (CSR) ನಿಧಿಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು: ಸಂಸದ ಸುನಿಲ್ ಬೋಸ್

ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದೆ ಶಾಸಕ ದರ್ಶನ್ ಧ್ರುವನಾರಾಯಣ್

ನಾಡ ದೇವಿ ತಾಯಿ ಚಾಮುಂಡೇಶ್ವರಿ ದೇವಿಯ ಸಹೋದರಿ ಬನ್ನಿ ಕಾಳಮ್ಮ ತಾಯಿಯ ದೇವಾಲಯ ಅಭಿವೃದ್ಧಿಗೆ ಸಹಕಾರ ನೀಡಿ ಭಕ್ತರ ಕೋರಿಕೆ