--Ads--

18 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿಂಗೇಗೌಡರಿಗೆ ಸಿಬ್ಬಂದಿ ವರ್ಗದಿಂದ ಅಭಿನಂದನೆ

On: November 1, 2026 1:41 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮುಗಬಾಳ ಬೆಸ್ಕಾಂ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

18 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಿಂಗೇಗೌಡರಿಗೆ ಸಿಬ್ಬಂದಿ ವರ್ಗದಿಂದ ಅಭಿನಂದನೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದ ಸಹಾಯಕ ವಿದ್ಯುತ್ ಅಭಿಯಂತರರ ಕಚೇರಿಯಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಕಚೇರಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ತಾಯಿ ಭುವನೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸಿಬ್ಬಂದಿ ವರ್ಗದವರು ಪರಸ್ಪರ ಸಿಹಿ ಹಂಚುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

ಇದೇ ಸಂದರ್ಭದಲ್ಲಿ ಬೆಸ್ಕಾಂ ಇಲಾಖೆಯಲ್ಲಿ ಸತತ 18 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಹಾಯಕ ಇಂಜಿನಿಯರ್ ನಿಂಗೇಗೌಡ ಅವರಿಗೆ ಕಚೇರಿಯ ಸಿಬ್ಬಂದಿ ವರ್ಗದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಇಂಜಿನಿಯರ್ ನಿಂಗೇಗೌಡ ಅವರು ಮಾತನಾಡಿ, ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ಗೌರವಿಸಬೇಕು. ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಿದರು.

WhatsApp

Join Now

Telegram

Join Now

Instagram

Join Now