ವಿಜಯ ದರ್ಪಣ ನ್ಯೂಸ್……
ದೆಹಲಿ ಕರ್ನಾಟಕ ಭವನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತಾಯಿ ಭುವನೇಶ್ವರಿಗ ಪುಷ್ಪಾರ್ಚನೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ದೆಹಲಿ ನವಂಬರ್ 1 : ದೆಹಲಿಯ ಕರ್ನಾಟಕ ಭವನದ ಆವರಣದಲ್ಲಿ ಇಂದು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಿ ನಾಡದೇವತೆ ಕನ್ನಡಾಂಬೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಲವು ಸಮಯ ವಿದ್ಯಾರ್ಥಿಗಳ ಜೊತೆ ಸಮಯ ಕಳೆದು ಕನ್ನಡದ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ದೆಹಲಿಯಲ್ಲಿ ರಾಜ್ಯ ಸರ್ಕಾರದ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕರ್ನಾಟಕ ಭವನದ ನಿವಾಸಿ ಆಯುಕ್ತ ಸಮೀರ್ ಶುಕ್ಲ, ಸಹಾಯಕ ಆಯುಕ್ತ ಮೋಹನ್ ಸೇರಿದಂತೆ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಸಮಿತಿಯ ರಾಜ್ಯಾಧ್ಯಕ್ಷ ಮಾಜಿ ಸಚಿವ ಎಚ್ ಎಮ್ ರೇವಣ್ಣ ಶಾಸಕರಾದ ಕೋನ ರೆಡ್ಡಿ, ಐವನ್ ಡಿಸೋಜ ಸೇರದಂತೆ ಶಾಸಕರು ಸಂಸದರು, , ಭವನದ ಸಿಬ್ಬಂದಿ ವರ್ಗ ಮತ್ತವರ ಕುಟುಂಬದವರು ಪಾಲ್ಗೊಂಡು ಕನ್ನಡ ರಾಜ್ಯೋತ್ಸವದ ಕನ್ನಡ ಹಬ್ಬದ ಸಂಭ್ರಮ ಸಂಭ್ರಮಿಸಿದರು











