ವಿಜಯ ದರ್ಪಣ ನ್ಯೂಸ್…….
ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಹೆಚ್.ಎಂ.ಟಿ. ಕನ್ನಡಿಗ ಕೈಗಡಿಯಾರದ ಲೋಕಾರ್ಪಣೆ!

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಹೆಚ್.ಎಂ.ಟಿ. ಕನ್ನಡಿಗ ಕೈಗಡಿಯಾರಗಳ ಸಮರ್ಪಣಾ ಹಾಗೂ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ, ಮಾನ್ಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾನ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ, ಸಂಸದ ಡಾ. ಸಿ.ಎನ್. ಮಂಜುನಾಥ್, ಶಾಸಕರು, ವಿಧಾನ ಪರಿಷತ್ ಸದಸ್ಯರು, ಗಣ್ಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ, ನೂತನ ಕನ್ನಡಿಗ ಕೈಗಡಿಯಾರವನ್ನು ಲೋಕಾರ್ಪಣೆ ಗೊಳಿಸಲಾಯಿತು.
ಕನ್ನಡ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಕನ್ನಡಿಗರ ಹೆಮ್ಮೆಯನ್ನು ಪ್ರತಿಬಿಂಬಿಸುವ ಇಂತಹ ವಿಶೇಷ ಪ್ರಯತ್ನಗಳು ನಮ್ಮ ನಾಡಿನ ಸ್ವಾಭಿಮಾನವನ್ನು ಮತ್ತಷ್ಟು ಎತ್ತರಕ್ಕೇರಿಸಲಿ.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಜೈ ಕರ್ನಾಟಕ! ಜೈ ಕನ್ನಡಾಂಬೆ!







