ವಿಜಯ ದರ್ಪಣ ನ್ಯೂಸ್…..
ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು : ಶಾಸಕ ಬಿ.ಎನ್.ರವಿಕುಮಾರ್

ಶಿಡ್ಲಘಟ್ಟ : ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಆದ್ಯತೆ ನೀಡುವುದರಿಂದ, ಸ್ಥಳೀಯ ಉತ್ಪಾದನೆಗೆ ಬಲ ಸಿಗಲಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ಮೇಲೂರಿನ ಶಾಸಕರ ಸ್ವಗೃಹದ ಕಛೇರಿಯಲ್ಲಿ
ತಾಲ್ಲೂಕಿನಾದ್ಯಂತ ಹಾಸ್ಟೆಲ್ ಗಳಿಗೆ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ
ಉತ್ಪನ್ನ ಕಿಟ್ ಗಳನ್ನು ವಿತರಿಸಿ ಅವರು ಮಾತನಾಡಿದರು.
ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಹಾಗೂ ಅವರ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡುವ ಕೆಲಸ ಆಗಬೇಕು ಎಂದು ಹೇಳಿದರು.
ಮಹಿಳೆಯರು ತಮ್ಮ ಆರ್ಥಿಕ ಚಟುವಟಿಕೆಗಳನ್ನು ವಿಸ್ತರಿಸಿ ಆದಾಯ ಹೆಚ್ಚಿಸಿಕೊಳ್ಳಲು ಮತ್ತು ತಮ್ಮ ಉತ್ಪನ್ನಗಳಿಗೆ ವಿಶಾಲ ಮಾರುಕಟ್ಟೆಯನ್ನು ಕಂಡುಕೊಳ್ಳಲು ಈ ಯೋಜನೆ ಸಹಕಾರಿಯಾಗಲಿದೆ ಎಂದರು.
ಈ ವೇಳೆ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ಆರ್. ಹೇಮಾವತಿ, ಕಾರ್ಯಕ್ರಮ ವ್ಯವಸ್ಥಾಪಕ ವಿಜಯ್ ಕುಮಾರ್, ಬ್ಲಾಕ್ ಮ್ಯಾನೇಜರ್ ನರಸಿಂಹ, ವಲಯ ಮೇಲ್ವಿಚಾರಕ ಬಾಲರಾಜು, ಸ್ವಸಹಾಯ ಸಂಘದ ಸದಸ್ಯೆ ರುಕ್ಕಿಣಿ, ಎಂ.ಬಿ.ಕೆ.ಗಳಾದ ಚೈತ್ರಾ, ಶಿಲ್ಪಾ, ನಾಗರತ್ನ ಹಾಗೂ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ ಹಾಜರಿದ್ದರು.











