--Ads--

ರಿಲಯನ್ಸ್ ಸಿಪಿಸಿಯಲ್ಲಿ ನಾಲ್ಕನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮ – ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಣೆ

On: November 3, 2026 1:54 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ರಿಲಯನ್ಸ್ ಸಿಪಿಸಿಯಲ್ಲಿ ನಾಲ್ಕನೇ ವರ್ಷದ ಕನ್ನಡ ರಾಜ್ಯೋತ್ಸವ ಸಂಭ್ರಮ – ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ಏಕರಾಜಪುರದಲ್ಲಿರುವ ರಿಲಯನ್ಸ್ ಸಿಪಿಸಿ ವತಿಯಿಂದ ಸತತ ನಾಲ್ಕನೇ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಕಂಪನಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಇತಿಹಾಸಕಾರರು ಹಾಗೂ ಲೇಖಕರಾದ ಧರ್ಮೇಂದ್ರ ಕುಮಾರ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಸಾರುವ ನಿಟ್ಟಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿತ್ತು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇತಿಹಾಸಕಾರರು ಹಾಗೂ ಲೇಖಕರಾದ ಧರ್ಮೇಂದ್ರ ಕುಮಾರ್ ಅವರು, ಇಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳಲ್ಲಿ ಹೊರರಾಜ್ಯಗಳ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಹೊರರಾಜ್ಯದ ಹಿನ್ನೆಲೆಯುಳ್ಳ ರಿಲಯನ್ಸ್ ಸಂಸ್ಥೆಯು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಸತತ ನಾಲ್ಕು ವರ್ಷಗಳಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಕನ್ನಡಪರ ಕಾರ್ಯಕ್ರಮಗಳು ಇತರ ಖಾಸಗಿ ಕಂಪನಿಗಳಿಗೂ ಮಾದರಿಯಾಗಬೇಕು ಎಂದು ತಿಳಿಸಿದರು.

ಇದೇ ವೇಳೆ ಕನ್ನಡ ರಾಜ್ಯೋತ್ಸವದ ಇತಿಹಾಸ, ಕರ್ನಾಟಕ ಏಕೀಕರಣದ ಹೋರಾಟ, ಕನ್ನಡ ನಾಡಿನ ಹೆಮ್ಮೆಯ ಪರಂಪರೆ ಹಾಗೂ ಕನ್ನಡ ಧ್ವಜದ ಮಹತ್ವದ ಕುರಿತು ವಿವರವಾಗಿ ಮಾತನಾಡಿದರು. ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಕನ್ನಡಿಗರು ತಮ್ಮ ನಾಡು-ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ಮುಂದಿನ ಪೀಳಿಗೆಗೂ ಕನ್ನಡದ ಮಹತ್ವವನ್ನು ಪರಿಚಯಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯುವ ಕರ್ನಾಟಕ ವೇದಿಕೆಯ ಚಾಲಕ ಘಟಕದ ಅಧ್ಯಕ್ಷರಾದ ಚಂದನ್ ಗೌಡ ಅವರು ಮಾತನಾಡಿ, ಕನ್ನಡ ರಾಜ್ಯೋತ್ಸವ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ಜೀವನದಲ್ಲೂ ಕನ್ನಡ ಭಾಷೆಯ ಬಳಕೆ ಹಾಗೂ ಕನ್ನಡದ ಮೇಲಿನ ಅಭಿಮಾನ ನಿರಂತರವಾಗಿ ಮುಂದುವರಿಯಬೇಕು. ಖಾಸಗಿ ಸಂಸ್ಥೆಗಳು ಕನ್ನಡ ರಾಜ್ಯೋತ್ಸವವನ್ನು ಇಷ್ಟೊಂದು ಸಂಭ್ರಮದಿಂದ ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದರಾದ ಡಿಂಗ್ರಿ ನರೇಶ್, ಚಿಕ್ಕಬಳ್ಳಾಪುರದ ಹಾಸ್ಯ ಕಲಾವಿದರಾದ ಮಂಜಣ್ಣ ಹಾಗೂ ರೂಪ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ರಿಲಯನ್ಸ್ ಸಿಪಿಸಿ ಕಂಪನಿಯ ಸಿಬ್ಬಂದಿ, ಸ್ಥಳೀಯ ಗಣ್ಯರು ಹಾಗೂ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp

Join Now

Telegram

Join Now

Instagram

Join Now