--Ads--

ಜವನಗೊಂಡಹಳ್ಳಿ ಹೋಬಳಿಯ ಜಲಮೂಲಗಳು (16 ಕೆರೆಗಳು) ಮತ್ತು ಗಾಯಿತ್ರಿ ಜಲಾಶಯಕ್ಕೆ ಕುಡಿಯುವ ನೀರು ತುಂಬಿಸುವ ಅಂತರ್ಜಲ ಅಭಿವೃದ್ಧಿ ಯೋಜನೆಯ ಕಾಮಗಾರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೂಮಿ ಪೂಜೆ

On: November 3, 2026 2:09 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಜವನಗೊಂಡಹಳ್ಳಿ ಹೋಬಳಿಯ ಜಲಮೂಲಗಳು (16 ಕೆರೆಗಳು) ಮತ್ತು ಗಾಯಿತ್ರಿ ಜಲಾಶಯಕ್ಕೆ ಕುಡಿಯುವ ನೀರು ತುಂಬಿಸುವ ಅಂತರ್ಜಲ ಅಭಿವೃದ್ಧಿ ಯೋಜನೆಯ ಕಾಮಗಾರಿಗೆ ಸಿಎಂ ಡಿಕೆ ಶಿವಕುಮಾರ್ ಭೂಮಿ ಪೂಜೆ

ತಾಂಡವಪುರ ನವೆಂಬರ್ 3 ಸಣ್ಣ ನೀರಾವರಿ ಇಲಾಖೆ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಹಿರಿಯೂರು ತಾಲ್ಲೂಕು ಜವನಗೊಂಡಹಳ್ಳಿ ಹೋಬಳಿಯ ಜಲಮೂಲಗಳು (16 ಕೆರೆಗಳು) ಮತ್ತು ಗಾಯಿತ್ರಿ ಜಲಾಶಯಕ್ಕೆ ಕುಡಿಯುವ ನೀರು ತುಂಬಿಸುವ ಅಂತರ್ಜಲ ಅಭಿವೃದ್ಧಿ ಯೋಜನೆಯ ಕಾಮಗಾರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೂಮಿ ಪೂಜೆ ನೆರವೇರಿಸಿದರು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಹಿರಿಯೂರಿನ ದಿಂಡಾವರ ಪ್ರೌಢ ಶಾಲೆ ಆವರಣದಲ್ಲಿ ನಡೆದ ಹಿರಿಯೂರು ತಾಲ್ಲೂಕು ಜವನಗೊಂಡಹಳ್ಳಿ ಹೋಬಳಿಯ ಜಲಮೂಲಗಳು (16 ಕೆರೆಗಳು) ಮತ್ತು ಗಾಯಿತ್ರಿ ಜಲಾಶಯಕ್ಕೆ ಕುಡಿಯುವ ನೀರು ತುಂಬಿಸುವ ಹಾಗೂ ಅಂತರ್ಜಲ ಅಭಿವೃದ್ಧಿ ಯೋಜನೆಯ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ರಾಜ್ಯ ನಾಗರಾಭಿವೃದ್ಧಿ ಸಚಿವ ಡಾ. ಎಸ್ ಯತೀಂದ್ರ ಸಿದ್ದರಾಮಯ್ಯನವರು ಭಾಗಿಯಾಗಿ ಮಾತನಾಡಿ ಈ ಯೋಜನೆಯು ಜಲಮೂಲಗಳ ಪುನಶ್ಚೇತನ, ಅಂತರ್ಜಲ ಮಟ್ಟದ ಸುಧಾರಣೆ ಹಾಗೂ ಜನರಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಕೊಡುಗೆ ನೀಡಲಿದೆ. ಎಂದು ಹೇಳಿದ ಸಚಿವರು ಗ್ರಾಮೀಣ ಭಾಗದ ಜನರ ನೀರಿನ ಬವಣೆಯನ್ನು ನೀಗಿಸಿ, ಕೃಷಿ ಚಟುವಟಿಕೆಗಳಿಗೆ ಪೂರಕವಾದ ಜಲಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು

ಈ ಸಮಾರಂಭದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಟಿ. ರಘುಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೆ.ಎಚ್. ಮುನಿಯಪ್ಪ, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಈಶ್ವರ ಖಂಡ್ರೆ, ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೆ.ಎಸ್. ಬಸವಂತಪ್ಪ, ಸಣ್ಣ ನೀರಾವರಿ ಹಾಗು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಅಜಯ್ ಸಿಂಗ್, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕ ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಮಾಜಿ ಶಾಸಕಿ  ಪೂರ್ಣಿಮಾ ಶ್ರೀನಿವಾಸ್ ಹಾಗೂ ಶಾಸಕರು ಮುಖಂಡರುಗಳು ವಿವಿಧ ಇಲಾಖೆ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

WhatsApp

Join Now

Telegram

Join Now

Instagram

Join Now