ವಿಜಯ ದರ್ಪಣ ನ್ಯೂಸ್…….
ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ನ.03
ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀ ಪಂಕಜ್ ಕುಮಾರ್ ಪಾಂಡೆ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡಿ, ಜಲ ಜೀವನ್ ಮಿಷನ್, ವಿಬಿ ಜಿ ರಾಮ್ ಜಿ ಯೋಜನೆ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಹಾಗೂ ಇಲಾಖೆಯಡಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಕುಂದಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ, ಜಲ ಜೀವನ್ ಮಿಷನ್ ಒವೆರ್ ಹೆಡ್ ಟ್ಯಾಂಕಿಂನಿಂದ ನೀರಿನ ಸರಬರಾಜು ಹಾಗೂ ವಿದ್ಯುತ್ ಸಂಪರ್ಕವನ್ನು ಪರಿಶೀಲಿಸಿದರು. ಬಳಿಕ ಸ್ಥಳೀಯರಿಂದ ಕುಡಿಯುವ ನೀರು ಸರಬರಾಜು ಬಗ್ಗೆ ಮಾಹಿತಿ ಪಡೆದರು.
ನಲ್ ಜಲ್ ಸಿಬ್ಬಂದಿಯ ತರಬೇತಿ ಮತ್ತು ಕಾರ್ಯನಿರ್ವಹಣೆ ಕುರಿತು ಮಾಹಿತಿಯನ್ನು ಪಡೆದರು. ಬಳಿಕ ವಿವಿಧ ಭಾಗಗಳಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ವೈಯಕ್ತಿಕ ಕಾಮಗಾರಿಯನ್ನು ಪರಿಶೀಲಿಸಿ , ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ FSTP ಘಟಕ, ಅರಿವು ಕೇಂದ್ರಕ್ಕೆ ಭೇಟಿ ,NRLM ನ ಗ್ರಾ ಪಂ ಮಟ್ಟದ ಒಕ್ಕೂಟ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಬರಗಾಲ ನಿರ್ವಹಣೆ ಭಾಗವಾಗಿ ಜಾನುವಾರು ಗಳಿಗಾಗಿ ಮೇವು ಬೆಳೆದ ಸ್ಥಳಕ್ಕೆ ಭೇಟಿ ನೀಡಿ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತರಾದ ಫೌಝಿಯ ತರುನ್ನುಮ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಸಂತಿ ಅಮರ್, ಉಪ ಕಾರ್ಯದರ್ಶಿ ಶಿವಕುಮರ್, ಇಒ ಮುನಿರಾಜು, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.










