ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ.

ವಿಜಯ ದರ್ಪಣ ನ್ಯೂಸ್

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಆಗಸ್ಟ್ 19 

2023-24 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಅಂತರರಾಷ್ಟ್ರೀಯ / ರಾಷ್ಟ್ರೀಯ/ರಾಜ್ಯ ಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾಪಟುಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು.
ಪ್ರೋತ್ಸಾಹಧನವನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡುವುದು.
ಅಂತರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕಾರವಾದಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು.
ಕ್ರೀಡಾಪಟುಗಳು ಕರ್ನಾಟಕ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾತಂಡವನ್ನು (Services Airlines Railways) ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ.
ಸರ್ಕಾರಿ /ಅರೆ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವವರು ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಾಗೂ ಪದಕ ಪಡೆದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಉಳಿದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕ ಪಡೆದಿರುವವರು ಅರ್ಹರಿರುವುದಿಲ್ಲ.
ಕ್ರೀಡಾಪಟುಗಳು ಆಧಾರ್ ಕಾರ್ಡ್, ಪಡಿತರ ಚೀಟಿ (ration card, ಹಾಗೂ ಆರ್.ಡಿ. ಸಂಖ್ಯೆಯನ್ನು ಒಳಗೊಂಡ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು.
ಒಲಂಪಿಕ್ಸ್/ಏಷ್ಯನ್/ಕಾಮನ್ ವೆಲ್ತ್ ಕ್ರೀಡೆಗಳಲ್ಲಿ, ಅಂತರಾಷ್ಟ್ರೀಯ ಸಂಸ್ಥೆ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿಂದ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್ ಗಳಿಗೆ ಮಾತ್ರ ಪ್ರೋತ್ಸಾಹಧನ ನೀಡಲಾಗುವುದು.
(ಮಾನ್ಯತೆ ಪಡೆಯದೇ ಇರುವ ಯಾವುದೇ ಫೆಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಹರಾಗಿರುವುದಿಲ್ಲ.)
6ನೇ ತರಗತಿಯಿಂದ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಹರಾಗಿರುವುದಿಲ್ಲ.
ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟವನ್ನು ಲಗತ್ತಿಸಬೇಕು (ಹೆಸರು, ಖಾತೆ ಸಂಖ್ಯೆ, IFSC ಸಂಖ್ಯೆ ಇರುವ ಸಂಪೂರ್ಣ ವಿವರಗಳನ್ನೊಳಗೊಂಡ ಪ್ರತಿ).
ಹಿಂದಿನ ಕ್ಯಾಲೆಂಡರ್ ವರ್ಷದ ಕ್ರೀಡಾ ಸಾಧನೆಯನ್ನು ಮಾತ್ರ ಪರಿಗಣಿಸಿ ಪ್ರಸಕ್ತ ಸಾಲಿನ ಪ್ರೋತ್ಸಾಹಧನವನ್ನು ಪಾವತಿಸಲಾಗುವುದು.
ಒಂದು ವರ್ಷದಲ್ಲಿ, ಒಂದಕ್ಕಿಂತ ಹೆಚ್ಚಿನ ಯಾವುದೇ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದರೂ ಕೂಡ ಒಂದು ಅತ್ಯುತ್ತಮ ಸಾಧನೆಗಳಿಗೆ ಮಾತ್ರ ಪ್ರೋತ್ಸಾಹಧನವನ್ನು ಪಾವತಿಸಲಾಗುವುದು.
2023-24 ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ / ರಾಷ್ಟ್ರೀಯ/ರಾಜ್ಯ ಮಟ್ಟದ ಅಧಿಕೃತ ಕ್ರೀಡೆಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ ಅರ್ಜಿಗಳನ್ನು ದಿನಾಂಕ : 05.09.2023 ರ ಒಳಗಾಗಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖಾಂತರ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 080-29787443 / 9980590960 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. 

,!!!!!!!!!!!!!!!;;;;;;;;;;;;;;!!!!!!!!!!!!!!!!!!!!!!!!!!!!!!!!!!!!!!!!!!!!!!!!!!!!!!;;!;;;;!!!!!!!!!!!?!!;;;;;;;;;!!!!!!

ಯಂತ್ರ /ಉಪಕರಣಗಳನ್ನು ಖರೀದಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 19

 2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ 1). ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ಮಾವು, ಬಾಳೆ, ಸೀಬೆ, ಹೈಬ್ರಿಡ್ ತರಕಾರಿ ), 2). ರೋಗ ಮತ್ತು ಕೀಟ ನಿಯಂತ್ರಣ, 3). ಪ್ಲಾಸ್ಟಿಕ್ ಹೊದಿಕೆ, 4). ಹಸಿರುಮನೆ ನಿರ್ಮಾಣ, 5). ಶೇಡ್ ನೆಟ್ ಹೌಸ್ 6). ವೈಯಕ್ತಿಕ ಕೃಷಿಹೊಂಡ,

7).ಪ್ಯಾಕ್ ಹೌಸ್ ಹಾಗೂ 8). ಯಂತ್ರ/ಉಪಕರಣಗಳನ್ನು ಖರೀದಿಸಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.
2023-24 ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು 2023 ರ ಆಗಸ್ಟ್ 31 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು. ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ತಾಲ್ಲೂಕಿನ ರೈತರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.
ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು
ದೂರವಾಣಿ ಸಂಖ್ಯೆ
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ),ನೆಲಮಂಗಲ.
9880461607

ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾ.ಸ), ನೆಲಮಂಗಲ.
9902581832

ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ
7337866626

ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ
8884829971

ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ
8197655732 ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

%%%%%%%%%%%%%%%%%%%%%%%%%%%%%%%%%%%%%%%%%%%%

ಪಿ.ಇ.ಎಂ.ಎಸ್, ಮತ್ತು ಆರ್ ಆಕ್ಟ್ 2013 ರ ಅನುಷ್ಠಾನ ಸಮಿತಿ ಸದಸ್ಯರಾಗಲು ಅರ್ಜಿ ಅಹ್ವಾನ.

ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 19

ಪಿ.ಇ.ಎಂ.ಎಸ್ ಮತ್ತು ಆರ್ ಆಕ್ಟ್ 2013 ರ ಅನುಷ್ಟಾನ ಸಮಿತಿಯನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ಪುನರ್ ರಚಿಸಬೇಕಾಗಿರುತ್ತದೆ. ಅದರಂತೆ ಮಲ ಹೊರುವ ಪದ್ಧತಿಯನ್ನು ತಡೆಗಟ್ಟಲು ಹಾಗೂ ಅವರಿಗೆ ಪುನರ್ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಸಂಸ್ಥೆಗಳ ನಾಲ್ಕು ಸಮಾಜ ಸೇವಕರುಗಳನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲು ದಿನಾಂಕ:28-08-2023 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ.

ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿಯನ್ನು ತಡೆಗಟ್ಟಲು ಹಾಗೂ ಸದರಿಯವರಿಗೆ ಪುನರ್ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಿ ಗಣನೀಯ ಸೇವೆ ಸಲ್ಲಿಸುತ್ತಿರುವ ಆಸಕ್ತ ಸಮಾಜ ಸೇವಕರುಗಳು ಪಿ.ಇ.ಎಂ.ಎಸ್, ಮತ್ತು ಆರ್ ಆಕ್ಟ್ 2013 ರ ಅನುಷ್ಠಾನ ಸಮಿತಿ ಸದಸ್ಯರಾಗಲು ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ 2023 ರ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.